ಭಾರತ-ಐರ್ಲೆಂಡ್ ಸರಣಿ ಯಾವಾಗ ಆರಂಭ?, ಎಷ್ಟು ಗಂಟೆಗೆ?: ಇಲ್ಲಿದೆ ಎಲ್ಲ ಮಾಹಿತಿ

|

Updated on: Aug 05, 2023 | 9:40 AM

India vs Ireland T20I: ಭಾರತ ಹಾಗೂ ವೆಸ್ಟ್ ಇಂಡೀಸ್ ಸರಣಿಯ ಮುಕ್ತಾಯದ ನಂತರ, ಬುಮ್ರಾ ನೇತೃತ್ವದ ಭಾರತ ಕ್ರಿಕೆಟ್ ತಂಡ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲು ಐರ್ಲೆಂಡ್‌ಗೆ ಪ್ರಯಾಣಿಸಲಿದೆ.

1 / 8
ಭಾರತ ಕ್ರಿಕೆಟ್ ತಂಡ ಸದ್ಯ ಕೆರಿಬಿನ್ ಪ್ರವಾಸದಲ್ಲಿದೆ. ಇದಾದ ಬಳಿಕ ಐರ್ಲೆಂಡ್​ಗೆ ತೆರಳಲಿದೆ. ಈಗಾಗಲೇ ಭಾರತ ಹಾಗೂ ಐರ್ಲೆಂಡ್ ನಡುವಣ ಸರಣಿಗೆ ಉಭಯ ತಂಡಗಳು ಪ್ರಕಟವಾಗಿದೆ. ಇಂದು ಐರ್ಲೆಂಡ್ ಟೀಮ್ ಪ್ರಕಟವಾಗಿದ್ದರೆ, ಮೊನ್ನೆಯಷ್ಟೆ ಬಿಸಿಸಿಐ ಭಾರತ ತಂಡವನ್ನು ಹೆಸರಿಸಿತ್ತು.

2 / 8
ವೇಗಿ ಜಸ್​ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದು ಐರ್ಲೆಂಡ್ ವಿರುದ್ಧದ ಸರಣಿಗೆ ಭಾರತದ ನಾಯಕತ್ವದ ಜವಾಬ್ದಾರಿ ವಹಿಸಲಿದ್ದಾರೆ. ಭಾರತ ಹಾಗೂ ವೆಸ್ಟ್ ಇಂಡೀಸ್ ಸರಣಿಯ ಮುಕ್ತಾಯದ ನಂತರ, ಬುಮ್ರಾ ನೇತೃತ್ವದ ಭಾರತ ಕ್ರಿಕೆಟ್ ತಂಡ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲು ಐರ್ಲೆಂಡ್‌ಗೆ ಪ್ರಯಾಣಿಸಲಿದೆ.

3 / 8
ಐರ್ಲೆಂಡ್ ವಿರುದ್ಧ ಭಾರತ ಒಟ್ಟು ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಆಗಸ್ಟ್ 18 ರಂದು ಮೊದಲ ಟಿ20 ಪಂದ್ಯ, 2ನೇ ಪಂದ್ಯವು ಆಗಸ್ಟ್ 20 ರಂದು ಜರುಗಲಿದೆ. ಅಂತೆಯೆ 3ನೇ ಪಂದ್ಯ ಆಗಸ್ಟ್ 22 ರಂದು ಆಯೋಜಿಸಲಾಗಿದೆ. ಈ ಎಲ್ಲಾ ಪಂದ್ಯಗಳಿಗೆ ಡಬ್ಲಿನ್​ನ ಮಲಾಹೈಡ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

4 / 8
ಭಾರತೀಯ ಕಾಲಮಾನದ ಪ್ರಕಾರ ಭಾರತ ಹಾಗೂ ಐರ್ಲೆಂಡ್ ನಡುವಣ ಟಿ20 ಸರಣಿ ಸಂಜೆ 7:30ಕ್ಕೆ ಶುರುವಾಗಲಿದೆ. ಇದು ಯಾವುದರಲ್ಲಿ ನೇರ ಪ್ರಸಾರ ಕಾಣಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಭಾರತ- ವಿಂಡೀಸ್ ಟಿ20 ಸರಣಿ ಆಗಸ್ಟ್ 13ಕ್ಕೆ ಮುಕ್ತಾಯಗೊಳ್ಳಲಿದೆ.

5 / 8
ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ ಹೆಚ್ಚು ಯುವ ಆಟಗಾರರನ್ನೇ ಆಯ್ಕೆ ಮಾಡಿದ್ದು, ರುತುರಾಜ್ ಗಾಯಕ್ವಾಡ್​ಗೆ ಉಪ ನಾಯಕನ ಪಟ್ಟ ನೀಡಲಾಗಿದೆ. ಇದು ಮುಂಬರುವ ಏಷ್ಯಾಕಪ್ ಮತ್ತು ಐಸಿಸಿ ಏಕದಿನ ವಿಶ್ವಕಪ್‌ಗೆ ತಂಡವನ್ನು ರಚಿಸಲು ಸಹಾಯ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ.

6 / 8
ಈ ಸರಣಿಯಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಜೊತೆಗೆ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಈ ಸರಣಿಯಿಂದ ಕೂಡ ಹೊರಗುಳಿಯಲಿದ್ದಾರೆ. ಇವರಿಬ್ಬರು ಇನ್ನೂ ಕ್ರಿಕೆಟ್ ಆಡಲು ಸಾಕಷ್ಟು ಫಿಟ್ ಆಗಿಲ್ಲ ಎಂದು ವರದಿ ಆಗಿದೆ.

7 / 8
ಭಾರತ ಟಿ20 ತಂಡ: ಜಸ್​ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಶಹಬಾಝ್ ಅಹ್ಮದ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ.

8 / 8
ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ರಾಸ್ ಅಡೇರ್, ಲೋರ್ಕನ್ ಟಕರ್, ಹ್ಯಾರಿ ಟ್ಯಾಕ್ಟರ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಫಿಯಾನ್ ಹ್ಯಾಂಡ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಥಿಯೋ ವ್ಯಾನ್ ವೀರ್‌ಕಾಮ್, ಬೆನ್ ವೈಟ್, ಕ್ರೇಗ್ ಯುಂಗ್ .