IND vs AUS: ‘ಸದ್ಯ ಅವರಿಲ್ಲ’; ಪೂಜಾರನನ್ನು ನೆನೆದು ನಿಟ್ಟುಸಿರು ಬಿಟ್ಟ ಆಸೀಸ್ ವೇಗಿ

IND vs AUS: ಮೊದಲ ಟೆಸ್ಟ್‌ಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಹೇಜಲ್‌ವುಡ್, ಪೂಜಾರ ಅವರ ತಂಡದಲ್ಲಿ ಇಲ್ಲದಿರುವುದು ನನಗೆ ಖುಷಿ ತಂದಿದೆ. ಅವರು ಅಂತಹ ಬ್ಯಾಟ್ಸ್‌ಮನ್ ಆಗಿದ್ದು, ಕ್ರೀಸ್​ನಲ್ಲಿ ಸಾಕಷ್ಟು ಸಮಯ ಕಳೆಯುವ ಸಾಮರ್ಥ್ಯ ಅವರಲ್ಲಿದೆ. ಅಲ್ಲದೆ ಎದುರಾಳಿ ತಂಡದ ಬೌಲರ್​ಗಳನ್ನು ಸುಸ್ತು ಮಾಡುವಲ್ಲಿ ಅವರು ನಿಸ್ಸೀಮರು ಎಂದಿದ್ದಾರೆ.

ಪೃಥ್ವಿಶಂಕರ
|

Updated on:Nov 21, 2024 | 5:18 PM

ಆಸ್ಟ್ರೇಲಿಯಾದಲ್ಲಿ ಆಡಿದ ಹೆಚ್ಚಿನ ಅನುಭವವಿಲ್ಲದ ಅನೇಕ ಯುವ ಆಟಗಾರರನ್ನು ಕಟ್ಟಿಕೊಂಡು ಟೀಂ ಇಂಡಿಯಾ, ಬಲಿಷ್ಠ ಕಾಂಗರೂಗಳ ವಿರುದ್ಧ ನಾಳೆ ಕಣಕ್ಕಿಳಿಯಲಿದೆ. ವಾಸ್ತವವಾಗಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ನವೆಂಬರ್ 22 ರಿಂದ ಆರಂಭವಾಗಲಿದೆ. ಈ ಸರಣಿಗೆ ಭಾರತ ತಂಡದಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.

1 / 7
ಕಳೆದ ಬಾರಿಯ ಆಸೀಸ್ ಪ್ರವಾಸದಲ್ಲಿದ್ದ ಹೆಚ್ಚಿನ ಆಟಗಾರರು ಈಗ ಭಾರತ ತಂಡದಲಿಲ್ಲ. ಅದರಲ್ಲೂ ಟೆಸ್ಟ್ ಸ್ಪೆಷಲಿಸ್ಟ್​ಗಳು ಎನಿಸಿಕೊಂಡಿದ್ದ ಅಜಿಂಕ್ಯಾ ರಹಾನೆ ಹಾಗೂ ಚೇತೇಶ್ವರ ಪೂಜಾರ ತಂಡದಲ್ಲಿ ಇಲ್ಲದಿರುವುದು ಟೀಂ ಇಂಡಿಯಾಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದ್ದರೆ, ಇತ್ತ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ನಿರಾಳ ತಂದಿದೆ.

2 / 7
ಈ ಮಾತನ್ನು ನಾವು ಹೇಳುತ್ತಿಲ್ಲ. ಸ್ವತಃ ಆಸ್ಟ್ರೇಲಿಯಾ ತಂಡದ ಆಟಗಾರರೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡುತ್ತಿದ್ದಾರೆ. ಸರಣಿ ಆರಂಭಕ್ಕೂ ಮುನ್ನ ಮಾತನಾಡಿರುವ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್‌ವುಡ್, ಪೂಜಾರ ಭಾರತ ತಂಡದಲ್ಲಿ ಇಲ್ಲದಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದು, ಪೂಜಾರ ಅವರಿಗೆ ಬೌಲಿಂಗ್ ಮಾಡುವ ಸಮಸ್ಯೆ ಇಲ್ಲ ಎಂದಿದ್ದಾರೆ.

3 / 7
ಮೊದಲ ಟೆಸ್ಟ್‌ಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಹೇಜಲ್‌ವುಡ್, ಪೂಜಾರ ಅವರ ತಂಡದಲ್ಲಿ ಇಲ್ಲದಿರುವುದು ನನಗೆ ಖುಷಿ ತಂದಿದೆ. ಅವರು ಅಂತಹ ಬ್ಯಾಟ್ಸ್‌ಮನ್ ಆಗಿದ್ದು, ಕ್ರೀಸ್​ನಲ್ಲಿ ಸಾಕಷ್ಟು ಸಮಯ ಕಳೆಯುವ ಸಾಮರ್ಥ್ಯ ಅವರಲ್ಲಿದೆ. ಅಲ್ಲದೆ ಎದುರಾಳಿ ತಂಡದ ಬೌಲರ್​ಗಳನ್ನು ಸುಸ್ತು ಮಾಡುವಲ್ಲಿ ಅವರು ನಿಸ್ಸೀಮರು.

4 / 7
ಅಲ್ಲದೆ ಪೂಜಾರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಯಾವಾಗಲೂ ಉತ್ತಮ ಪ್ರದರ್ಶನ ನೀಡುತ್ತಿದ್ದರು. ಆದರೆ ಈ ಪ್ರವಾಸದಲ್ಲಿ ಅವರು ಇಲ್ಲದಿರುವುದು ನನಗೆ ಸಂತೋಷ ತಂದಿದೆ ಎಂದಿದ್ದಾರೆ. ಆದಾಗ್ಯೂ ಟೀಂ ಇಂಡಿಯಾವನ್ನು ಹೊಗಳಿರುವ ಅವರು, ಭಾರತ ತಂಡದಲ್ಲಿ ಅನೇಕ ಪ್ರತಿಭಾವಂತ ಕ್ರಿಕೆಟಿಗರಿದ್ದು, ಅವರನ್ನು ಎದುರಿಸುವುದು ಸವಾಲಾಗಿದೆ ಎಂದಿದ್ದಾರೆ.

5 / 7
ಪೂಜಾರ ಬಗ್ಗೆ ಹೇಜಲ್‌ವುಡ್ ನೀಡಿರುವ ಹೇಳಿಕೆ ಅಕ್ಷರಶಃ ಸತ್ಯವಾಗಿದ್ದು, ಅವರ ಅಲಭ್ಯತೆ ಖಂಡಿತವಾಗಿಯೂ ತಂಡವನ್ನು ಕಾಡಲಿದೆ. ಇನ್ನು ಕಳೆದ ವರ್ಷ ಜೂನ್‌ನಲ್ಲಿ ಇಂಗ್ಲೆಂಡ್​ನಲ್ಲಿ, ಆಸ್ಟ್ರೇಲಿಯಾ ವಿರುದ್ಧ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಕೊನೆಯ ಬಾರಿಗೆ ಭಾರತ ಟೆಸ್ಟ್ ತಂಡದಲ್ಲಿ ಆಡಿದ್ದ ಪೂಜಾರ ಆ ಬಳಿಕ ತಂಡದಿಂದ ಹೊರಬಿದ್ದವರು, ಮತ್ತೆ ತಂಡವನ್ನು ಸೇರಿಕೊಂಡಿಲ್ಲ.

6 / 7
ಚೇತೇಶ್ವರ ಪೂಜಾರ ಇದುವರೆಗೆ 103 ಟೆಸ್ಟ್‌ಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಈ ವೇಳೆ ಅವರು 43.60 ರ ಸರಾಸರಿಯಲ್ಲಿ 7,195 ರನ್ ಗಳಿಸಿದ್ದಾರೆ. ಅವರು ಆಡಿರುವ 176 ಇನ್ನಿಂಗ್ಸ್‌ಗಳಲ್ಲಿ 19 ಶತಕ ಮತ್ತು 35 ಅರ್ಧಶತಕಗಳನ್ನು ಸಿಡಿಸಿದ್ದಾರೆ.

7 / 7

Published On - 5:17 pm, Thu, 21 November 24

Follow us
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ

ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!

ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP

ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ

6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​