AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 2nd Test: ಆಡಲೇ ಬೇಕಾದ ಒತ್ತದಲ್ಲಿ ರೋಹಿತ್ ಶರ್ಮಾ: ರೋಚಕತೆ ಸೃಷ್ಟಿಸಿದ ಇಂದಿನ ಮೂರನೇ ದಿನದಾಟ

India vs England Second Test: ಭಾರತ ಎರಡನೇ ಇನ್ನಿಂಗ್ಸ್​ನಲ್ಲಿ ದ್ವಿತೀಯ ದಿನದಾಟದ ಅಂತ್ಯಕ್ಕೆ 5 ಓವರ್​ಗಳಲ್ಲಿ 28 ರನ್ ಗಳಿಸಿತು. ರೋಹಿತ್ ಶರ್ಮಾ13 ಹಾಗೂ ಜೈಸ್ವಾಲ್ 15 ರನ್ ಗಳಿಸಿ ಕ್ರೀಸ್​ನಲ್ಲಿದ್ದಾರೆ. ಸತತ ವೈಫಲ್ಯ ಅನುಭವಿಸಿರುವ ಹಿಟ್​ಮ್ಯಾನ್ ಇಂದು ಆಡಲೇ ಬೇಕಾದ ಒತ್ತಡಕ್ಕೆ ಸಿಲುಕಿದ್ದು, ಕನಿಷ್ಠ 350 ರನ್​ಗಳ ಮುನ್ನಡೆ ಸಾಧಿಸಲೇಬೇಕಿದೆ.

Vinay Bhat
|

Updated on: Feb 04, 2024 | 7:24 AM

Share
ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಉತ್ತಮ ಮುನ್ನಡೆಯತ್ತ ದಾಪುಗಾಲಿಡುತ್ತಿದೆ. ಇಂಗ್ಲೆಂಡ್ ಅನ್ನು 253 ರನ್​ಗಳಿಗೆ ಆಲೌಟ್ ಮಾಡಿ ಎರಡನೇ ಇನ್ನಿಂಗ್ಸ್ ಶುರು ಮಾಡಿರುವ ಭಾರತ ಎರಡನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 28 ರನ್ ಗಳಿಸಿತು. 171 ರನ್​ಗಳ ಮುನ್ನಡೆಯೊಂದಿಗೆ ಇಂದು ಮೂರನೇ ದಿನದಾಟ ಆರಂಭಿಸಲಿದೆ.

1 / 7
ಮೊದಲ ದಿನದಾಟದ ಅಂತ್ಯಕ್ಕೆ ಜೈಸ್ವಾಲ್ 179 ರನ್ ಬಾರಿಸಿ ಭಾರತ ತಂಡ ಮೊತ್ತವನ್ನು 6 ವಿಕೆಟ್ ನಷ್ಟಕ್ಕೆ 336 ಕ್ಕೆ ತಂದು ನಿಲ್ಲಿಸಿದ್ದರು. ದ್ವಿತೀಯ ದಿನದಾಟದ ಆರಂಭದಲ್ಲೂ ಯಶಸ್ವಿ ಜೈಸ್ವಾಲ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅಶ್ವಿನ್ ಜೊತೆಗೂಡಿ 2ನೇ ದಿನದಾಟ ಆರಂಭಿಸಿದ ಜೈಸ್ವಾಲ್ 277 ಎಸೆತಗಳಲ್ಲಿ ಭರ್ಜರಿ ಡಬಲ್ ಸೆಂಚುರಿ ಸಿಡಿಸಿದರು. ಇದರ ನಡುವೆ ಅಶ್ವಿನ್ (20) ವಿಕೆಟ್ ಒಪ್ಪಿಸಿದರು.

2 / 7
ಹೀಗಾಗಿ ಯಶಸ್ವಿ ಜೈಸ್ವಾಲ್ ಬಿರುಸಿನ ಬ್ಯಾಟಿಂಗ್​ಗೆ ಮುಂದಾದರು. ಪರಿಣಾಮ ಜೇಮ್ಸ್​ ಅ್ಯಂಡರ್ಸನ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿ ಜಾನಿ ಬೈರ್​ಸ್ಟೋವ್​ಗೆ ಕ್ಯಾಚ್ ನೀಡಿದರು. ಇದರೊಂದಿಗೆ 290 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 19 ಫೋರ್​ಗಳನ್ನೊಳಗೊಂಡ 209 ರನ್​ಗಳ ಯಶಸ್ವಿ ಜೈಸ್ವಾಲ್ ಅವರ ಇನಿಂಗ್ಸ್ ಅಂತ್ಯಗೊಂಡಿತು.

3 / 7
ಆ ಬಳಿಕ ಬಂದ ಜಸ್​ಪ್ರೀತ್ ಬುಮ್ರಾ 6 ರನ್​ಗಳಿಸಿ ರೆಹಾನ್ ಅಹ್ಮದ್ ಎಸೆತದಲ್ಲಿ ಕ್ಯಾಚ್ ನೀಡಿದರು. ಇನ್ನು ಕೊನೆಯ ವಿಕೆಟ್​ ಆಗಿ ಮುಖೇಶ್ ಕುಮಾರ್ (0) ಔಟಾದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ​ 396 ರನ್​ ಕಲೆಹಾಕಿ ಆಲೌಟ್ ಆಯಿತು.

4 / 7
ಬಳಿಕ ತನ್ನ ಮೊದಲ ಇನ್ನಿಂಗ್ಸ್ ಶುರುಮಾಡಿದ ಇಂಗ್ಲೆಂಡ್ ತಂಡದಲ್ಲಿ ಮೊದಲ ವಿಕೆಟ್​ಗೆ 59 ರನ್​ಗಳ ಜೊತೆಯಾಟ ಕಂಡಿದ್ದು ಬಿಟ್ಟರೆ ಬಳಿಕ ವಿಕೆಟ್ ಕಳೆದುಕೊಂಡು ಸಾಗಿತು. ಆರಂಭಿಕ ಝಾಕ್ ಕ್ರೌಲಿ ಅತ್ಯಧಿಕ 76 ರನ್​ಗಳ ಇನ್ನಿಂಗ್ಸ್ ಆಡಿದರೆ, ನಾಯಕ ಬೆನ್ ಸ್ಟೋಕ್ಸ್​ 47 ರನ್​ಗಳ ಕೊಡುಗೆ ನೀಡಿದರು.

5 / 7
ಬೌಲಿಂಗ್​ನಲ್ಲಿ ಟೀಂ ಇಂಡಿಯಾ ಪರ ಮಿಂಚಿದ ಜಸ್ಪ್ರೀತ್ ಬುಮ್ರಾ ಬರೋಬ್ಬರಿ 6 ವಿಕೆಟ್ ಪಡೆದ ಸಾಧನೆ ಮಾಡಿದರು. ಕುಲ್ದೀಪ್ ಯಾದವ್ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಅಕ್ಷರ್ ಪಟೇಲ್ 1 ವಿಕೆಟ್ ಕಿತ್ತರು. ಆರ್. ಅಶ್ವಿನ್ ಅವರಿಗೆ ಒಂದು ವಿಕೆಟ್ ಕೂಡ ಸಿಗಲಿಲ್ಲ.

6 / 7
ಭಾರತ ಎರಡನೇ ಇನ್ನಿಂಗ್ಸ್​ನಲ್ಲಿ ದ್ವಿತೀಯ ದಿನದಾಟದ ಅಂತ್ಯಕ್ಕೆ 5 ಓವರ್​ಗಳಲ್ಲಿ 28 ರನ್ ಗಳಿಸಿತು. ರೋಹಿತ್ ಶರ್ಮಾ13 ಹಾಗೂ ಜೈಸ್ವಾಲ್ 15 ರನ್ ಗಳಿಸಿ ಕ್ರೀಸ್​ನಲ್ಲಿದ್ದಾರೆ. ಸತತ ವೈಫಲ್ಯ ಅನುಭವಿಸಿರುವ ಹಿಟ್​ಮ್ಯಾನ್ ಇಂದು ಆಡಲೇ ಬೇಕಾದ ಒತ್ತಡಕ್ಕೆ ಸಿಲುಕಿದ್ದು, ಕನಿಷ್ಠ 350 ರನ್​ಗಳ ಮುನ್ನಡೆ ಸಾಧಿಸಲೇಬೇಕಿದೆ.

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!