- Kannada News Photo gallery Cricket photos India vs Australia 3rd Test : Cameron Green And Mitchell Starc set to return zp
IND vs AUS 3rd Test: ಆಸ್ಟ್ರೇಲಿಯಾ ತಂಡಕ್ಕೆ ಇಬ್ಬರು ಸ್ಟಾರ್ ಆಟಗಾರರ ಕಂಬ್ಯಾಕ್
India vs Australia 3rd Test : ಆಸ್ಟ್ರೇಲಿಯಾ ಟೆಸ್ಟ್ ತಂಡ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ.
Updated on: Feb 28, 2023 | 6:33 PM

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಮಾರ್ಚ್ 1 ರಿಂದ ಶುರುವಾಗಲಿದೆ. ಇಂದೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ಈ ಪಂದ್ಯವು ಆಸ್ಟ್ರೇಲಿಯಾ ತಂಡದ ಪಾಲಿಗೆ ಸರಣಿ ನಿರ್ಣಾಯಕ. ಅಂದರೆ 4 ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

ಇದೀಗ ಮೂರನೇ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು. ಮತ್ತೊಂದೆಡೆ ಈ ಸರಣಿಯನ್ನು ಡ್ರಾನಲ್ಲಿ ಅಂತ್ಯಗೊಳಿಸಬೇಕಿದ್ದರೆ ಆಸ್ಟ್ರೇಲಿಯಾ ತಂಡವು 3ನೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು. ಇಂತಹ ಸಂದಿಗ್ಥ ಪರಿಸ್ಥಿತಿಯಲ್ಲಿ ಆಸೀಸ್ ಪಡೆಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ.

ಹೌದು, ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಗಾಯದ ಕಾರಣ ಕಣಕ್ಕಿಳಿಯದಿದ್ದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಇಂದೋರ್ನಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ಸ್ಟಾರ್ಕ್ ಆಗಮನದೊಂದಿಗೆ ಆಸ್ಟ್ರೇಲಿಯಾ ತಂಡದ ಬೌಲಿಂಗ್ ವಿಭಾಗ ಬಲಿಷ್ಠವಾಗಲಿದೆ.

ಇದರ ಜೊತೆಗೆ ಗಾಯದಿಂದ ಬಳಲುತ್ತಿದ್ದ ಯುವ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಕೂಡ 3ನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಿರಲಿದ್ದಾರೆ. ಇದಕ್ಕೂ ಮುನ್ನ ಬೆರಳಿನ ಗಾಯದ ಕಾರಣ ಗ್ರೀನ್ ನಾಗ್ಪುರ ಹಾಗೂ ದೆಹಲಿ ಟೆಸ್ಟ್ನಲ್ಲಿ ಆಡಿರಲಿಲ್ಲ.

ಇದೀಗ ಮಿಚೆಲ್ ಸ್ಟಾರ್ಕ್ ಹಾಗೂ ಕ್ಯಾಮರೋನ್ ಗ್ರೀನ್ ಅವರ ಆಗಮನವು ಆಸ್ಟ್ರೇಲಿಯಾ ತಂಡವನ್ನು ತುಸು ಬಲಿಷ್ಠಗೊಳಿಸಿದೆ. ಇದಾಗ್ಯೂ ಡೇವಿಡ್ ವಾರ್ನರ್, ಪ್ಯಾಟ್ ಕಮಿನ್ಸ್ ಹಾಗೂ ಜೋಶ್ ಹ್ಯಾಝಲ್ವುಡ್ ಅಲಭ್ಯತೆಯು ಆಸ್ಟ್ರೇಲಿಯಾ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ. ಅಲ್ಲದೆ ಕಮಿನ್ಸ್ ಅನುಪಸ್ಥಿತಿಯಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸುತ್ತಿದ್ದು, ಹೀಗಾಗಿ ಜಯದ ನಿರೀಕ್ಷೆಯಲ್ಲಿದೆ ಆಸ್ಟ್ರೇಲಿಯಾ.

ಆಸ್ಟ್ರೇಲಿಯಾ ಟೆಸ್ಟ್ ತಂಡ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮಿಚೆಲ್ ಸ್ಟಾರ್ಕ್, ಮ್ಯಾಟ್ ಕುಹ್ನೆಮನ್.
