IND vs ENG: ಟೆಸ್ಟ್​ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಭಾರತ-ಇಂಗ್ಲೆಂಡ್

| Updated By: ಝಾಹಿರ್ ಯೂಸುಫ್

Updated on: Mar 11, 2024 | 7:23 AM

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಐದು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ, ಉಳಿದ ನಾಲ್ಕು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ವಿಶೇಷ ಎಂದರೆ ಈ ಪಂದ್ಯಗಳ ಮೂಲಕ ಐತಿಹಾಸಿಕ ದಾಖಲೆಯೊಂದು ಕೂಡ ನಿರ್ಮಾಣವಾಗಿದೆ.

1 / 5
ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಸಿಕ್ಸ್​ಗಳ ಮೂಲಕ ಎಂಬುದು ವಿಶೇಷ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಸಿಕ್ಸರ್​ಗಳು ಮೂಡಿಬಂದ ಸರಣಿ ಎಂಬ ವಿಶೇಷ ದಾಖಲೆಯೊಂದು ಭಾರತ-ಇಂಗ್ಲೆಂಡ್ ನಡುವಣ ಸರಣಿಯಲ್ಲಿ ನಿರ್ಮಾಣವಾಗಿದೆ.

2 / 5
ಈ ಸರಣಿಯ ಐದು ಪಂದ್ಯಗಳಲ್ಲಿ ಸಿಡಿದಿರುವ ಒಟ್ಟು ಸಿಕ್ಸರ್​ಗಳ ಸಂಖ್ಯೆ 102. ವಿಶೇಷ ಎಂದರೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಣಿಯೊಂದರಲ್ಲಿ 100 ಕ್ಕೂ ಅಧಿಕ ಸಿಕ್ಸ್​ಗಳು ಮೂಡಿಬಂದಿವೆ.

3 / 5
ಇದಕ್ಕೂ ಮುನ್ನ 2023 ರಲ್ಲಿ ಆ್ಯಶಸ್ ಸರಣಿಯಲ್ಲಿ ಇಂಗ್ಲೆಂಡ್-ಆಸ್ಟ್ರೇಲಿಯಾ ತಂಡಗಳು ಒಟ್ಟು 74 ಸಿಕ್ಸ್​ಗಳನ್ನು ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಇಂಗ್ಲೆಂಡ್ ಜೊತೆಗೂಡಿ ಟೀಮ್ ಇಂಡಿಯಾ ಮುರಿದಿರುವುದು ವಿಶೇಷ.

4 / 5
ಇಂಡೊ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಒಟ್ಟು 102 ಸಿಕ್ಸ್​ಗಳನ್ನು ಬಾರಿಸಲಾಗಿದ್ದು, ಈ ಮೂಲಕ 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಸರಣಿಯೊಂದರಲ್ಲಿ ನೂರಕ್ಕೂ ಅಧಿಕ ಸಿಕ್ಸ್​ಗಳನ್ನು ಬಾರಿಸಿದ ವಿಶೇಷ ದಾಖಲೆಯನ್ನು ಭಾರತ ಮತ್ತು ಇಂಗ್ಲೆಂಡ್ ತಂಡಗಳು ನಿರ್ಮಿಸಿದೆ.

5 / 5
ವಿಶೇಷ ಎಂದರೆ ಈ ಸರಣಿಯಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ್ದು ಟೀಮ್ ಇಂಡಿಯಾ ಆಟಗಾರ. ಭಾರತ ತಂಡದ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಒಟ್ಟು 26 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್​ನಲ್ಲಿ ತಂಡವೊಂದರ ವಿರುದ್ಧ ಅತೀ ಹೆಚ್ಚು ಸಿಕ್ಸ್​ ಬಾರಿಸಿದ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ.