Sanju Samson: ಮತ್ತೊಮ್ಮೆ ಸಂಜು ಸ್ಯಾಮ್ಸನ್​ನ ಕಡೆಗಣಿಸಿದ ಆಯ್ಕೆ ಸಮಿತಿ..!

India Odi Squad: ಅಚ್ಚರಿ ಎಂದರೆ ಸಂಜು ಸ್ಯಾಮ್ಸನ್ 2015 ರಲ್ಲಿ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಪಾದರ್ಪಣೆ ಮಾಡಿದ್ದರು. ಆದರೆ ಅವರಿಗೆ ಏಕದಿನ ಕ್ರಿಕೆಟ್​ನಲ್ಲಿ ಅವಕಾಶ ಸಿಕ್ಕಿದ್ದು 2021 ರಲ್ಲಿ.

ಝಾಹಿರ್ ಯೂಸುಫ್
|

Updated on: Feb 20, 2023 | 6:03 PM

India vs Australia: ಭಾರತ-ಆಸ್ಟ್ರೇಲಿಯಾ ನಡುವಣ 3 ಪಂದ್ಯಗಳ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. 18 ಸದಸ್ಯರ ಈ ಬಳಗದಲ್ಲಿ 6 ಬ್ಯಾಟ್ಸ್​ಮನ್​ಗಳಿಗೆ ಸ್ಥಾನ ನೀಡಲಾಗಿದೆ. ಹಾಗೆಯೇ 6 ಬೌಲರ್​ಗಳು ಹಾಗೂ 5 ಆಲ್​ರೌಂಡರ್​​ಗಳು ಕೂಡ ಆಯ್ಕೆಯಾಗಿದ್ದಾರೆ. ಇದಾಗ್ಯೂ ವಿಕೆಟ್ ಕೀಪರ್ ಆಗಿ ಸ್ಥಾನ ಪಡೆದಿರುವುದು ಇಶಾನ್ ಕಿಶನ್ ಮಾತ್ರ.

1 / 7
ಇತ್ತ ಹೆಚ್ಚುವರಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದ ಸಂಜು ಸ್ಯಾಮ್ಸನ್​ ಅವರನ್ನು ಮತ್ತೊಮ್ಮೆ ಆಯ್ಕೆ ಸಮಿತಿ ಕಡೆಗಣಿಸಿರುವುದು ಸ್ಪಷ್ಟ. ಏಕೆಂದರೆ ಸ್ಯಾಮ್ಸನ್ ಕಳೆದ 10 ಏಕದಿನ ಇನಿಂಗ್ಸ್​ನಲ್ಲಿ 71 ಸರಾಸರಿಯಂತೆ ಒಟ್ಟು 284 ರನ್​ ಕಲೆಹಾಕಿದ್ದಾರೆ.

2 / 7
ಅಲ್ಲದೆ ಏಕದಿನ ಕ್ರಿಕೆಟ್ ಕೆರಿಯರ್​ನಲ್ಲಿ 11 ಪಂದ್ಯಗಳನ್ನಾಡಿರುವ ಸ್ಯಾಮ್ಸನ್ ಒಟ್ಟು 330 ರನ್ ಕಲೆಹಾಕಿದ್ದಾರೆ. ಅಂದರೆ ಅವರ ಸರಾಸರಿ ರನ್​ಗಳಿಕೆಯು 66.0 ಇದೆ. ಇದಾಗ್ಯೂ ಅವರನ್ನು ಬಾಂಗ್ಲಾದೇಶ್ ವಿರುದ್ಧದ ಸರಣಿಗೆ ಆಯ್ಕೆ ಮಾಡಿರಲಿಲ್ಲ. ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದಲೂ ಕೈ ಬಿಡಲಾಗಿದೆ.

3 / 7
ಇಲ್ಲಿ ಮತ್ತೊಂದು ಅಚ್ಚರಿ ಎಂದರೆ ಸಂಜು ಸ್ಯಾಮ್ಸನ್ 2015 ರಲ್ಲಿ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಪಾದರ್ಪಣೆ ಮಾಡಿದ್ದರು. ಆದರೆ ಅವರಿಗೆ ಏಕದಿನ ಕ್ರಿಕೆಟ್​ನಲ್ಲಿ ಅವಕಾಶ ಸಿಕ್ಕಿದ್ದು 2021 ರಲ್ಲಿ. ಇನ್ನು ಕಳೆದ ಮೂರು ವರ್ಷಗಳಲ್ಲಿ ಅವರು ಆಡಿರುವುದು ಕೇವಲ 11 ಏಕದಿನ ಪಂದ್ಯಗಳನ್ನು ಮಾತ್ರ.

4 / 7
ಅಂದರೆ ಇಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಹೆಚ್ಚುವರಿ ವಿಕೆಟ್ ಕೀಪರ್ ಅನ್ನು ಆಯ್ಕೆ ಮಾಡುವ ಅವಕಾಶವಿದ್ದರೂ, ಆಯ್ಕೆ ಸಮಿತಿ 6 ಬ್ಯಾಟ್ಸ್​ಮನ್ಸ್​, 6 ಬೌಲರ್ಸ್ ಹಾಗೂ 5 ಆಲ್​ರೌಂಡರ್​ಗಳನ್ನು ಆಯ್ಕೆ ಮಾಡಿದೆ. ಇನ್ನು ವಿಕೆಟ್ ಕೀಪರ್​ ಆಗಿ ಇಶಾನ್ ಕಿಶನ್ ಅವರನ್ನು ಮಾತ್ರ ತಂಡದಲ್ಲಿರಿಸಲಾಗಿದೆ. ಇದರಿಂದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿರುವ ಸಂಜು ಸ್ಯಾಮ್ಸನ್ ಅವಕಾಶ ವಂಚಿತರಾಗಿದ್ದಾರೆ.​

5 / 7
ಒಟ್ಟಿನಲ್ಲಿ ಏಕದಿನ ಕ್ರಿಕೆಟ್​ನಲ್ಲಿ ಅತ್ಯುತ್ತಮ ಫಾರ್ಮ್​ನಲ್ಲಿದ್ದರೂ ಸಂಜು ಸ್ಯಾಮ್ಸನ್ ಮತ್ತೊಮ್ಮೆ ಅವರನ್ನು ಆಯ್ಕೆ ಸಮಿತಿ ಕಡೆಗಣಿಸಿರುವುದು ಸ್ಪಷ್ಟ. ಏಕೆಂದರೆ ಟೀಮ್ ಇಂಡಿಯಾ ಪರ 18 ಏಕದಿನ ಇನಿಂಗ್ಸ್ ಆಡಿರುವ ಸೂರ್ಯಕುಮಾರ್ ಯಾದವ್ 28.87 ಸರಾಸರಿಯಲ್ಲಿ ಕೇವಲ 433 ರನ್​ಗಳಷ್ಟೇ ಕಲೆಹಾಕಿದ್ದಾರೆ. ಇದಾಗ್ಯೂ ಅವರು ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಇತ್ತ 66 ರ ಸರಾಸರಿಯಲ್ಲಿ ರನ್​ ಪೇರಿಸಿರುವ ಸ್ಯಾಮ್ಸನ್ ಹೊರಗುಳಿದಿರುವುದೇ ಅಚ್ಚರಿ.

6 / 7
ಭಾರತ ಏಕದಿನ ತಂಡ: ಹಾರ್ದಿಕ್ ಪಾಂಡ್ಯ (ನಾಯಕ-ಮೊದಲ ಏಕದಿನ) ರೋಹಿತ್ ಶರ್ಮಾ (ಮೊದಲ ಪಂದ್ಯಕ್ಕೆ ಅಲಭ್ಯ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.

7 / 7
Follow us
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್

ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ

ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ