
India vs Australia 2nd ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುರುವಾಗಿದೆ. ಅಡಿಲೇಡ್ನ ಓವಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಪರ್ತ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾ ಪಾಲಿಗೆ ಈ ಮ್ಯಾಚ್ ನಿರ್ಣಾಯಕ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಅತ್ತ ಆಸ್ಟ್ರೇಲಿಯಾ ತಂಡ ಗೆದ್ದರೆ 2-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಅದರಲ್ಲೂ ಕಳೆದ ಮ್ಯಾಚ್ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಅಬ್ಬರಿಸುವ ನಿರೀಕ್ಷೆಯಿದೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅಂದರೆ ಪರ್ತ್ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಆಟಗಾರರಿಗೆ ಮತ್ತೆ ಅವಕಾಶ ನೀಡಲಾಗಿದೆ. ಅದರಂತೆ ಇಂದಿನ ಮ್ಯಾಚ್ನಲ್ಲಿ ಕಣಕ್ಕಿಳಿಯಲಿರುವ ಉಭಯ ತಂಡಗಳ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್.

ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹೇಝಲ್ವುಡ್.