- Kannada News Photo gallery Cricket photos Border-Gavaskar Trophy: Nitish Reddy & Harshit Rana Make Test Debut for India
IND vs AUS: ಗಂಭೀರ್ ಶಿಷ್ಯನಿಗೆ ತೆರೆಯಿತು ಟೀಂ ಇಂಡಿಯಾ ಕದ; ಇಬ್ಬರು ಆಲ್ರೌಂಡರ್ಗಳಿಗೆ ಚೊಚ್ಚಲ ಅವಕಾಶ
IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ನಿತೀಶ್ ಕುಮಾರ್ ರೆಡ್ಡಿ ಮತ್ತು ಹರ್ಷಿತ್ ರಾಣಾ ಅವರು ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿಜೀವನವನ್ನು ಆರಂಭಿಸಿದ್ದಾರೆ. ಐಪಿಎಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನಿತೀಶ್ ರೆಡ್ಡಿ ಅವರು ಆಲ್‌ರೌಂಡರ್ ಆಗಿ, ಹಾಗೂ ಹರ್ಷಿತ್ ರಾಣಾ ವೇಗದ ಬೌಲರ್ ಆಗಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದು, ಅದರ ಫಲವಾಗಿ ಭಾರತ ತಂಡದಲ್ಲಿ ಅವಕಾಶ ಪಡೆದಿದ್ದಾರೆ.
Updated on:Nov 22, 2024 | 8:23 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬಾರ್ಡರ್-ಗವಾಸ್ಕರ್ ಟ್ರೋಫಿ ಆರಂಭವಾಗಿದ್ದು, ಇದರೊಂದಿಗೆ ಟೀಂ ಇಂಡಿಯಾದ ಇಬ್ಬರು ಯುವ ಆಟಗಾರರ ಟೆಸ್ಟ್ ವೃತ್ತಿಜೀವನ ಆರಂಭವಾಗಿದೆ. ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಮತ್ತು ವೇಗದ ಬೌಲರ್ ಹರ್ಷಿತ್ ರಾಣಾ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

ನಿತೀಶ್ ಕುಮಾರ್ ರೆಡ್ಡಿ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವುದು ಈಗಾಗಲೇ ಖಚಿತವಾಗಿತ್ತು. ಆದರೆ ಹರ್ಷಿತ್ ರಾಣಾ ಆಡುವ ಬಗ್ಗೆ ಪ್ರಶ್ನೆ ಮೂಡಿತ್ತು. ಕೋಚ್ ಗೌತಮ್ ಗಂಭೀರ್ ಕೊನೆಗೂ ಯುವ ವೇಗಿಯ ಮೇಲೆ ವಿಶ್ವಾಸ ವ್ಯಕ್ತಪಡಿಸಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡುವ ಅವಕಾಶವನ್ನು ಮಾಡಿಕೊಟ್ಟಿದ್ದಾರೆ.

ಕಳೆದ ಐಪಿಎಲ್‌ನಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಕಮಾಲ್ ಮಾಡಿದ್ದ ನಿತೀಶ್ಗೆ ಭಾರತ ತಂಡದ ಕದ ತೆರೆದಿದೆ. ಈ ಯುವ ಆಲ್ರೌಂಡರ್ಗೆ ವಿರಾಟ್ ಕೊಹ್ಲಿ ಟೆಸ್ಟ್ ಕ್ಯಾಪ್ ನೀಡಿ, ಅವರ ವೃತ್ತಿಜೀವನಕ್ಕೆ ಶುಭ ಹಾರೈಸಿದರು. ಇನ್ನು ನಿತೀಶ್ ಕುಮಾರ್ ರೆಡ್ಡಿ ಅವರ ವೃತ್ತಿಜೀವನವನ್ನು ಗಮನಿಸಿದರೆ, ಅವರು 23 ಪ್ರಥಮ ದರ್ಜೆ ಪಂದ್ಯಗಳಲ್ಲಿ 779 ರನ್ ಗಳಿಸಿದ್ದಾರೆ. ಬೌಲಿಂಗ್ನಲ್ಲೂ ಕಮಾಲ್ ಮಾಡಿರುವ ನಿತೀಶ್, 23 ಪಂದ್ಯಗಳ 42 ಇನ್ನಿಂಗ್ಸ್‌ಗಳಲ್ಲಿ 56 ವಿಕೆಟ್ ಪಡೆದಿದ್ದಾರೆ.

ನಿತೀಶ್ ಜೊತೆಗೆ ಮತ್ತೊಮ್ಮ ಬೌಲಿಂಗ್ ಆಲ್‌ರೌಂಡರ್ ಹರ್ಷಿತ್ ರಾಣಾಗೂ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡುವ ಅವಕಾಶ ಸಿಕ್ಕಿದೆ. ದೇಶೀಯ ಕ್ರಿಕೆಟ್‌ನಲ್ಲಿ ದೆಹಲಿ ಪರ ಆಡುವ ಹರ್ಷಿತ್ಗೆ ಅಶ್ವಿನ್ ಟೆಸ್ಟ್ ಕ್ಯಾಪ್ ಹಸ್ತಾಂತರಿಸಿದರು. ಇದುವರೆಗೆ 10 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ಹರ್ಷಿತ್ 24 ರ ಸರಾಸರಿಯಲ್ಲಿ 43 ವಿಕೆಟ್‌ಗಳನ್ನು ಪಡೆದಿದ್ದಾರೆ ಮತ್ತು 42.63 ರ ಸರಾಸರಿಯಲ್ಲಿ 469 ರನ್ ಗಳಿಸಿದ್ದಾರೆ.

ಭಾರತ ತಂಡ: ಜಸ್ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ.

ಆಸ್ಟ್ರೇಲಿಯಾ ತಂಡ: ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್.
Published On - 8:22 am, Fri, 22 November 24



















