India vs New Zealand 1st T20: ರಾಂಚಿಯಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮೊದಲು ಮ್ಯಾಚ್ನಲ್ಲಿ ಗೆಲ್ಲುವ ಮೂಲಕ ಶುಭಾರಂಭ ಮಾಡುವ ಇರಾದೆಯಲ್ಲಿ ಟೀಮ್ ಇಂಡಿಯಾ ಇದ್ದರೆ, ಮತ್ತೊಂದೆಡೆ ಏಕದಿನ ಸರಣಿಯಲ್ಲಿ ಹೀನಾಯವಾಗಿ ಸೋತಿರುವ ನ್ಯೂಜಿಲೆಂಡ್ ತಂಡವು ಟಿ20 ಸರಣಿ ಗೆಲ್ಲುವ ಮೂಲಕ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ.
ಇನ್ನು ಈ ಸರಣಿಯಲ್ಲಿ ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ರೋಹಿತ್ ಶರ್ಮಾ ಕಾಣಿಸಿಕೊಳ್ಳುತ್ತಿಲ್ಲ. ಹಾಗೆಯೇ ವೈಯುಕ್ತಿಕ ಕಾರಣಗಳಿಗಾಗಿ ಕೆಎಲ್ ರಾಹುಲ್ ಹಾಗೂ ಅಕ್ಷರ್ ಪಟೇಲ್ ಹೊರಗುಳಿದಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯ ನೇತೃತ್ವದ ಯುವ ಬಳಗವು ಕಣಕ್ಕಿಳಿಯಲಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭ್ಮನ್ ಗಿಲ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಕುಲ್ದೀಪ್ ಯಾದವ್
ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್(ನಾಯಕ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
Published On - 6:33 pm, Fri, 27 January 23