
ನಾಯಕನಾಗಿ ಮೊದಲ ಟಿ20 ಸರಣಿ ಸೋಲಿನ ಆಘಾತಕ್ಕೆ ತುತ್ತಾಗಿದ್ದ ಶ್ರೇಯಸ್ ಅಯ್ಯರ್ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ಮತ್ತು ಆಟಗಾರನಾಗಿ ಎರಡರಲ್ಲೂ ವಿಫಲರಾಗಿದ್ದರು. ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 3 ರನ್ಗಳಿಗೆ ಸುಸ್ತಾಗಿದ್ದ ಅಯ್ಯರ್, ಎರಡನೇ ಟಿ20 ಪಂದ್ಯದಲ್ಲಿ ಕೇವಲ 10 ರನ್ಗಳಿಗೆ ವಿಕೆಟ್ ಒಪ್ಪಿಸಿದ್ದರು (PC-PTI).

ಹೀಗಾಗಿ ಶ್ರೇಯಸ್ ಅಯ್ಯರ್ ಅವರ ಪ್ರದರ್ಶನದ ಬಗ್ಗೆ ಸಾಕಷ್ಟು ಪ್ರಶ್ನೆಗಳು ಮೂಡಿದ್ದವು. ಆದರೆ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಶ್ರೇಯಸ್ ಆಟಗಾರನಾಗಿ ಮೊದಲ ಯಶಸ್ಸು ಪಡೆದುಕೊಂಡಿದ್ದಾರೆ. ವರ್ಷಗಳ ಬಳಿಕ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದ ಅಯ್ಯರ್ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ (PC-BCCI).

ಇಂಗ್ಲೆಂಡ್ ವಿರುದ್ಧ ಡರ್ಹಾಮ್‌ನ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಶ್ರೇಯಸ್ ಅಯ್ಯರ್ 38 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ನಾಯಕನಾಗಿ ಇದು ಅವರ ಮೊದಲ ಟಿ20 ಅರ್ಧಶತಕವಾಗಿದ್ದರೆ, ಅವರ ವೃತ್ತಿಜೀವನದ ಒಂಬತ್ತನೇ ಟಿ20 ಅರ್ಧಶತಕವೂ ಇದಾಗಿದೆ (PC-BCCI).

ಈ ಪಂದ್ಯದಲ್ಲಿ 47 ಎಸೆತಗಳನ್ನು ಎದುರಿಸಿದ ಶ್ರೇಯಸ್ ಅಯ್ಯರ್ 6 ಬೌಂಡರಿ ಹಾಗೂ 1ಸಿಕ್ಸರ್ ಸಹಿತ 144 ರ ಸ್ಟ್ರೈಕ್ ರೇಟ್ನಲ್ಲಿ 68 ರನ್ ಬಾರಿಸಿ 18ನೇ ಓವರ್ನಲ್ಲಿ ಔಟಾದರು. ಈ ಅರ್ಧಶತಕದ ಜೊತೆಗೆ ಅಯ್ಯರ್, ಅಭಿಷೇಕ್ ಶರ್ಮಾ ಜೊತೆಗೆ 3ನೇ ವಿಕೆಟ್ಗೆ ಅರ್ಧಶತಕದ ಜೊತೆಯಾಟವನ್ನು ಕಟ್ಟಿದರು. ಇದರಿಂದಾಗಿ ಟೀಂ ಇಂಡಿಯಾ ಆರಂಭಿಕ ಆಘಾತದಿಂದ ಹೊರಬಂದಿತು (PC-BCCI).

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಅಭಿಷೇಕ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡು 189 ರನ್ ಕಲೆಹಾಕಿತು. ಇವರಿಬ್ಬರನ್ನು ಹೊರತುಪಡಿಸಿ ಶಿವಂ ದುಬೆ ಕೂಡ ಕೊನೆಯಲ್ಲಿ 42 ರನ್ಗಳ ಕಾಣಿಕೆ ನೀಡಿದರು (PC-BCCI).