AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸೆಮಿಫೈನಲ್​ನಲ್ಲೂ ನಂಬಿಕೆ ಉಳಿಸಿಕೊಳ್ಳದ ಅಭಿಷೇಕ್ ಶರ್ಮಾ

Abhishek Sharma Fails in T20 WC Semi-final: ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ನಿರೀಕ್ಷೆ ಹುಸಿ ಮಾಡಿದ್ದಾರೆ. ವಿಶ್ವಕಪ್‌ನಲ್ಲಿ ಒಂದು ಅರ್ಧಶತಕ ಗಳಿಸಿದ್ದರೂ, ನಿರ್ಣಾಯಕ ಪಂದ್ಯದಲ್ಲಿ ಬೇಗನೆ ಔಟಾಗಿ ನಿರಾಸೆ ಮೂಡಿಸಿದರು. ಆದರೆ, ಸಂಜು ಸ್ಯಾಮ್ಸನ್ ಜೀವದಾನ ಪಡೆದು ಅರ್ಧಶತಕ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ವಾಂಖೆಡೆಯಲ್ಲಿ ನಡೆದ ಈ ಪಂದ್ಯದಲ್ಲಿ ಅಭಿಷೇಕ್ ವೈಫಲ್ಯ ಕಂಡರೂ, ಸಂಜು ಹೋರಾಟ ಪ್ರದರ್ಶಿಸಿದರು.

ಪೃಥ್ವಿಶಂಕರ
|

Updated on: Mar 05, 2026 | 7:52 PM

Share
ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾರಿಂದ ಒಂದೊಳ್ಳೆ ಇನ್ನಿಂಗ್ಸ್​ನ ನಿರೀಕ್ಷೆ ಇಡಲಾಗಿತ್ತು. ಏಕೆಂದರೆ ಇಡೀ ವಿಶ್ವಕಪ್​ನಲ್ಲಿ ಅಭಿಷೇಕ್ ಶರ್ಮಾ ಒಂದು ಅರ್ಧಶತಕವನ್ನು ಬಾರಿಸಿದ್ದನ್ನು ಬಿಟ್ಟರೆ ಉಳಿದ ಪಂದ್ಯದಲ್ಲಿ ಪರಿಣಾಮಕಾರಿಯಾಗಿಲ್ಲ. ಹೀಗಾಗಿ ಮಾಡು ಇಲ್ಲವೇ ಮಡಿ ಪಂದ್ಯದಲ್ಲಾದರೂ ಅಭಿಷೇಕ್ ಅಬ್ಬರಿಸುತ್ತಾರಾ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ.

1 / 5
 ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಅದರಂತೆ ಭಾರತದ ಪರ ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಇನ್ನಿಂಗ್ಸ್ ಆರಂಭಿಸಿದರು. ಮೊದಲ ಓವರ್​ನಲ್ಲಿ ಭಾರತಕ್ಕೆ ಉತ್ತಮ ಆರಂಭವೇ ಸಿಕ್ಕಿತು. 2ನೇ ಓವರ್​ ಕೂಡ ಉತ್ತಮವಾಗಿ ಆರಂಭವಾಯಿತು.

2 / 5
ಮೊದಲ ಓವರ್​ನಲ್ಲಿ ಸಂಜು ಸ್ಯಾಮ್ಸನ್ ಎರಡು ದೊಡ್ಡ ಹೊಡೆತಗಳನ್ನು ಬಾರಿಸಿ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಇನ್ನೊಂದು ತುದಿಯಲ್ಲಿದ್ದ ಅಭಿಷೇಕ್, ಇಂಗ್ಲಿಷ್ ವೇಗಿ ಜೋಫ್ರಾ ಆರ್ಚರ್ ಎಸೆದ ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಒಂದೇ ಒಂದು ರನ್ ಗಳಿಸುವ ಮೂಲಕ ತಮ್ಮ ಖಾತೆಯನ್ನು ತೆರೆದರು.

3 / 5
ವಿಲ್ ಜ್ಯಾಕ್ಸ್ ಎಸೆದ ಎರಡನೇ ಓವರ್‌ನಲ್ಲಿಯೂ ಭರವಸೆಯ ಬ್ಯಾಟಿಂಗ್‌ ಮುಂದುವರೆಸಿದ ಅಭಿಷೇಕ್ ಎರಡು ಬೌಂಡರಿಗಳನ್ನು ಬಾರಿಸಿ ಅಭಿಮಾನಿಗಳಿಂದ ಚಪ್ಪಾಳೆಯನ್ನು ಗಿಟ್ಟಿಸಿಕೊಂಡರು. ಆದರೆ ಭಾರತದ ಮೊತ್ತ 20 ರನ್‌ಗಳಿದ್ದಾಗ ಆಘಾತ ಎದುರಾಯಿತು. ದೊಡ್ಡ ಹೊಡೆತವನ್ನು ಆಡುವ ಯತ್ನದಲ್ಲಿ ಅಭಿಷೇಕ್ ಶರ್ಮಾ ಮಿಡ್ ವಿಕೆಟ್ ದಿಕ್ಕಿನಲ್ಲಿ ಸಾಲ್ಟ್​ಗೆ ಕ್ಯಾಚ್ ನೀಡಿದರು.

4 / 5
ಅಭಿಷೇಕ್ ಔಟಾದ ಬಳಿಕ ಕ್ರೀಸ್​ಗೆ ಬಂದ ಇಶಾನ್ ಕಿಶನ್, ಸಂಜು ಸ್ಯಾಮ್ಸನ್ ಜೊತೆಗೂಡಿ ತಂಡವನ್ನು 100 ರನ್​ಗಳ ಗಡಿ ದಾಟಿಸಿದ್ದಾರೆ. ಆರಂಭದಲ್ಲೇ ಸಿಕ್ಕ ಜೀವದಾನವನ್ನು ಸದುಪಯೋಗಪಡಿಸಿಕೊಂಡ ಸಂಜು ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದ್ದಾರೆ.

5 / 5
Follow Us
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು

ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!

ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ

ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!

ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ

ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ

ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್

ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!

ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ

ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ