- Kannada News Photo gallery Cricket photos India vs Australia 3rd Test Playing XI: Shubman Gill to replace KL Rahul
India vs Australia 3rd Test: ಕೆಎಲ್ ರಾಹುಲ್ vs ಶುಭ್ಮನ್ ಗಿಲ್: ಯಾರಿಗೆ ಸಿಗಲಿದೆ ಚಾನ್ಸ್?
India vs Australia 3rd Test: ಮೊದಲೆರಡು ಪಂದ್ಯಗಳಲ್ಲಿ ವಿಫಲರಾಗಿದ್ದ ಕೆಎಲ್ ರಾಹುಲ್ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈ ಬಿಡುವ ಸಾಧ್ಯತೆಯಿದೆ.
Updated on: Feb 28, 2023 | 5:04 PM

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯ ನಾಳೆಯಿಂದ (ಮಾರ್ಚ್ 1) ಶುರುವಾಗಲಿದೆ. ಇಂದೋರ್ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯಿಸುವ ಮೂಲಕ ಟೀಮ್ ಇಂಡಿಯಾಗೆ ಸರಣಿ ಗೆಲ್ಲಬಹುದು. ಹೀಗಾಗಿ ಭಾರತ ತಂಡವು ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿಯಲಿದೆ.

ಅದರಲ್ಲೂ ಮೊದಲೆರಡು ಪಂದ್ಯಗಳಲ್ಲಿ ವಿಫಲರಾಗಿದ್ದ ಕೆಎಲ್ ರಾಹುಲ್ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈ ಬಿಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ 3 ಇನಿಂಗ್ಸ್ ಆಡಿದ್ದ ರಾಹುಲ್ ಒಟ್ಟು 38 ರನ್ಗಳಿಸಲಷ್ಟೇ ಶಕ್ತರಾಗಿದ್ದರು.

ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಿಂದ ಕೆಎಲ್ ರಾಹುಲ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ. ಬದಲಾಗಿ ಮೊದಲ ಎರಡು ಟೆಸ್ಟ್ ಪಂದ್ಯಗಳ ವೇಳೆ ಬೆಂಚ್ ಕಾದಿದ್ದ ಯುವ ಆರಂಭಿಕ ಆಟಗಾರ ಶುಭ್ಮನ್ ಗಿಲ್ಗೆ ಚಾನ್ಸ್ ನೀಡಬಹುದು.

ಏಕೆಂದರೆ ಇದುವರೆಗೆ 25 ಟೆಸ್ಟ್ ಇನಿಂಗ್ಸ್ ಆಡಿರುವ ಶುಭ್ಮನ್ ಗಿಲ್ 1 ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 736 ರನ್ ಪೇರಿಸಿದ್ದಾರೆ. ಅಲ್ಲದೆ ಪ್ರಸ್ತುತ ಫಾರ್ಮ್ ಅನ್ನು ಗಣನೆಗೆ ತೆಗೆದುಕೊಂಡರೆ ಗಿಲ್ ಅವಕಾಶ ಸಿಗುವುದು ಖಚಿತ ಎನ್ನಬಹುದು. ಅದರಂತೆ ಕೆಎಲ್ ರಾಹುಲ್ ಬದಲಿಗೆ ಶುಭ್ಮನ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.
