ಅಡಿಲೇಡ್ ಟೆಸ್ಟ್‌ನಲ್ಲಿ ಓಪನರ್ ಬದಲಾದರು, ಹೀಗಾಗಿ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಕ್ರಮಾಂಕ ಕೂಡ ಬದಲಾಯಿತು. ಆದರೆ ಬ್ಯಾಟಿಂಗ್ ಕ್ರಮಾಂಕ ಬದಲಾದರೂ ರೋಹಿತ್ ಅವರ ಪ್ರದರ್ಶನ ಮಾತ್ರ ಬದಲಾಗಲಿಲ್ಲ. 7 ವರ್ಷಗಳ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ರೋಹಿತ್ ಶರ್ಮಾಗೆ ಎರಡೂ ಇನ್ನಿಂಗ್ಸ್‌ಗಳಲ್ಲಿ ಒಂದಂಕಿ ಕೂಡ ದಾಟಲು ಸಾಧ್ಯವಾಗಲಿಲ್ಲ.