Virat Kohli: ಕ್ರಿಸ್ ಗೇಲ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Oct 27, 2022 | 3:55 PM
India vs Netherlands: ವಿಶೇಷ ಎಂದರೆ 62 ರನ್ಗಳ ನೆರವಿನಿಂದ ಕಿಂಗ್ ಕೊಹ್ಲಿ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
1 / 7
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. 44 ಎಸೆತಗಳನ್ನು ಎದುರಿಸಿದ್ದ ಕೊಹ್ಲಿ 62 ರನ್ ಬಾರಿಸುವ ಮೂಲಕ ಮಿಂಚಿದ್ದರು.
2 / 7
ವಿಶೇಷ ಎಂದರೆ 62 ರನ್ಗಳ ನೆರವಿನಿಂದ ಕಿಂಗ್ ಕೊಹ್ಲಿ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
3 / 7
ಹೌದು, ಟಿ20 ವಿಶ್ವಕಪ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಇದಕ್ಕೂ ಮುನ್ನ ಈ ಸ್ಥಾನದಲ್ಲಿ ವೆಸ್ಟ್ ಇಂಡೀಸ್ನ ಕ್ರೀಸ್ ಇದ್ದರು.
4 / 7
ಕ್ರಿಸ್ ಗೇಲ್ ಟಿ20 ವಿಶ್ವಕಪ್ನಲ್ಲಿ 31 ಇನಿಂಗ್ಸ್ ಮೂಲಕ 965 ರನ್ ಬಾರಿಸಿ ಅತ್ಯಧಿಕ ರನ್ ಬಾರಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದರು.
5 / 7
ಆದರೀಗ ಕೇವಲ 21 ಟಿ20 ವಿಶ್ವಕಪ್ ಇನಿಂಗ್ಸ್ ಮೂಲಕ ಕಿಂಗ್ ಕೊಹ್ಲಿ 989 ರನ್ ಕಲೆಹಾಕಿದ್ದಾರೆ. ಈ ಮೂಲಕ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್ನ ರನ್ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.
6 / 7
ಸದ್ಯ ಈ ಪಟ್ಟಿಯಲ್ಲಿ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಅಗ್ರಸ್ಥಾನದಲ್ಲಿದ್ದಾರೆ. ಟಿ20 ವಿಶ್ವಕಪ್ನಲ್ಲಿ 31 ಇನಿಂಗ್ಸ್ ಆಡಿರುವ ಜಯವರ್ಧನೆ 1016 ರನ್ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
7 / 7
ಸದ್ಯ ಟಿ20 ವಿಶ್ವಕಪ್ನಲ್ಲಿ 989 ರನ್ ಕಲೆಹಾಕಿರುವ ವಿರಾಟ್ ಕೊಹ್ಲಿಗೆ ಮಹೇಲ ಜಯವರ್ಧನೆ ಹೆಸರಿನಲ್ಲಿರುವ ವಿಶ್ವ ದಾಖಲೆ ಮುರಿಯಲು ಕೇವಲ 27 ರನ್ಗಳ ಅವಶ್ಯಕತೆಯಿದೆ. ಹೀಗಾಗಿ ಮುಂದಿನ ಪಂದ್ಯಗಳ ಮೂಲಕ ಟಿ20 ವಿಶ್ವಕಪ್ನ ಟಾಪ್ ರನ್ ಸರದಾರನಾಗಿ ಕಿಂಗ್ ಕೊಹ್ಲಿ ನಂಬರ್-1 ಸ್ಥಾನಕ್ಕೇರಬಹುದು.
Published On - 3:54 pm, Thu, 27 October 22