IND vs ENG: ರಾಜ್‌ಕೋಟ್‌ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್..!
IND vs ENG: ವಿಶಾಖಪಟ್ಟಣಂನಲ್ಲಿ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್ ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 122 ಎಸೆತಗಳಲ್ಲಿ 9 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಸಹಿತ ಶತಕ ಬಾರಿಸಿದರು.
1 / 7
ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ.
2 / 7
ಎರಡನೇ ಇನಿಂಗ್ಸ್‌ನ ಆರಂಭದಿಂದಲೂ ಯಶಸ್ವಿ ಜೈಸ್ವಾಲ್ ಉತ್ತಮ ಪ್ರದರ್ಶನ ನೀಡಿದರು. ನಾಯಕ ರೋಹಿತ್ ಶರ್ಮಾ ಎರಡನೇ ಇನ್ನಿಂಗ್ಸ್‌ನಲ್ಲಿ ಬೇಗನೇ ಔಟಾದರು. ಇದಾದ ನಂತರ ಇನ್ನಿಂಗ್ಸ್ ಜವಾಬ್ದಾರಿ ವಹಿಸಿಕೊಂಡ ಯಶಸ್ವಿ ಜೈಸ್ವಾಲ್,122 ಎಸೆತಗಳಲ್ಲಿ ಶತಕ ಪೂರೈಸಿದರು.
3 / 7
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಈ ಹಿಂದೆ ನಡೆದ ವಿಶಾಖಪಟ್ಟಣಂ ಟೆಸ್ಟ್ ಪಂದ್ಯದಲ್ಲೂ ಜೈಸ್ವಾಲ್ ಭರ್ಜರಿ ದ್ವಿಶತಕ ಸಿಡಿಸಿ, 209 ರನ್‌ಗಳ ಇನಿಂಗ್ಸ್ ಆಡಿದ್ದರು.
4 / 7
2023ರಲ್ಲಿ ಟೀಂ ಇಂಡಿಯಾ ಪರ ಟೆಸ್ಟ್‌ಗೆ ಪದಾರ್ಪಣೆ ಮಾಡಿದ ಜೈಸ್ವಾಲ್, ಚೊಚ್ಚಲ ಪಂದ್ಯದಲ್ಲೇ ಶತಕ ಬಾರಿಸಿದ್ದರು. ಇದುವರೆಗೆ 7 ಟೆಸ್ಟ್ ಪಂದ್ಯಗಳನ್ನಾಡಿರುವ ಜೈಸ್ವಾಲ್, ಮೂರು ಶತಕಗಳನ್ನು ಒಳಗೊಂಡಂತೆ 735 ರನ್ ಕಲೆಹಾಕಿದ್ದಾರೆ.
5 / 7
ಜೇಮ್ಸ್ ಆಂಡರ್ಸನ್ ಬೌಲ್ ಮಾಡಿದ 27ನೇ ಓವರ್‌ನಲ್ಲಿ ಒಂದು ಸಿಕ್ಸರ್, ನಂತರ ಎರಡು ಸತತ ಬೌಂಡರಿಗಳನ್ನು ಬಾರಿಸಿದ ಜೈಸ್ವಾಲ್, ನಂತರ ಟಾಮ್ ಹಾರ್ಟ್ಲಿ ಬೌಲ್ ಮಾಡಿದ 28ನೇ ಓವರ್‌ನಲ್ಲಿ ಎರಡು ಸಿಕ್ಸರ್ ಬಾರಿಸುವ ಮೂಲಕ ಶತಕದ ಸಮೀಪ ಬಂದರು.
6 / 7
ಮಾರ್ಕ್ ವುಡ್ ಬೌಲ್ ಮಾಡಿದ 39ನೇ ಓವರ್ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಯಶಸ್ವಿ ಶತಕ ಪೂರೈಸಿದರು. ಈ ಮೂಲಕ ಅತಿ ವೇಗವಾಗಿ 3 ಟೆಸ್ಟ್ ಶತಕಗಳನ್ನು ಸಿಡಿಸಿದ ವಿಚಾರದಲ್ಲಿ ವೀರೇಂದ್ರ ಸೆಹ್ವಾಗ್ ಮತ್ತು ಸಂಜಯ್ ಮಂಜ್ರೇಕರ್ ಅವರ ದಾಖಲೆಯನ್ನು ಸರಿಗಟ್ಟಿದರು.
7 / 7
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 445 ರನ್ಗಳಿಗೆ ಆಲೌಟ್ ಆದರೆ, 319 ರನ್ಗಳಿಗೆ ಇಂಗ್ಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು. 126 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ ಈ ಸುದ್ದಿ ಬರೆಯುವ ಹೊತ್ತಿಗೆ 1 ವಿಕೆಟ್ ಕಳೆದುಕೊಂಡು 185 ರನ್ ಕಲೆಹಾಕಿದೆ.
Published On - 4:09 pm, Sat, 17 February 24