India vs Australia 4th Test: ಇಬ್ಬರು ಇನ್, ಮತ್ತಿಬ್ಬರು ಔಟ್: ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ
India vs Australia 4th Test: ಈ ಎರಡು ಬದಲಾವಣೆಗಳೊಂದಿಗೆ ಟೀಮ್ ಇಂಡಿಯಾ 4ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ.
Updated on: Mar 08, 2023 | 11:09 PM

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ನಾಳೆಯಿಂದ ಶುರುವಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ.

4 ಪಂದ್ಯಗಳ ಸರಣಿಯನ್ನು ಸಮಬಲದಲ್ಲಿ ಅಂತ್ಯಗೊಳಿಸಲು ಆಸ್ಟ್ರೇಲಿಯಾ ತಂಡವು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. ಮತ್ತೊಂದೆಡೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೇರಲು ಈ ಪಂದ್ಯವನ್ನು ಗೆಲ್ಲಲೇಬೇಕು. ಹೀಗಾಗಿ ಅಹಮದಾಬಾದ್ ಮೈದಾನದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಇನ್ನು ಈ ಮಹತ್ವದ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲೂ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಮೊದಲ 3 ಪಂದ್ಯಗಳಲ್ಲಿ ಕೇವಲ 57 ರನ್ ಕಲೆಹಾಕಿರುವ ಕೆಎಸ್ ಭರತ್ ಅವರನ್ನು ಈ ಪಂದ್ಯದಿಂದ ಕೈ ಬಿಡಬಹುದು. ಬದಲಾಗಿ ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ಗೆ ಚಾನ್ಸ್ ನೀಡಬಹುದು.

ಹಾಗೆಯೇ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಮೊಹಮ್ಮದ್ ಶಮಿ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಉಮೇಶ್ ಯಾದವ್ ಅಥವಾ ಮೊಹಮ್ಮದ್ ಸಿರಾಜ್ ಹೊರಗುಳಿಯಬಹುದು. ಈ ಎರಡು ಬದಲಾವಣೆಗಳೊಂದಿಗೆ ಟೀಮ್ ಇಂಡಿಯಾ 4ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ.

ರೋಹಿತ್ ಶರ್ಮಾ (ನಾಯಕ)

ಶುಭ್ಮನ್ ಗಿಲ್

ಚೇತೇಶ್ವರ ಪೂಜಾರ

ವಿರಾಟ್ ಕೊಹ್ಲಿ

ಶ್ರೇಯಸ್ ಅಯ್ಯರ್

ಇಶಾನ್ ಕಿಶನ್ (ವಿಕೆಟ್ ಕೀಪರ್)

ರವೀಂದ್ರ ಜಡೇಜಾ

ಅಕ್ಷರ್ ಪಟೇಲ್

ರವಿಚಂದ್ರನ್ ಅಶ್ವಿನ್

ಮೊಹಮ್ಮದ್ ಸಿರಾಜ್

ಮೊಹಮ್ಮದ್ ಶಮಿ

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.
