- Kannada News Photo gallery Cricket photos India vs Australia 3rd ODI: ಇಬ್ಬರನ್ನು ಕೈಬಿಡುವ ಸಾಧ್ಯತೆ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
India vs Australia 3rd ODI: ಇಬ್ಬರನ್ನು ಕೈಬಿಡುವ ಸಾಧ್ಯತೆ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
India Playing XI: ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ವಿಫಲವಾಗಿತ್ತು.
Updated on: Mar 21, 2023 | 11:08 PM

India vs Australia 3rd ODI: ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ಬುಧವಾರ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ವಶಪಡಿಸಿಕೊಳ್ಳಲಿದೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿತ್ತು. ಇದೀಗ 3ನೇ ಪಂದ್ಯದಲ್ಲಿ ಗೆಲ್ಲುವ ತಂಡವು ಟ್ರೋಫಿ ಎತ್ತಿ ಹಿಡಿಯಲಿದೆ.

ಇತ್ತ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ವಿಫಲವಾಗಿತ್ತು. ಅದರಲ್ಲೂ ಸೂರ್ಯಕುಮಾರ್ ಯಾದವ್ 2 ಪಂದ್ಯಗಳಲ್ಲೂ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈ ಬಿಟ್ಟರೆ ಇಶಾನ್ ಕಿಶನ್ಗೆ ಚಾನ್ಸ್ ಸಿಗಬಹುದು. ಹಾಗೆಯೇ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕುಲ್ದೀಪ್ ಯಾದವ್ ಬದಲಿಗೆ ಚೆನ್ನೈ ಮೂಲದ ಸ್ಪಿನ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಈ 2 ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯಬಹುದು. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

ರೋಹಿತ್ ಶರ್ಮಾ

ಶುಭ್ಮನ್ ಗಿಲ್

ವಿರಾಟ್ ಕೊಹ್ಲಿ

ಇಶಾನ್ ಕಿಶನ್

ಕೆಎಲ್ ರಾಹುಲ್

ಹಾರ್ದಿಕ್ ಪಾಂಡ್ಯ

ರವೀಂದ್ರ ಜಡೇಜಾ

ಮೊಹಮ್ಮದ್ ಸಿರಾಜ್

ವಾಷಿಂಗ್ಟನ್ ಸುಂದರ್

ಮೊಹಮ್ಮದ್ ಶಮಿ

ಅಕ್ಷರ್ ಪಟೇಲ್

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.



















