IND vs AUS 2nd Test: ತಂಡದಿಂದ ಸ್ಟಾರ್ ಆಟಗಾರನನ್ನು ಕೈಬಿಟ್ಟ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Feb 12, 2023 | 8:31 PM

India vs Australia 2nd Test: ಆಸೀಸ್ ವಿರುದ್ಧದ ಮೊದಲೆರಡು ಟೆಸ್ಟ್​ ಪಂದ್ಯಗಳಿಗೆ ಆಯ್ಕೆಯಾಗಿದ್ದ ಉನಾದ್ಕತ್ ಅವರಿಗೆ ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ಅವಕಾಶ ಸಿಕ್ಕಿರಲಿಲ್ಲ.

1 / 6
ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಫೆಬ್ರವರಿ 17 ರಿಂದ ಶುರುವಾಗಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ವೇಗಿಯನ್ನು ತಂಡದಿಂದ ಕೈ ಬಿಡಲಾಗಿದೆ.

2 / 6
ಹೌದು, ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯದಿಂದ ಎಡಗೈ ವೇಗಿ ಜಯದೇವ್ ಉನಾದ್ಕತ್ ಕೈ ಬಿಡಲಾಗಿದೆ. ಅಲ್ಲದೆ ಅವರಿಗೆ ರಣಜಿ ಟ್ರೋಫಿ ಆಡುವಂತೆ ಬಿಸಿಸಿಐ ಸೂಚಿಸಿದೆ.

3 / 6
ಆಸೀಸ್ ವಿರುದ್ಧದ ಮೊದಲೆರಡು ಟೆಸ್ಟ್​ ಪಂದ್ಯಗಳಿಗೆ ಆಯ್ಕೆಯಾಗಿದ್ದ ಉನಾದ್ಕತ್ ಅವರಿಗೆ ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ದೆಹಲಿಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಲ್ಲೂ ಚಾನ್ಸ್ ಸಿಗುವುದು ಅನುಮಾನ. ಹೀಗಾಗಿ ಅವರಿಗೆ ರಣಜಿ ಟೂರ್ನಿ ಫೈನಲ್ ಆಡಲು ತಿಳಿಸಲಾಗಿದೆ.

4 / 6
ಪ್ರಸ್ತಕ ಸಾಲಿನ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಸೋಲಿಸಿ ಸೌರಾಷ್ಟ್ರ ತಂಡ ಫೈನಲ್​ಗೆ ಪ್ರವೇಶಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಗೆ ಆಯ್ಕೆಯಾಗುವ ಮುನ್ನ ಸೌರಾಷ್ಟ್ರ ತಂಡವನ್ನು ಜಯದೇವ್ ಉನಾದ್ಕತ್ ಮುನ್ನಡೆಸಿದ್ದರು.

5 / 6
ಇದೀಗ ತಂಡವು ಫೈನಲ್ ಪ್ರವೇಶಿಸಿದ್ದು, ಹೀಗಾಗಿ ಅಂತಿಮ ಹಣಾಹಣಿಯಲ್ಲಿ ತಂಡವನ್ನು ಮುನ್ನಡೆಸುವಂತೆ ತಿಳಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಜಯದೇವ್ ಉನಾದ್ಕತ್ ಕಾಣಿಸಿಕೊಳ್ಳುವುದಿಲ್ಲ.

6 / 6
ಬದಲಾಗಿ ಫೆಬ್ರವರಿ 16 ರಂದು ನಡೆಯಲಿರುವ ರಣಜಿ ಫೈನಲ್ ಪಂದ್ಯದಲ್ಲಿ ಬಂಗಾಳ ವಿರುದ್ಧ ಸೌರಾಷ್ಟ್ರ ತಂಡದ ನಾಯಕರಾಗಿ ಜಯದೇವ್ ಉನಾದ್ಕತ್ ಕಾಣಿಸಿಕೊಳ್ಳಲಿದ್ದಾರೆ.

Published On - 8:29 pm, Sun, 12 February 23