
ಇತ್ತ ಬೌಲರುಗಳಿಂದಲೂ ನಿರೀಕ್ಷಿತ ಪ್ರದರ್ಶನ ಮೂಡಿಬಂತು. ಹೀಗಾಗಿಯೇ ವಿರಾಟ್ ಕೊಹ್ಲಿ ಮೂರು ಪಂದ್ಯಗಳಲ್ಲಿ 4 ವೇಗಿ + ಒಬ್ಬರು ಆಲ್ರೌಂಡರ್ರನ್ನು ಕಣಕ್ಕಿಳಿಸಿದ್ದರು. ಇದೀಗ ಈ ಸೂತ್ರ ಕೈಕೊಟ್ಟಿದೆ. ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 76 ರನ್ಗಳಿಂದ ಹೀನಾಯ ಸೋಲನುಭವಿಸಿದೆ. ಅಷ್ಟೇ ಅಲ್ಲದೆ ಐದು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-1 ಸಮಬಲ ಸಾಧಿಸಿದೆ.

ಇದೀಗ ಓವಲ್‌ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಸಜ್ಜಾಗುತ್ತಿದೆ. ಈ ಪಂದ್ಯದಲ್ಲಿ ಅಶ್ವಿನ್‌ಗೆ ಸ್ಥಾನ ಸಿಗಲಿದೆಯಾ ಪ್ರಶ್ನೆಗೆ ಖಂಡಿತ ಸಿಗಲಿದೆ ಎಂಬ ಉತ್ತರ ಸಿಗುತ್ತದೆ. ಏಕೆಂದರೆ ಓವಲ್ ಮೈದಾನದಲ್ಲಿ ಅಶ್ವಿನ್ ಅವರ ಪ್ರದರ್ಶನ ಅತ್ಯುತ್ತಮವಾಗಿದೆ. ಅಷ್ಟೇ ಅಲ್ಲದೆ ಓವಲ್ ಮೈದಾನವು ಸ್ಪಿನ್ ಬೌಲಿಂಗ್ ಸಹಕಾರಿ. ಹೀಗಾಗಿ ಅಶ್ವಿನ್ ಸ್ಥಾನ ಬಹುತೇಕ ಖಚಿತ.

Sunil Gavaskar

ಇತ್ತ 3ನೇ ಟೆಸ್ಟ್ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ತಂಡದಲ್ಲಿ ಬದಲಾವಣೆ ಮಾಡುವ ಸುಳಿವು ನೀಡಿದ್ದಾರೆ. ಅದರಂತೆ ಬೌಲಿಂಗ್ ವಿಭಾಗದಲ್ಲಿ ವ್ಯತ್ಯಾಸಗಳು ಕಂಡು ಬರುವ ಸಾಧ್ಯತೆಯಿದೆ.

ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲಿ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಇದೀಗ ಓವಲ್‌ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್‌ನಲ್ಲಿ ಅಶ್ವಿನ್‌ಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ. ಹೀನಾಯವಾಗಿ ಸೋತಿರುವ ಭಾರತ ತಂಡಕ್ಕೆ ಸದ್ಯ ಅನುಭವಿ ಟ್ರಂಪ್ ಕಾರ್ಡ್ ಅಗತ್ಯವಿದೆ. ಹಾಗೆಯೇ ಆಲ್ರೌಂಡರ್ ರವೀಂದ್ರ ಜಡೇಜಾ ಗಾಯಗೊಂಡಿದ್ದಾರೆ. ಹೀಗಾಗಿ ಜಡ್ಡು ಸ್ಥಾನದಲ್ಲಿ ಅಶ್ವಿನ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಇನ್ನು ರಿಷಭ್ ಪಂತ್ ಅವರ ಬದಲಿಗೆ ಕೆಎಲ್ ರಾಹುಲ್ಗೆ ವಿಕೆಟ್ ಕೀಪಿಂಗ್ ಗ್ಲೌಸ್ ನೀಡುವ ಸಾಧ್ಯತೆಯಿದೆ. ಪಂತ್ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ಗೆ ಸ್ಥಾನ ಸಿಗಬಹುದು. ಇನ್ನು ಅಜಿಂಕ್ಯ ರಹಾನೆ ಅವರನ್ನು ಸಹ ತಂಡದಿಂದ ಕೈ ಬಿಡಬೇಕೆಂದು ಮಾಜಿ ಆಟಗಾರ ದಿಲೀಪ್ ವೆಂಗ್‌ಸರ್ಕರ್ ಅಭಿಪ್ರಾಯಪಟ್ಟಿದ್ದಾರೆ. ಆ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ಗೆ ಚಾನ್ಸ್ ನೀಡಬೇಕೆಂದು ವಾದಿಸಿದ್ದಾರೆ.

ಅದರಂತೆ ಓವಲ್ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾದಲ್ಲಿ 1 ಅಥವಾ 2 ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಜಡೇಜಾ ಬದಲು ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಇನ್ನು ಕೆಎಲ್ ರಾಹುಲ್ ಕೀಪಿಂಗ್ ಮಾಡಲು ಒಪ್ಪಿದರೆ ಪಂತ್ ಸ್ಥಾನ ಕಳೆದುಕೊಳ್ಳಲಿದ್ದಾರೆ. ಅವರ ಜಾಗದಲ್ಲಿ ಸೂರ್ಯಕುಮಾರ್ ಯಾದವ್ ಅಥವಾ ಹನುಮ ವಿಹಾರಿ ಸ್ಥಾನಗಿಟ್ಟಿಸಿಕೊಳ್ಳಬಹುದು.