ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್ನಲ್ಲಿ ಸೋತ ಬಳಿಕ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆದುಕೊಂಡು ಇದೀಗ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳ ಮುಖಾಮುಖಿಗೆ ವೇದಿಕೆ ಸಜ್ಜಾಗಿದೆ. ಇಂದು ವೆಲ್ಲಿಂಗ್ಟನ್ನ ಸ್ಕೈ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯವನ್ನು ಆಡುವ ಮೂಲಕ ಸರಣಿಗೆ ಚಾಲನೆ ಸಿಗಲಿದೆ.
ಆದರೆ, ರೋಚಕತೆ ಸೃಷ್ಟಿಸಿರುವ ಭಾರತ-ನ್ಯೂಜಿಲೆಂಡ್ ಸರಣಿಯ ಮೊದಲ ಪಂದ್ಯವೇ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಯಾಕೆಂದರೆ ವೆಲ್ಲಿಂಗ್ಟನ್ನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ಮೊದಲ ಕದನ ಮಳೆಗೆ ಆಹುತಿಯಾಗುವ ಲಕ್ಷಣಗಳು ಗೋಚರಿಸುತ್ತಿದೆ.
ವೆಲ್ಲಿಂಗ್ಟನ್ ಬಿಡುಗಡೆ ಮಾಡಿರುವ ಹವಾಮಾನ ವರದಿಯ ಪ್ರಕಾರ, ಪಂದ್ಯದ ದಿನ ಬೆಳಗ್ಗೆ ಶೇ. 98 ರಷ್ಟು ಮಳೆ ಆಗಲಿದೆ ಎಂದು ಹೇಳಿದೆ. ಮಧ್ಯಾಹ್ನದ ಹೊತ್ತಿಗೆ ಶೇ. 73, ಸಂಜೆ ವೇಳೆಗೆ ಶೇ. 60 ರಷ್ಟು ಮಳೆ ಮತ್ತು ಪಂದ್ಯ ಆರಂಭವಾಗುವ ಹೊತ್ತಿಗೆ ಶೇ. 54 ರಷ್ಟು ಮಳೆ ಸುರಿಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 12 ಗಂಟೆಗೆ ಶುರುವಾಗಲಿದೆ. ಅದೇ ನ್ಯೂಜಿಲೆಂಡ್ ಕಾಲಮಾನದ ಪ್ರಕಾರ ಪಂದ್ಯ 7:30 PM ಗೆ ಆರಂಭವಾಗುತ್ತದೆ. ಈ ಹೊತ್ತಿಗೆ ಶೇ. 54 ರಷ್ಟು ಮಳೆ ಬರುವ ಸಾಧ್ಯತೆ ಇದೆಯಂತೆ.
ಪಂದ್ಯ ಆರಂಭವಾಗುವ ಹೊತ್ತಿಗೆ ಮಳೆಯ ಪ್ರಮಾಣ ಜೋರಿದ್ದರೆ ತಡವಾಗಿ ಮ್ಯಾಚ್ ಶುರುವಾಗಬಹುದು. ತಾಪಮಾನ 15-19 ಡಿಗ್ರಿ ಸೆಲ್ಸಿಯಸ್ ನಷ್ಟು ಇರಲಿದೆಯಂತೆ. ವೆಲ್ಲಿಂಗ್ಟನ್ ಪಿಚ್ ಬ್ಯಾಟಿಂಗ್ ಸ್ನೇಹಿ ಆಗಿದ್ದು ಪಂದ್ಯ ಶುರುವಾದರೆ ದೊಡ್ಡ ಮೊತ್ತದ ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ.
ಟೀಮ್ ಇಂಡಿಯಾ ಪರ ಓಪನರ್ಗಳಾಗಿ ಯಾರು ಆಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ರಿಷಬ್ ಪಂತ್, ಇಶಾನ್ ಕಿಶನ್ ಮತ್ತು ಶುಭ್‌ಮನ್ ಗಿಲ್ ಎಂಬ ಮೂರು ಆಯ್ಕೆಗಳಿವೆ. ಸಂಜು ಸ್ಯಾಮ್ಸನ್ ಮಿಂಚಬೇಕಾದ ಒತ್ತಡದಲ್ಲಿದ್ದಾರೆ.
ನ್ಯೂಜಿಲೆಂಡ್ ತಂಡ ಸ್ಟಾರ್ ಬ್ಯಾಟರ್ ಮಾರ್ಟಿನ್ ಗಪ್ಟಿಲ್ ಮತ್ತು ಸ್ಟಾರ್ ಬೌಲರ್ ಟ್ರೆಂಟ್ ಬೌಲ್ಟ್ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಮಧ್ಯಾಹ್ನ 12 ಗಂಟೆಗೆ ಶುರುವಾಗಲಿದೆ. ಬೆಳಗ್ಗೆ 11.30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ನೇರ ಪ್ರಸಾರ ದೂರದರ್ಶನದಲ್ಲಿ ಇರಲಿದೆ. ಅಮೆಜಾನ್ ಪ್ರೈಮ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಕಾಣಲಿದೆ.
Published On - 8:54 am, Fri, 18 November 22