AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 4th Test: ನಾಲ್ಕನೇ ಟೆಸ್ಟ್​ಗೆ ಎರಡು ದಿನವಿರುವಾಗ ಅಭ್ಯಾಸಕ್ಕೆಂದು ಬಂದ ವಿರಾಟ್, ರೋಹಿತ್

India vs Australia 4th Test: ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

Vinay Bhat
|

Updated on: Mar 07, 2023 | 10:32 AM

Share
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಪಡೆದಿರುವ ಭಾರತೀಯ ತಂಡ ಇದೀಗ ಅಂತಿಮ ನಾಲ್ಕನೇ ಟೆಸ್ಟ್​ಗೆ ಸಜ್ಜಾಗುತ್ತಿದೆ. ಮಾರ್ಚ್ 9 ರಿಂದ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯ ಟೆಸ್ಟ್ ಆಯೋಜಿಸಲಾಗಿದೆ.

1 / 8
ಅಂತಿಮ ಕದನಕ್ಕೆ ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ವಿಶ್ರಾಂತಿ ಮುಗಿಸಿ ತಂಡ ಸೇರಿಕೊಂಡಿದ್ದಾರೆ.

2 / 8
ಕೊಹ್ಲಿ, ರೋಹಿತ್ ಹೊರತು ಪಡಿಸಿ ಇತರೆ ಆಟಗಾರರು ತೃತೀಯ ಟೆಸ್ಟ್ ನಡೆದ ಇಂದೋರ್​ನಲ್ಲೇ ಬ್ಯಾಟಿಂಗ್, ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಪಂದ್ಯ ಆರಂಭಕ್ಕೆ ಎರಡು ದಿನವಿರುವಾಗ ನಾಯಕ, ಮಾಜಿ ನಾಯಕ ಅಭ್ಯಾಸಕ್ಕೆಂದು ತಂಡಕ್ಕೆ ಮರಳಿದ್ದಾರೆ.

3 / 8
ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾದ ಶುಭಮನ್‌ ಗಿಲ್, ಶ್ರೀಕರ್ ಭರತ್, ಶ್ರೇಯಸ್ ಅಯ್ಯರ್ ಸಾಕಷ್ಟು ಅಭ್ಯಾಸ ಮಾಡಿದರು. ದ್ರಾವಿಡ್ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಇವರ ಜೊತೆ ಸುದೀರ್ಘವಾದ ಸೆಷನ್ ನಡೆಸಿದರು.

4 / 8
ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತು. ಆಸೀಸ್ ಸ್ಪಿನ್ ದಾಳಿಗೆ ತಬ್ಬಿಬ್ಬಾದ ಭಾರತೀಯ ಬ್ಯಾಟರ್​ಗಳು ರನ್ ಗಳಿಸಲು ಪರದಾಡಿದರು. ಪರಿಣಾಮ ಕಾಂಗರೂ ಪಡೆ 9 ವಿಕೆಟ್​ಗಳಿಂದ ಗೆದ್ದು ಬೀಗಿತು.

5 / 8
ಭಾರತ ಉಳಿದಿರುವ ಒಂದು ಪಂದ್ಯವನ್ನು ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ. ಅಲ್ಲದೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೆ ಏರಲಿದೆ.

6 / 8
ಇತ್ತ ಆಸೀಸ್ ಪಡೆಗೆ ಕೂಡ ಕೊನೆಯ ಟೆಸ್ಟ್ ಬಹುಮುಖ್ಯ.1-2 ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾಕ್ಕೆ ಮಾನ ಉಳಿಸಿಕೊಳ್ಳಲು ಉಳಿದಿರುವ ಒಂದು ಪಂದ್ಯವನ್ನು ಗೆಲ್ಲಬೇಕಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯ ರೋಚಕತೆ ಸೃಷ್ಟಿಸಿದೆ.

7 / 8
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ.

8 / 8
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!

ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್

ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್

ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!

ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು

ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್

ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್

ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು