AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 12 ವರ್ಷಗಳ ನಂತರ ಟೆಸ್ಟ್ ಕ್ರಿಕೆಟ್​ನಲ್ಲಿ ಕಿಂಗ್ ಕೊಹ್ಲಿಯ ಕಳಪೆ ಪ್ರದರ್ಶನ

Virat Kohli performance: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಡಿಲೇಡ್​ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಬೆನ್ನೇಲುಬಾಗಿರುವ ವಿರಾಟ್ ಕೊಹ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲಿ ಕೇವಲ 18 ರನ್ ಕಲೆಹಾಕಿದರು.ಕಳೆದ 12 ವರ್ಷಗಳಲ್ಲಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯವೊಂದರಲ್ಲಿ ವಿರಾಟ್ ಕೊಹ್ಲಿ ಗಳಿಸಿದ ಅತ್ಯಂತ ಕಡಿಮೆ ಸ್ಕೋರ್ ಇದಾಗಿದೆ. ಅಂದರೆ ಕಳೆದ 12 ವರ್ಷಗಳಲ್ಲಿ ಆಸ್ಟ್ರೇಲಿಯಾದಲ್ಲಿ ಆಡಿದ ಪ್ರತಿ ಟೆಸ್ಟ್ ಪಂದ್ಯದಲ್ಲೂ 18ಕ್ಕೂ ಹೆಚ್ಚು ರನ್ ಗಳಿಸಿದ್ದರು.

ಪೃಥ್ವಿಶಂಕರ
|

Updated on: Dec 07, 2024 | 6:25 PM

Share
 ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಅಡಿಲೇಡ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿನ ಭೀತಿಯಲ್ಲಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 180 ರನ್‌ಗಳಿಗೆ ಆಲೌಟ್ ಆಗಿದ್ದ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲೂ ಅಲ್ಪ ರನ್​ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕೊಂಡಿದೆ.

1 / 7
ಅದರಲ್ಲೂ ಅಡಿಲೇಡ್‌ನಲ್ಲಿ ಉತ್ತಮ ದಾಖಲೆ ಹೊಂದಿರುವ ವಿರಾಟ್ ಕೊಹ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲೂ ಅಲ್ಪ ರನ್​ಗಳಿಗೆ ವಿಕೆಟ್ ಒಪ್ಪಿಸಿರುವುದು ತಂಡಕ್ಕೆ ಆಘಾತ ನೀಡಿದೆ. ಆಸ್ಟ್ರೇಲಿಯಾದಲ್ಲಿ ಕೊಹ್ಲಿಯ ನೆಚ್ಚಿನ ಮೈದಾನವೆಂದರೆ ಅದು ಅಡಿಲೇಡ್. ಹೀಗಾಗಿ ಈ ಮೈದಾನದಲ್ಲಿ ಕೊಹ್ಲಿ ಬ್ಯಾಟ್ ಆಗಸ ನೋಡಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು.

2 / 7
ಆದರೆ ಎರಡೂ ಇನ್ನಿಂಗ್ಸ್​ಗಳಲ್ಲೂ ಕೊಹ್ಲಿ ರನ್ ಕಲೆಹಾಕುವಲ್ಲಿ ಎಡವಿದರು. ವಾಸ್ತವವಾಗಿ ಪರ್ತ್​ ಟೆಸ್ಟ್​ನ ಎರಡನೇ ಇನ್ನಿಂಗ್ಸ್​ನಲ್ಲಿ ಶತಕ ಸಿಡಿಸಿದ್ದ ಕೊಹ್ಲಿ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು.  ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 7 ರನ್ ಗಳಿಸಿ ಔಟಾಗಿದ್ದ ಕೊಹ್ಲಿ, ಎರಡನೇ ಇನ್ನಿಂಗ್ಸ್​ನಲ್ಲೂ 11 ರನ್ ಕಲೆಹಾಕಲಷ್ಟೇ ಶಕ್ತರಾದರು.

3 / 7
ಅಡಿಲೇಡ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ವಿರಾಟ್ ಕೊಹ್ಲಿ ಗಳಿಸಿದ್ದು ಕೇವಲ 18 ರನ್. ಕಳೆದ 12 ವರ್ಷಗಳಲ್ಲಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯವೊಂದರಲ್ಲಿ ವಿರಾಟ್ ಕೊಹ್ಲಿ ಗಳಿಸಿದ ಅತ್ಯಂತ ಕಡಿಮೆ ಸ್ಕೋರ್ ಇದಾಗಿದೆ. ಅಂದರೆ ಕಳೆದ 12 ವರ್ಷಗಳಲ್ಲಿ ಆಸ್ಟ್ರೇಲಿಯಾದಲ್ಲಿ ಆಡಿದ ಪ್ರತಿ ಟೆಸ್ಟ್ ಪಂದ್ಯದಲ್ಲೂ 18ಕ್ಕೂ ಹೆಚ್ಚು ರನ್ ಗಳಿಸಿದ್ದರು.

4 / 7
 ಆದರೆ ಈ ಬಾರಿ ವಿರಾಟ್‌ಗೆ ವಿಶೇಷ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಈ ಕಳಪೆ ಪ್ರದರ್ಶನದಿಂದಾಗಿ ಟೆಸ್ಟ್ ಮಾದರಿಯಲ್ಲಿ ವಿರಾಟ್ ಕೊಹ್ಲಿ ಸರಾಸರಿ ಕೂಡ ಕುಸಿದಿದೆ. ಪ್ರಸ್ತುತ ಟೆಸ್ಟ್‌ನಲ್ಲಿ ವಿರಾಟ್ ಸರಾಸರಿ 47.72 ಆಗಿದೆ. ಈ ಪಂದ್ಯಕ್ಕೂ ಮುನ್ನ ಟೆಸ್ಟ್‌ನಲ್ಲಿ ಅವರ ಸರಾಸರಿ 48.13 ಆಗಿತ್ತು.

5 / 7
ಅಡಿಲೇಡ್ ಟೆಸ್ಟ್ ನಲ್ಲಿ ಕೇವಲ 2 ದಿನ ಕಳೆದಿದ್ದು, ಆಸ್ಟ್ರೇಲಿಯಾ ಸಂಪೂರ್ಣ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ಟೀಂ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 180 ರನ್ ಗಳಿಸಲಷ್ಟೇ ಶಕ್ತವಾಯಿತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 337 ರನ್ ಗಳಿಸಿ 157 ರನ್‌ಗಳ ಮುನ್ನಡೆ ಸಾಧಿಸಿತು.

6 / 7
ಇದೀಗ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 2ನೇ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 128 ರನ್ ಗಳಿಸಿದೆ. ತಂಡದ ಪರ ರಿಷಭ್ ಪಂತ್ (ಔಟಾಗದೆ 28) ಮತ್ತು ನಿತೀಶ್ ಕುಮಾರ್ ರೆಡ್ಡಿ (ಔಟಾಗದೆ 15) ಆಕ್ರಮಣಕಾರಿ ಬ್ಯಾಟಿಂಗ್ ಮಾಡುವದರೊಂದಿಗೆ ಅಜೇಯರಾಗಿ ಉಳಿದಿದ್ದು ಮೂರನೇ ದಿನದಾಟಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ