ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ನಿರೀಕ್ಷೆಯಂತೆ ಟೀಂ ಇಂಡಿಯಾ ಸ್ಪಿನ್ನರ್ಗಳು ಇಂಗ್ಲೆಂಡ್ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಸ್ತುತ ಟೀ ವಿರಾಮದ ವೇಳೆಗೆ ಇಂಗ್ಲೆಂಡ್ ತಂಡ 8 ವಿಕೆಟ್ ಕಳೆದುಕೊಂಡು 215 ರನ್ ಕಲೆಹಾಕಿದೆ. ಆಂಗ್ಲ ಬ್ಯಾಟರ್ಗಳಿಗೆ ದುಸ್ವಪ್ನವಾಗಿ ಕಾಡಿದ ಸ್ಪಿನ್ ತ್ರಿವಳಿಗಳಾದ ರವೀಂದ್ರ ಜಡೇಜಾ, ಆರ್ ಅಶ್ವಿನ್, ಅಕ್ಷರ್ ಪಟೇಲ್ ಕ್ರಮವಾಗಿ 3, 2, 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ದಿನದಾಟದ ಆರಂಭದಲ್ಲೇ ವಿಕೆಟ್ ಕಬಳಿಸುವ ಮೂಲಕ ಆಂಗ್ಲರಿಗೆ ಆರಂಭಿಕ ಆಘಾತ ನೀಡಿದ ಜಡೇಜಾ ಪ್ರಮುಖ 3 ವಿಕೆಟ್ ಕಬಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550 ವಿಕೆಟ್ ಉರುಳಿಸಿದ ಸಾಧನೆ ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧ 3 ವಿಕೆಟ್ ಪಡೆಯುವ ಮೂಲಕ ರವೀಂದ್ರ ಜಡೇಜಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550 ವಿಕೆಟ್ ಪೂರೈಸಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550ಕ್ಕೂ ಹೆಚ್ಚು ವಿಕೆಟ್ ಪಡೆದ ಭಾರತದ 7ನೇ ಬೌಲರ್ ಎನಿಸಿಕೊಂಡಿದ್ದಾರೆ.
ಜಡೇಜಾಗಿಂತ ಮೊದಲು ಅನಿಲ್ ಕುಂಬ್ಳೆ, ಕಪಿಲ್ ದೇವ್, ಜಹೀರ್ ಖಾನ್, ಹರ್ಭಜನ್ ಸಿಂಗ್, ಆರ್ ಅಶ್ವಿನ್ ಮತ್ತು ಜಾವಗಲ್ ಶ್ರೀನಾಥ್ ಈ ಸಾಧನೆ ಮಾಡಿದ ಭಾರತೀಯ ಬೌಲರ್ಗಳಾಗಿದ್ದಾರೆ.
ಅನಿಲ್ ಕುಂಬ್ಳೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಕುಂಬ್ಳೆ ಖಾತೆಯಲ್ಲಿ ಬರೋಬ್ಬರಿ 956 ವಿಕೆಟ್‌ಗಳಿವೆ.
ಭಾರತದ ಪರ ಎಲ್ಲಾ ಮೂರು ಮಾದರಿಗಳಲ್ಲಿ ಕಣಕ್ಕಿಳಿಯುವ ಜಡೇಜಾ, 68 ಟೆಸ್ಟ್ ಪಂದ್ಯಗಳಲ್ಲಿ 275 ವಿಕೆಟ್, 197 ಏಕದಿನ ಪಂದ್ಯಗಳಲ್ಲಿ 220 ವಿಕೆಟ್ ಹಾಗೂ 66 ಟಿ20 ಪಂದ್ಯಗಳಲ್ಲಿ 53 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಬ್ಯಾಟಿಂಗ್ನಲ್ಲಿ ಕೊಡುಗೆ ನೀಡುವ ಜಡ್ಡು, ಟೆಸ್ಟ್ ಕ್ರಿಕೆಟ್‌ನಲ್ಲಿ 2804 ರನ್ ಮತ್ತು ಏಕದಿನದಲ್ಲಿ 2756 ರನ್ ಗಳಿಸಿದ್ದಾರೆ.
ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
Published On - 2:36 pm, Thu, 25 January 24