AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಅಗ್ರಸ್ಥಾನಕ್ಕಾಗಿ ಟೀಂ ಇಂಡಿಯಾದ ಮೂವರ ನಡುವೆ ಪೈಪೋಟಿ

India vs England ODI: ಭಾರತ-ಇಂಗ್ಲೆಂಡ್ ಏಕದಿನ ಸರಣಿ ಜುಲೈ 14ರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ರೋಹಿತ್, ಕೊಹ್ಲಿ, ಗಿಲ್ ಪ್ರದರ್ಶನ ICC ಏಕದಿನ ರ್ಯಾಂಕಿಂಗ್ ಮೇಲೆ ಪ್ರಭಾವ ಬೀರಲಿದೆ. ಸದ್ಯ 2ನೇ ಸ್ಥಾನದಲ್ಲಿರುವ ಶುಭ್‌ಮನ್ ಗಿಲ್, ಡ್ಯಾರಿಲ್ ಮಿಚೆಲ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರುವ ಉತ್ತಮ ಅವಕಾಶ ಹೊಂದಿದ್ದಾರೆ. ಕೊಹ್ಲಿ ಮತ್ತು ರೋಹಿತ್ ಕೂಡ ರ್ಯಾಂಕಿಂಗ್ ಸುಧಾರಿಸಲು ಸಜ್ಜಾಗಿದ್ದಾರೆ. ಈ ಸರಣಿಯು ಭಾರತದ ಆಟಗಾರರ ವೈಯಕ್ತಿಕ ರ್ಯಾಂಕಿಂಗ್‌ಗೆ ನಿರ್ಣಾಯಕವಾಗಿದೆ.

ಪೃಥ್ವಿಶಂಕರ
|

Updated on:Jul 13, 2026 | 7:24 PM

Share
ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜುಲೈ 14ರಿಂದ ಅಂದರೆ ನಾಳೆಯಿಂದ ಆರಂಭವಾಗುತ್ತಿದೆ. ಈ ಸರಣಿ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೊಮ್ಮೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕೊಹ್ಲಿ ಬಹಳ ದಿನಗಳ ನಂತರ ಏಕದಿನ ಪಂದ್ಯವನ್ನಾಡುತ್ತಿದ್ದರೆ, ರೋಹಿತ್ ಶರ್ಮಾ ಈ ಹಿಂದೆ ನಡೆದಿದ್ದ ಅಫ್ಘಾನ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿದ್ದರು (PC-PTI).

1 / 6
ಇವರಿಬ್ಬರು ಈ ಸರಣಿಯಲ್ಲಿ ಅಬ್ಬರಿಸಿದರೆ ಹಲವು ದಾಖಲೆಗಳು ಸೃಷ್ಟಿಯಾಗಲಿವೆ. ಇದರ ಜೊತೆಗೆ ರೋಹಿತ್, ಕೊಹ್ಲಿ ಹಾಗೂ ಶುಭ್​ಮನ್ ಗಿಲ್ ನಡುವೆ ಇದೀಗ ಪೈಪೋಟಿ ಏರ್ಪಟ್ಟಿದೆ. ಈ ಸರಣಿಯಲ್ಲಿ ಈ ಮೂವರಲ್ಲಿ ಯಾರು ಅಮೋಘ ಪ್ರದರ್ಶನ ನೀಡುತ್ತಾರೋ ಅವರು ಏಕದಿನ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವನ್ನು ಹೊಂದಿದ್ದಾರೆ(PC-PTI).

2 / 6
ಭಾರತ ತಂಡವು ಪ್ರಸ್ತುತ ಐಸಿಸಿ ಏಕದಿನ ತಂಡದ ಶ್ರೇಯಾಂಕದಲ್ಲಿ ವಿಶ್ವದ ನಂಬರ್ ಒನ್ ಸ್ಥಾನದಲ್ಲಿದೆ. ತಂಡದ ವಿಷಯದಲ್ಲಿ ಮಾತ್ರವಲ್ಲ, ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲೂ ಭಾರತೀಯ ಆಟಗಾರರು ಪಾರುಪತ್ಯ ಮೆರೆದಿದ್ದಾರೆ. ವಿಶ್ವದ ಟಾಪ್ -4 ಏಕದಿನ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮೂವರು ಭಾರತೀಯರೇ ಇದ್ದಾರೆ. ಪ್ರಸ್ತುತ, ನ್ಯೂಜಿಲೆಂಡ್‌ನ ಸ್ಟಾರ್ ಆಟಗಾರ ಡ್ಯಾರಿಲ್ ಮಿಚೆಲ್ 815 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ(PC-PTI).

3 / 6
ಉಳಿದಂತೆ ಭಾರತದ ಏಕದಿನ ತಂಡದ ನಾಯಕ ಶುಭ್‌ಮನ್ ಗಿಲ್ 791 ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 768 ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ ಮತ್ತು ರೋಹಿತ್ ಶರ್ಮಾ 754 ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಹೀಗಾಗಿ ಈ ಸರಣಿಯಲ್ಲಿ ಯಾರು ಉತ್ತಮ ಪ್ರದರ್ಶನ ನೀಡುತ್ತಾರೋ ಅವರು ಅಗ್ರಸ್ಥಾನಕ್ಕೇರುತ್ತಾರೆ(PC-PTI).

4 / 6
ರೇಟಿಂಗ್ ಪಾಯಿಂಟ್‌ಗಳ ವಿಷಯದಲ್ಲಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಈ ಮೂರು ಪಂದ್ಯಗಳಲ್ಲಿ ಅಗ್ರಸ್ಥಾನದಲ್ಲಿರುವ ಡ್ಯಾರಿಲ್ ಮಿಚೆಲ್ ಅವರನ್ನು ಹಿಂದಿಕ್ಕುವುದು ಕಷ್ಟಕರವಾಗಬಹುದು, ಆದರೆ ಇಂಗ್ಲೆಂಡ್ ನೆಲದಲ್ಲಿ ಇವರಿಬ್ಬರ ಈ ಹಿಂದಿನ ದಾಖಲೆಯನ್ನು ಗಮನಿಸಿದರೆ ಏನು ಬೇಕಾದರೂ ನಡೆಯಬಹುದು. ರೋಹಿತ್ ಶರ್ಮಾ ಇಂಗ್ಲೆಂಡ್​ನಲ್ಲಿ ಸರಾಸರಿ 64.91 ರನ್ ಗಳಿಸಿದರೆ, ಕಿಂಗ್ ವಿರಾಟ್ ಕೊಹ್ಲಿ 51.88 ರ ಪ್ರಭಾವಶಾಲಿ ಸರಾಸರಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ(PC-PTI).

5 / 6
 ಮತ್ತೊಂದೆಡೆ, ಎರಡನೇ ಸ್ಥಾನದಲ್ಲಿರುವ ಯುವ ನಾಯಕ ಶುಭ್​ಮನ್ ಗಿಲ್ ಈ ಸರಣಿಯಲ್ಲಿ ಒಂದು ಅಥವಾ ಎರಡು ಪಂದ್ಯ ಗೆಲ್ಲುವ ಇನ್ನಿಂಗ್ಸ್‌ಗಳನ್ನು ಆಡಿದರೆ, ಅವರು ಡ್ಯಾರಿಲ್ ಮಿಚೆಲ್ ಅವರನ್ನು ಸುಲಭವಾಗಿ ಹಿಂದಿಕ್ಕಿ ವಿಶ್ವದ ನಂಬರ್ ಒನ್ ಏಕದಿನ ಬ್ಯಾಟ್ಸ್‌ಮನ್ ಆಗಿ ಇತಿಹಾಸವನ್ನು ರಚಿಸಬಹುದು.

6 / 6

Published On - 7:04 pm, Mon, 13 July 26

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು

ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ

ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್

ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ