- Kannada News Photo gallery Cricket photos India vs England ICC ODI World Cup Warm up Match 2023 Live Streaming Timings Squad Details
ಭಾರತದ ಮೊದಲ ಅಭ್ಯಾಸ ಪಂದ್ಯ ಯಾವಾಗ?, ಎಷ್ಟು ಗಂಟೆಗೆ ನೇರಪ್ರಸಾರ?: ಇಲ್ಲಿದೆ ಮಾಹಿತಿ
India vs England ODI World Cup Warm-up Match: ಭಾರತ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈಗಾಗಲೇ ಉಭಯ ತಂಡಗಳು ಗುವಾಹಟಿಗೆ ತಲುಪಿದ್ದು, ನೆಟ್ನಲ್ಲಿ ಪ್ರ್ಯಾಕ್ಟೀಸ್ ಶುರು ಮಾಡಿದ್ದಾರೆ.
Updated on:Sep 29, 2023 | 11:29 AM

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಂದು ಭಾರತದಲ್ಲಿ ಈ ಮಹತ್ವದ ಟೂರ್ನಿಗೆ ಚಾಲನೆ ಸಿಗಲಿದೆ. ಇದಕ್ಕೂ ಮುನ್ನ ಇಂದಿನಿಂದ ಅಭ್ಯಾಸ ಪಂದ್ಯಗಳು ಶುರುವಾಗಲಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಕೂಡ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ.

ಭಾರತ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈಗಾಗಲೇ ಉಭಯ ತಂಡಗಳು ಗುವಾಹಟಿಗೆ ತಲುಪಿದ್ದು, ನೆಟ್ನಲ್ಲಿ ಪ್ರ್ಯಾಕ್ಟೀಸ್ ಶುರು ಮಾಡಿದ್ದಾರೆ.

ಭಾರತ ಇಂಗ್ಲೆಂಡ್ ನಡುವಿನ ಅಭ್ಯಾಸ ಪಂದ್ಯವು ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ. ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ವೀಕ್ಷಿಸಬಹುದು. ಹಾಗೆಯೆ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಇರಲಿದೆ.

ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡ ನಿನ್ನೆ ಸಂಜೆ ಮುಂಬೈಗೆ ಬಂದಿಳಿದು ಮಧ್ಯರಾತ್ರಿ ಗುವಾಹಟಿ ತಲುಪಿದೆ. ಭಾರತ ಮತ್ತು ಇಂಗ್ಲೆಂಡ್ ಕ್ರಿಕೆಟ್ ತಂಡಗಳು ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ತಂಗಲಿವೆ ಎಂದು ವರದಿಯಾಗಿದೆ.

2023 ರ ವಿಶ್ವಕಪ್‌ಗೆ ಮುಂಚಿತವಾಗಿ ಟೀಮ್ ಇಂಡಿಯಾ ದೊಡ್ಡ ಬದಲಾವಣೆ ಮಾಡಿದೆ. ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರು ಗಾಯದಿಂದ ಸಮಯಕ್ಕೆ ಸರಿಯಾಗಿ ಚೇತರಿಸಿಕೊಳ್ಳಲು ವಿಫಲರಾದ ಕಾರಣ ರವಿಚಂದ್ರನ್ ಅಶ್ವಿನ್ ಅವರನ್ನು ಇವರ ಜಾಗಕ್ಕೆ ಸೇರಿಸಲಾಗಿದೆ.

2023ರ ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್.

2023ರ ವಿಶ್ವಕಪ್‌ಗೆ ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕುರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.
Published On - 9:37 am, Fri, 29 September 23




