IND vs AUS 3rd Test: ಆಸ್ಟ್ರೇಲಿಯಾ ತಂಡಕ್ಕೆ ಇಬ್ಬರು ಸ್ಟಾರ್ ಆಟಗಾರರ ಕಂಬ್ಯಾಕ್

India vs Australia 3rd Test : ಆಸ್ಟ್ರೇಲಿಯಾ ಟೆಸ್ಟ್ ತಂಡ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ.

TV9 Web
| Updated By: ಝಾಹಿರ್ ಯೂಸುಫ್

Updated on: Feb 28, 2023 | 6:33 PM

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಮಾರ್ಚ್ 1 ರಿಂದ ಶುರುವಾಗಲಿದೆ. ಇಂದೋರ್​ನ ಹೋಲ್ಕರ್ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ಈ ಪಂದ್ಯವು ಆಸ್ಟ್ರೇಲಿಯಾ ತಂಡದ ಪಾಲಿಗೆ ಸರಣಿ ನಿರ್ಣಾಯಕ. ಅಂದರೆ 4 ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

1 / 6
ಇದೀಗ ಮೂರನೇ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು. ಮತ್ತೊಂದೆಡೆ ಈ ಸರಣಿಯನ್ನು ಡ್ರಾನಲ್ಲಿ ಅಂತ್ಯಗೊಳಿಸಬೇಕಿದ್ದರೆ ಆಸ್ಟ್ರೇಲಿಯಾ ತಂಡವು 3ನೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು. ಇಂತಹ ಸಂದಿಗ್ಥ ಪರಿಸ್ಥಿತಿಯಲ್ಲಿ ಆಸೀಸ್ ಪಡೆಗೆ ಗುಡ್​ ನ್ಯೂಸ್ ಒಂದು ಸಿಕ್ಕಿದೆ.

2 / 6
ಹೌದು, ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಗಾಯದ ಕಾರಣ ಕಣಕ್ಕಿಳಿಯದಿದ್ದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಇಂದೋರ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ಸ್ಟಾರ್ಕ್​ ಆಗಮನದೊಂದಿಗೆ ಆಸ್ಟ್ರೇಲಿಯಾ ತಂಡದ ಬೌಲಿಂಗ್ ವಿಭಾಗ ಬಲಿಷ್ಠವಾಗಲಿದೆ.

3 / 6
ಇದರ ಜೊತೆಗೆ ಗಾಯದಿಂದ ಬಳಲುತ್ತಿದ್ದ ಯುವ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಕೂಡ 3ನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಿರಲಿದ್ದಾರೆ. ಇದಕ್ಕೂ ಮುನ್ನ ಬೆರಳಿನ ಗಾಯದ ಕಾರಣ ಗ್ರೀನ್ ನಾಗ್ಪುರ ಹಾಗೂ ದೆಹಲಿ ಟೆಸ್ಟ್​ನಲ್ಲಿ ಆಡಿರಲಿಲ್ಲ.

4 / 6
ಇದೀಗ ಮಿಚೆಲ್ ಸ್ಟಾರ್ಕ್ ಹಾಗೂ ಕ್ಯಾಮರೋನ್ ಗ್ರೀನ್ ಅವರ ಆಗಮನವು ಆಸ್ಟ್ರೇಲಿಯಾ ತಂಡವನ್ನು ತುಸು ಬಲಿಷ್ಠಗೊಳಿಸಿದೆ. ಇದಾಗ್ಯೂ ಡೇವಿಡ್ ವಾರ್ನರ್, ಪ್ಯಾಟ್ ಕಮಿನ್ಸ್ ಹಾಗೂ ಜೋಶ್ ಹ್ಯಾಝಲ್​ವುಡ್ ಅಲಭ್ಯತೆಯು ಆಸ್ಟ್ರೇಲಿಯಾ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ. ಅಲ್ಲದೆ ಕಮಿನ್ಸ್ ಅನುಪಸ್ಥಿತಿಯಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸುತ್ತಿದ್ದು, ಹೀಗಾಗಿ ಜಯದ ನಿರೀಕ್ಷೆಯಲ್ಲಿದೆ ಆಸ್ಟ್ರೇಲಿಯಾ.

5 / 6
ಆಸ್ಟ್ರೇಲಿಯಾ ಟೆಸ್ಟ್ ತಂಡ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮಿಚೆಲ್ ಸ್ಟಾರ್ಕ್, ಮ್ಯಾಟ್ ಕುಹ್ನೆಮನ್.

6 / 6
Follow us