AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ರಾಜ್‌ಕೋಟ್‌ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್..!

IND vs ENG: ವಿಶಾಖಪಟ್ಟಣಂನಲ್ಲಿ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್ ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 122 ಎಸೆತಗಳಲ್ಲಿ 9 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಸಹಿತ ಶತಕ ಬಾರಿಸಿದರು.

ಪೃಥ್ವಿಶಂಕರ
|

Updated on:Feb 17, 2024 | 4:48 PM

Share
ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್​ನ ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ.

1 / 7
ಎರಡನೇ ಇನಿಂಗ್ಸ್‌ನ ಆರಂಭದಿಂದಲೂ ಯಶಸ್ವಿ ಜೈಸ್ವಾಲ್ ಉತ್ತಮ ಪ್ರದರ್ಶನ ನೀಡಿದರು. ನಾಯಕ ರೋಹಿತ್ ಶರ್ಮಾ ಎರಡನೇ ಇನ್ನಿಂಗ್ಸ್‌ನಲ್ಲಿ ಬೇಗನೇ ಔಟಾದರು. ಇದಾದ ನಂತರ ಇನ್ನಿಂಗ್ಸ್ ಜವಾಬ್ದಾರಿ ವಹಿಸಿಕೊಂಡ ಯಶಸ್ವಿ ಜೈಸ್ವಾಲ್,122 ಎಸೆತಗಳಲ್ಲಿ ಶತಕ ಪೂರೈಸಿದರು.

2 / 7
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಈ ಹಿಂದೆ ನಡೆದ ವಿಶಾಖಪಟ್ಟಣಂ ಟೆಸ್ಟ್ ಪಂದ್ಯದಲ್ಲೂ ಜೈಸ್ವಾಲ್ ಭರ್ಜರಿ ದ್ವಿಶತಕ ಸಿಡಿಸಿ, 209 ರನ್‌ಗಳ ಇನಿಂಗ್ಸ್‌ ಆಡಿದ್ದರು.

3 / 7
2023ರಲ್ಲಿ ಟೀಂ ಇಂಡಿಯಾ ಪರ ಟೆಸ್ಟ್‌ಗೆ ಪದಾರ್ಪಣೆ ಮಾಡಿದ ಜೈಸ್ವಾಲ್, ಚೊಚ್ಚಲ ಪಂದ್ಯದಲ್ಲೇ ಶತಕ ಬಾರಿಸಿದ್ದರು. ಇದುವರೆಗೆ 7 ಟೆಸ್ಟ್ ಪಂದ್ಯಗಳನ್ನಾಡಿರುವ ಜೈಸ್ವಾಲ್, ಮೂರು ಶತಕಗಳನ್ನು ಒಳಗೊಂಡಂತೆ 735 ರನ್ ಕಲೆಹಾಕಿದ್ದಾರೆ.

4 / 7
ಜೇಮ್ಸ್ ಆಂಡರ್ಸನ್ ಬೌಲ್ ಮಾಡಿದ 27ನೇ ಓವರ್‌ನಲ್ಲಿ ಒಂದು ಸಿಕ್ಸರ್, ನಂತರ ಎರಡು ಸತತ ಬೌಂಡರಿಗಳನ್ನು ಬಾರಿಸಿದ ಜೈಸ್ವಾಲ್, ನಂತರ ಟಾಮ್ ಹಾರ್ಟ್ಲಿ ಬೌಲ್ ಮಾಡಿದ 28ನೇ ಓವರ್‌ನಲ್ಲಿ ಎರಡು ಸಿಕ್ಸರ್ ಬಾರಿಸುವ ಮೂಲಕ ಶತಕದ ಸಮೀಪ ಬಂದರು.

5 / 7
ಮಾರ್ಕ್ ವುಡ್ ಬೌಲ್ ಮಾಡಿದ 39ನೇ ಓವರ್​ನ ಕೊನೆಯ ಎಸೆತದಲ್ಲಿ  ಬೌಂಡರಿ ಬಾರಿಸುವ ಮೂಲಕ ಯಶಸ್ವಿ ಶತಕ ಪೂರೈಸಿದರು. ಈ ಮೂಲಕ ಅತಿ ವೇಗವಾಗಿ 3 ಟೆಸ್ಟ್ ಶತಕಗಳನ್ನು ಸಿಡಿಸಿದ ವಿಚಾರದಲ್ಲಿ ವೀರೇಂದ್ರ ಸೆಹ್ವಾಗ್ ಮತ್ತು ಸಂಜಯ್ ಮಂಜ್ರೇಕರ್ ಅವರ ದಾಖಲೆಯನ್ನು ಸರಿಗಟ್ಟಿದರು.

6 / 7
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 445 ರನ್​ಗಳಿಗೆ ಆಲೌಟ್ ಆದರೆ, 319 ರನ್​ಗಳಿಗೆ ಇಂಗ್ಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು. 126 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ ಈ ಸುದ್ದಿ ಬರೆಯುವ ಹೊತ್ತಿಗೆ 1 ವಿಕೆಟ್ ಕಳೆದುಕೊಂಡು 185 ರನ್ ಕಲೆಹಾಕಿದೆ.

7 / 7

Published On - 4:09 pm, Sat, 17 February 24

ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!