India vs Australia 1st: ಮೊದಲ ಟೆಸ್ಟ್​ಗೂ ಮುನ್ನ ಆಸ್ಟ್ರೇಲಿಯಾಗೆ ಡಬಲ್ ಶಾಕ್

| Updated By: ಝಾಹಿರ್ ಯೂಸುಫ್

Updated on: Feb 07, 2023 | 4:12 PM

Australia Playing XI 1st Test: ತಂಡದಲ್ಲಿ ಹೊಸ ಆಟಗಾರರಿದ್ದು, ಇವರ್ಯಾರು ಭಾರತೀಯ ಪಿಚ್​ನಲ್ಲಿ ಆಡಿದ ಅನುಭವನ್ನು ಹೊಂದಿಲ್ಲ. ಇದುವೇ ಈಗ ಆಸ್ಟ್ರೇಲಿಯಾ ತಂಡದ ಚಿಂತೆಗೆ ಕಾರಣವಾಗಿದೆ.

1 / 6
ಭಾರತ-ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಬಾರ್ಡರ್ - ಗವಾಸ್ಕರ್ ಟೆಸ್ಟ್ ಸರಣಿಯು ಫೆಬ್ರವರಿ 9 ರಿಂದ ಶುರುವಾಗಲಿದೆ. ನಾಲ್ಕು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯಕ್ಕೆ ನಾಗಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಆದರೆ ಈ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ.

2 / 6
ಹೌದು, ಟೀಮ್ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಯುವ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಅಲಭ್ಯರಾಗಲಿದ್ದಾರೆ ಎಂದು ಸ್ಟೀವ್ ಸ್ಮಿತ್ ತಿಳಿಸಿದ್ದಾರೆ.

3 / 6
ಇತ್ತೀಚೆಗೆ ಸೌತ್ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಕ್ಯಾಮರೋನ್ ಗ್ರೀನ್​ ಅವರ ಬಲ ತೋರು ಬೆರಳಿಗೆ ಗಾಯವಾಗಿತ್ತು. ಇದಾಗ್ಯೂ ಅವರನ್ನು ಭಾರತದ ವಿರುದ್ಧ ಟೆಸ್ಟ್​ ಸರಣಿಗೆ ಆಯ್ಕೆ ಮಾಡಿದ್ದರು. ಆದರೆ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರದ ಕಾರಣ ಮೊದಲ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

4 / 6
ಮತ್ತೊಂದೆಡೆ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ನಾಗಪುರ ಟೆಸ್ಟ್​ನಲ್ಲಿ ಕಣಕ್ಕಿಳಿಯುವುದಿಲ್ಲ. ಕಳೆದ ತಿಂಗಳು ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಹ್ಯಾಝಲ್​ವುಡ್​ ಅವರ ಎಡಗಾಲಿಗೆ ಗಾಯವಾಗಿತ್ತು. ಈ ಗಾಯವು ಇನ್ನೂ ಕೂಡ ಸಂಪೂರ್ಣವಾಗಿ ಗುಣವಾಗಿರದ ಕಾರಣ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

5 / 6
ಇತ್ತ ಪ್ರಮುಖ ಆಲ್​ರೌಂಡರ್ ಗ್ರೀನ್ ಹಾಗೂ ಮುಖ್ಯ ವೇಗಿ ಹ್ಯಾಝಲ್​ವುಡ್ ಹೊರಗುಳಿಯುತ್ತಿರುವುದು ಆಸೀಸ್ ತಂಡದ ನಾಯಕನ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ತಂಡದಲ್ಲಿ ಹೊಸ ಆಟಗಾರರಿದ್ದು, ಇವರ್ಯಾರು ಭಾರತೀಯ ಪಿಚ್​ನಲ್ಲಿ ಆಡಿದ ಅನುಭವನ್ನು ಹೊಂದಿಲ್ಲ. ಇದುವೇ ಈಗ ಆಸ್ಟ್ರೇಲಿಯಾ ತಂಡದ ಚಿಂತೆಗೆ ಕಾರಣವಾಗಿದೆ.

6 / 6
ಆಸ್ಟ್ರೇಲಿಯಾ ಟೆಸ್ಟ್ ತಂಡ ಹೀಗಿದೆ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

Published On - 4:11 pm, Tue, 7 February 23