- Kannada News Photo gallery Cricket photos India's Predicted XI for Australia Test: Ravi Shastri's Playing 11
IND vs AUS: ಪರ್ತ್ ಟೆಸ್ಟ್‌ಗೆ ಟೀಂ ಇಂಡಿಯಾ ಪ್ಲೇಯಿಂಗ್ 11 ಪ್ರಕಟಿಸಿದ ರವಿಶಾಸ್ತ್ರಿ
IND vs AUS: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾ ತೀವ್ರ ಅಭ್ಯಾಸ ನಡೆಸುತ್ತಿದೆ. ರೋಹಿತ್ ಶರ್ಮಾ ಅವರ ಲಭ್ಯತೆ ಅನಿಶ್ಚಿತವಾಗಿದ್ದು, ಈ ನಡುವೆ ಮಾಜಿ ಕೋಚ್ ರವಿಶಾಸ್ತ್ರಿ ಮೊದಲ ಟೆಸ್ಟ್‌ಗೆ ತಮ್ಮ ಪ್ಲೇಯಿಂಗ್ 11 ಘೋಷಿಸಿದ್ದಾರೆ. ಗಿಲ್ ಮತ್ತು ಜೈಸ್ವಾಲ್ ಓಪನಿಂಗ್ ಮಾಡಲಿದ್ದು, ಧ್ರುವ್ ಜುರೆಲ್ ಅವರಿಗೆ ವಿಕೆಟ್ ಕೀಪರ್ ಸ್ಥಾನ ದೊರೆತಿದೆ. ವಾಷಿಂಗ್ಟನ್ ಸುಂದರ್ ಅಥವಾ ರವೀಂದ್ರ ಜಡೇಜಾ ಅವರನ್ನು ಸ್ಪಿನ್ ಆಲ್-ರೌಂಡರ್ ಆಗಿ ಆಯ್ಕೆ ಮಾಡಲಾಗಿದೆ. ನಿತೀಶ್ ರೆಡ್ಡಿ ಬೌಲಿಂಗ್ ಆಲ್-ರೌಂಡರ್ ಆಗಿ ಆಡಲಿದ್ದಾರೆ.
Updated on: Nov 17, 2024 | 4:37 PM

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಕಠಿಣ ಅಭ್ಯಾಸ ನಡೆಸುತ್ತಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನವೆಂಬರ್ 22 ರಿಂದ ಪರ್ತ್‌ನಲ್ಲಿ ನಡೆಯಲಿದೆ. ನಾಯಕ ರೋಹಿತ್ ಶರ್ಮಾ ಈ ಆರಂಭಿಕ ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ? ಈ ಬಗ್ಗೆ ಇನ್ನೂ ಖಚಿತವಾಗಿಲ್ಲ. ಏತನ್ಮಧ್ಯೆ, ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರು ತಮ್ಮ ಪ್ಲೇಯಿಂಗ್ ಇಲೆವೆನ್ ಅನ್ನು ಘೋಷಿಸಿದ್ದಾರೆ.

ರೋಹಿತ್ ಮೊದಲ ಪಂದ್ಯದಲ್ಲಿ ಆಡುವುದಿಲ್ಲ ಎಂದು ಭಾವಿಸಿರುವ ರವಿಶಾಸ್ತ್ರಿ 11 ಆಟಗಾರರನ್ನು ಪರ್ತ್ ಟೆಸ್ಟ್‌ಗೆ ಆಯ್ಕೆ ಮಾಡಿದ್ದಾರೆ. ಅದರಂತೆ, ರವಿಶಾಸ್ತ್ರಿ ತಂಡದಲ್ಲಿ 3 ವೇಗದ ಬೌಲರ್‌ಗಳು, ಒಬ್ಬ ಬೌಲಿಂಗ್ ಆಲ್‌ರೌಂಡರ್ ಮತ್ತು 1 ಸ್ಪಿನ್ ಆಲ್‌ರೌಂಡರ್ ಅವಕಾಶ ಪಡೆದಿದ್ದಾರೆ. ಹೀಗಾಗಿ ರವಿಶಾಸ್ತ್ರಿ ತಂಡದಲ್ಲಿ ಎಂಟನೇ ಸ್ಥಾನದವರೆಗೂ ಬ್ಯಾಟಿಂಗ್ ಆಯ್ಕೆ ಇದೆ.

ಶಾಸ್ತ್ರಿ ಅವರು ಯಶಸ್ವಿ ಜೈಸ್ವಾಲ್ ಜೊತೆಗೆ ಓಪನಿಂಗ್ ಮಾಡಲು ಶುಭಮನ್ ಗಿಲ್ ಅವರನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ ಕೆಎಲ್ ಮೂರನೇ ಸ್ಥಾನದಲ್ಲಿ ಬ್ಯಾಟಿಂಗ್‌ಗೆ ಬರಲಿದೆ. ಗಿಲ್ ಈ ಹಿಂದೆ ಆಸ್ಟ್ರೇಲಿಯಾದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದರಿಂದ ಅವರಿಗ ಆರಂಭಿಕ ಸ್ಥಾನವನ್ನು ಶಾಸ್ತ್ರಿ ನೀಡಿದ್ದಾರೆ.

ಶಾಸ್ತ್ರಿ ಅವರು ಸರ್ಫ್ರಾಜ್ ಖಾನ್ ಬದಲಿಗೆ ಧ್ರುವ್ ಜುರೆಲ್ ಅವರಿಗೆ ತಮ್ಮ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆದ್ಯತೆ ನೀಡಿದ್ದಾರೆ. ಆಸ್ಟ್ರೇಲಿಯಾ ಎ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ಎ ಪರ ಧ್ರುವ ಎರಡೂ ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕ ಗಳಿಸಿದ್ದರು. ಹೀಗಾಗಿ ಧ್ರುವ್ ಜುರೆಲ್ ಮೊದಲ ಟೆಸ್ಟ್ನಲ್ಲಿ ಆಡಬೇಕೆಂದು ಶಾಸ್ತ್ರಿ ಬಯಸಿದ್ದಾರೆ.

ಇನ್ನು ಸ್ಪಿನ್ ಆಲ್ರೌಂಡರ್ಗಳ ಪೈಕಿ ಇಬ್ಬರ ಹೆಸರನ್ನು ತೆಗೆದುಕೊಂಡಿರುವ ಶಾಸ್ತ್ರಿ, ವಾಷಿಂಗ್ಟನ್ ಸುಂದರ್ ಮತ್ತು ರವೀಂದ್ರ ಜಡೇಜಾ, ಈ ಇಬ್ಬರಲ್ಲಿ ಒಬ್ಬರನ್ನು ಆಡಿಸಬಹುದು ಎಂದಿದ್ದಾರೆ. ಉಳಿದಂತೆ ಶಾಸ್ತ್ರಿ ಅವರ ಪ್ಲೇಯಿಂಗ್ ಇಲೆವೆನ್‌ನಲ್ಲಿ ನಿತೀಶ್ ಕುಮಾರ್ ರೆಡ್ಡಿ ಬೌಲಿಂಗ್ ಆಲ್‌ರೌಂಡರ್ ಆಗಿ ಕಾಣಿಸಿಕೊಂಡಿದ್ದು, ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್ ಮತ್ತು ಮೊಹಮ್ಮದ್ ಸಿರಾಜ್ ವೇಗದ ಬೌಲರ್ಗಳಾಗಿ ಕಾಣಿಸಿಕೊಂಡಿದ್ದಾರೆ.

ಮೊದಲ ಟೆಸ್ಟ್‌ಗೆ ರವಿಶಾಸ್ತ್ರಿ ತಂಡ: ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ/ವಾಷಿಂಗ್ಟನ್ ಸುಂದರ್, ನಿತೀಶ್ ರೆಡ್ಡಿ, ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್ ಮತ್ತು ಮೊಹಮ್ಮದ್ ಸಿರಾಜ್.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಬ್ ಪಂತ್ (ವಿಕೆಟ್ ಕೀಪರ್), ಸರ್ಫ್ರಾಜ್ ಖಾನ್, ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ ಮತ್ತು ವಾಷಿಂಗ್ಟನ್ ಸುಂದರ್.

ಮೊದಲ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಸ್ಟೀವನ್ ಸ್ಮಿತ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಬುಶೇನ್, ಸ್ಕಾಟ್ ಬೋಲ್ಯಾಂಡ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಜೋಶ್ ಇಂಗ್ಲಿಸ್ ಮತ್ತು ಜೋಶ್ ಹ್ಯಾಜಲ್‌ವುಡ್



















