- Kannada News Photo gallery Cricket photos India vs England third Test Team India arrives in Leeds begins training at Headingley Stadium
India vs England: 3ನೇ ಟೆಸ್ಟ್ಗೆ ಸಜ್ಜಾಗುತ್ತಿರುವ ಟೀಮ್ ಇಂಡಿಯಾ: ಲೀಡ್ಸ್ನಲ್ಲಿ ಭರ್ಜರಿ ಅಭ್ಯಾಸ
ಈಗಾಗಲೇ ಲೀಡ್ಸ್ನ ಹೆಡಿಂಗ್ಲೆ ಸ್ಟೇಡಿಯಂಗೆ ಬಂದಿಳಿದಿರುವ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.
Updated on: Aug 23, 2021 | 8:54 AM

ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಮೂರನೇ ಟೆಸ್ಟ್ ಆಗಸ್ಟ್ 25 ಬುಧವಾರದಿಂದ ಲೀಡ್ಸ್ನಲ್ಲಿ ನಡೆಯಲಿದೆ. ಈಗಾಗಲೇ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡನೇ ಟೆಸ್ಟ್ ಗೆದ್ದು ಬೀಗಿರುವ ಭಾರತ (India) 1-0 ಯಿಂದ ಮುನ್ನಡೆ ಕಾಯ್ದುಕೊಂಡಿದೆ. ಗೆಲುವಿನ ವಿಶ್ವಾಸದಲ್ಲಿರುವ ಟೀಮ್ ಮುಂದಿನ ಪಂದ್ಯಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಈಗಾಗಲೇ ಲೀಡ್ಸ್ನ ಹೆಡಿಂಗ್ಲೆ ಸ್ಟೇಡಿಯಂಗೆ ಬಂದಿಳಿದಿರುವ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಟೀಮ್ ಇಂಡಿಯಾ ಹೆಡಿಂಗ್ಲೆಯಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೋವನ್ನು ಬಿಸಿಸಿಐ ಟ್ವೀಟ್ ಮಾಡಿದೆ.

ಬ್ಯಾಟಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆ. ಎಲ್ ರಾಹುಲ್.

ಮೂರನೇ ಟೆಸ್ಟ್ನಲ್ಲಿ ರವೀಂದ್ರ ಜಡೇಜಾ ಬದಲು ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ.

ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ರಿಷಭ್ ಪಂತ್.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ನಡೆಯಲಿರುವ ಹೆಡಿಂಗ್ಲೆ ಸ್ಟೇಡಿಯಂ.

ಮೊದಲ ಟೆಸ್ಟ್ ಪಂದ್ಯ ಮಳೆಯಿಂದ ಡ್ರಾಗೊಂಡರೆ, ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 151 ರನ್‌ಗಳಿಂದ ಜಯ ದಾಖಲಿಸಿತು. ಇದರಿಂದ 5 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ.
