Updated on:Jan 21, 2023 | 1:06 PM
India vs New Zealand 2nd ODI: ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್ ನಡುವಣ 2ನೇ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿತ್ತು. ಹೈದರಾಬಾದ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶುಭ್ಮನ್ ಗಿಲ್ (208) ಆಕರ್ಷಕ ದ್ವಿಶತಕ ಬಾರಿಸಿದ್ದರು. ಇದಾಗ್ಯೂ ಭಾರತ ತಂಡವು ಮೊದಲ ಪಂದ್ಯವನ್ನು ಗೆದ್ದಿರುವುದು ಕೇವಲ 12 ರನ್ಗಳಿಂದ ಮಾತ್ರ.
ಇದೀಗ ರಾಯ್ಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ 2-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಮತ್ತೊಂದೆಡೆ ಸರಣಿಯನ್ನು ಸಮಬಲಗೊಳಿಸುವ ಇರಾದೆಯೊಂದಿಗೆ ಕಿವೀಸ್ ಬಳಗ ಕಣಕ್ಕಿಳಿದಿದೆ. ಹೀಗಾಗಿ ಉಭಯ ತಂಡಗಳಿಂದ ರೋಚಕ ಪೈಪೋಟಿ ನಿರೀಕ್ಷಿಸಬಹುದು.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.
ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಹೆನ್ರಿ ಶಿಪ್ಲಿ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
Published On - 1:05 pm, Sat, 21 January 23