IND vs AUS: ಸೋತ ತಂಡವನ್ನೇ ಕಣಕ್ಕಿಳಿಸಿದ ಟೀಮ್ ಇಂಡಿಯಾ
Australia vs India, 2nd ODI: ಭಾರತ ಮತ್ತು ಆಸ್ಟ್ರೇಲಿಯಾ ಈವರೆಗೆ 153 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 58 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದರೆ, ಆಸ್ಟ್ರೇಲಿಯಾ 85 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ಕಳೆದ ಕೆಲ ವರ್ಷಗಳಿಂದ ಆಸೀಸ್ ಪಡೆ ವಿರುದ್ಧ ಟೀಮ್ ಇಂಡಿಯಾ ಮೇಲುಗೈ ಸಾಧಿಸುತ್ತಾ ಬಂದಿದೆ. ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಭಾರತೀಯ ಪಡೆಯಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
Updated on: Oct 23, 2025 | 8:39 AM

India vs Australia 2nd ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುರುವಾಗಿದೆ. ಅಡಿಲೇಡ್ನ ಓವಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಪರ್ತ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾ ಪಾಲಿಗೆ ಈ ಮ್ಯಾಚ್ ನಿರ್ಣಾಯಕ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಅತ್ತ ಆಸ್ಟ್ರೇಲಿಯಾ ತಂಡ ಗೆದ್ದರೆ 2-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಅದರಲ್ಲೂ ಕಳೆದ ಮ್ಯಾಚ್ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಅಬ್ಬರಿಸುವ ನಿರೀಕ್ಷೆಯಿದೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅಂದರೆ ಪರ್ತ್ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಆಟಗಾರರಿಗೆ ಮತ್ತೆ ಅವಕಾಶ ನೀಡಲಾಗಿದೆ. ಅದರಂತೆ ಇಂದಿನ ಮ್ಯಾಚ್ನಲ್ಲಿ ಕಣಕ್ಕಿಳಿಯಲಿರುವ ಉಭಯ ತಂಡಗಳ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್.

ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹೇಝಲ್ವುಡ್.
