- Kannada News Photo gallery Cricket photos India vs Australia 4th Test Virat Kohli and Rohit Sharma return Team India practice hard for final test
IND vs AUS 4th Test: ನಾಲ್ಕನೇ ಟೆಸ್ಟ್ಗೆ ಎರಡು ದಿನವಿರುವಾಗ ಅಭ್ಯಾಸಕ್ಕೆಂದು ಬಂದ ವಿರಾಟ್, ರೋಹಿತ್
India vs Australia 4th Test: ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.
Updated on: Mar 07, 2023 | 10:32 AM

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಪಡೆದಿರುವ ಭಾರತೀಯ ತಂಡ ಇದೀಗ ಅಂತಿಮ ನಾಲ್ಕನೇ ಟೆಸ್ಟ್ಗೆ ಸಜ್ಜಾಗುತ್ತಿದೆ. ಮಾರ್ಚ್ 9 ರಿಂದ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯ ಟೆಸ್ಟ್ ಆಯೋಜಿಸಲಾಗಿದೆ.

ಅಂತಿಮ ಕದನಕ್ಕೆ ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ವಿಶ್ರಾಂತಿ ಮುಗಿಸಿ ತಂಡ ಸೇರಿಕೊಂಡಿದ್ದಾರೆ.

ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾದ ಶುಭಮನ್ ಗಿಲ್, ಶ್ರೀಕರ್ ಭರತ್, ಶ್ರೇಯಸ್ ಅಯ್ಯರ್ ಸಾಕಷ್ಟು ಅಭ್ಯಾಸ ಮಾಡಿದರು. ದ್ರಾವಿಡ್ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಇವರ ಜೊತೆ ಸುದೀರ್ಘವಾದ ಸೆಷನ್ ನಡೆಸಿದರು.

ಇಂದೋರ್ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತು. ಆಸೀಸ್ ಸ್ಪಿನ್ ದಾಳಿಗೆ ತಬ್ಬಿಬ್ಬಾದ ಭಾರತೀಯ ಬ್ಯಾಟರ್ಗಳು ರನ್ ಗಳಿಸಲು ಪರದಾಡಿದರು. ಪರಿಣಾಮ ಕಾಂಗರೂ ಪಡೆ 9 ವಿಕೆಟ್ಗಳಿಂದ ಗೆದ್ದು ಬೀಗಿತು.

ಭಾರತ ಉಳಿದಿರುವ ಒಂದು ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೆ ಏರಲಿದೆ.

ಇತ್ತ ಆಸೀಸ್ ಪಡೆಗೆ ಕೂಡ ಕೊನೆಯ ಟೆಸ್ಟ್ ಬಹುಮುಖ್ಯ.1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಉಳಿದಿರುವ ಒಂದು ಪಂದ್ಯವನ್ನು ಗೆಲ್ಲಬೇಕಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ.




