- Kannada News Photo gallery Cricket photos India vs England 1st Test Day 2 Yashasvi Jaiswal 76 Runs India trail by 127 runs
IND vs ENG 1st Test: ಜೈಸ್ವಾಲ್ ಮೇಲೆ ನಿರೀಕ್ಷೆ: ರೋಚಕತೆ ಸೃಷ್ಟಿಸಿದ ಇಂದಿನ ಎರಡನೇ ದಿನದಾಟ
India vs England Second Test, Day 2: ಭಾರತದ ಸ್ಪಿನ್ ದಾಳಿಗೆ ನಲುಗಿದ ಆಂಗ್ಲರು ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಾಗದೆ 246 ರನ್ಗಳಿಗೆ ಆಲೌಟ್. ಮೊದಲ ದಿನದಾಟದ ಅಂತ್ಯಕ್ಕೆ ಭಾರತ 1 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿದೆ. 127 ರನ್ಗಳ ಹಿನ್ನಡೆಯಲ್ಲಿದೆ. 76 ರನ್ ಗಳಿಸಿರುವ ಜೈಸ್ವಾಲ್ ಮೇಲೆ ಎಲ್ಲರ ಕಣ್ಣಿದ್ದು ಎರಡನೇ ದಿನದಾಟ ರೋಚಕತೆ ಸೃಷ್ಟಿಸಿದೆ.
Updated on: Jan 26, 2024 | 6:45 AM

ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಪ್ರದರ್ಶನ ತೋರುತ್ತಿದೆ. ಟಾಸ್ ಸೋತರೂ ಮೊದಲ ದಿನ ಯಶಸ್ಸು ಕಂಡ ರೋಹಿತ್ ಪಡೆ ಇಂಗ್ಲೆಂಡ್ ತಂಡವನ್ನು 246 ರನ್ಗಳಿಗೆ ಆಲೌಟ್ ಮಾಡಿತು.

ಭಾರತದ ಸ್ಪಿನ್ ದಾಳಿಗೆ ನಲುಗಿದ ಆಂಗ್ಲರು ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಾಗಲಿಲ್ಲ. ಮೊದಲ ದಿನದಾಟದ ಅಂತ್ಯಕ್ಕೆ ಭಾರತ 1 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿದೆ. 127 ರನ್ಗಳ ಹಿನ್ನಡೆಯಲ್ಲಿದೆ. 76 ರನ್ ಗಳಿಸಿರುವ ಜೈಸ್ವಾಲ್ ಮೇಲೆ ಎಲ್ಲರ ಕಣ್ಣಿದ್ದು ಎರಡನೇ ದಿನದಾಟ ರೋಚಕತೆ ಸೃಷ್ಟಿಸಿದೆ.

ಟಾಸ್ ಗೆದ್ದು ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಝಾಕ್ ಕ್ರಾಲಿ (20 ರನ್) ಹಾಗೂ ಬೆನ್ ಡಕೆಟ್ (35 ರನ್) ಮೊದಲ ವಿಕೆಟ್ಗೆ 55 ರನ್ಗಳ ಜೊತೆಯಾಟ ನೀಡಿದರು. ನಂತರ ಬಂದ ಒಲಿ ಪೋಪ್ ಕೇವಲ 1 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರೆ, ತಂಡದ ಮಾಜಿ ನಾಯಕ ಜೋ ರೂಟ್ 29 ರನ್ಗಳಿಗೆ ಪೆವಿಲಿಯನ್ ಸೇರಿಕೊಂಡರು.

ಅನುಭವಿ ಜಾನಿ ಬೈರ್ಸ್ಟೋ ಕೂಡ 37 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಆದರೆ ಕೆಳಕ್ರಮಾಂಕದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ಬೆನ್ ಸ್ಟೋಕ್ಸ್ 6 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 70 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ನಾಯಕನಿಗೆ ಸಾಥ್ ನೀಡಿದ ಟಾಮ್ ಹಾರ್ಟ್ಲಿ 23 ರನ್ಗಳಿಗೆ ಕಾಣಿಕೆ ನೀಡಿದರು.

ಟೀಮ್ ಇಂಡಿಯಾ ಪರ ಸ್ಪಿನ್ನರ್‌ಗಳು ಚಾಣಾಕ್ಷತನದ ಬೌಲಿಂಗ್ ಮಾಡಿ ಇಂಗ್ಲೆಂಡ್ ಆಟಗಾರರ ಬಝ್ ಬಾಲ್ ಕ್ರಿಕೆಟ್ಗೆ ತಕ್ಕ ತಿರುಗೇಟು ನೀಡಿದರು. ತಂಡದ ಪರ ರವೀಂದ್ರ ಜಡೇಜಾ ಹಾಗೂ ಆರ್ ಅಶ್ವಿನ್ ತಲಾ 3 ವಿಕೆಟ್ ಪಡೆದರೆ, ಮತ್ತೊಬ್ಬ ಆಫ್ ಸ್ಪಿನ್ನರ್ ಅಕ್ಷರ್ ಪಟೇಲ್ ಹಾಗೂ ವೇಗಿ ಜಸ್ಪ್ರೀತ್ ಬುಮ್ರಾ ತಲಾ ವಿಕೆಟ್ ಪಡೆದರು.

ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಯಶಸ್ವಿ ಜೈಸ್ವಾಲ್ ಹಾಗೂ ನಾಯಕ ರೋಹಿತ್ ಶರ್ಮಾ (24) ಸ್ಫೋಟಕ ಆರಂಭ ನೀಡಿದರು (80 ರನ್ಗಳ ಜೊತೆಯಾಟ). ಆರಂಭದಿಂದಲೂ ಹೊಡಿಬಡಿ ಆಟಕ್ಕೆ ಮುಂದಾದ ಜೈಸ್ವಾಲ್ 70 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 70 ರನ್ ಕಲೆಹಾಕಿದ್ದಾರೆ. ಗಿಲ್ ಅಜೇಯ 14 ರನ್ ಗಳಿಸಿ ಇಂದಿಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.




