India Playing 11: ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಆಡುವ ಬಳಗ ಹೀಗಿದೆ

Updated on: Jan 21, 2023 | 1:06 PM

India vs New Zealand 2nd ODI Playing 11: ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

1 / 5
India vs New Zealand 2nd ODI: ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್​ ನಡುವಣ 2ನೇ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

2 / 5
ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿತ್ತು. ಹೈದರಾಬಾದ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶುಭ್​ಮನ್ ಗಿಲ್ (208) ಆಕರ್ಷಕ ದ್ವಿಶತಕ ಬಾರಿಸಿದ್ದರು. ಇದಾಗ್ಯೂ ಭಾರತ ತಂಡವು ಮೊದಲ ಪಂದ್ಯವನ್ನು ಗೆದ್ದಿರುವುದು ಕೇವಲ 12 ರನ್​ಗಳಿಂದ ಮಾತ್ರ.

3 / 5
ಇದೀಗ ರಾಯ್​ಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ 2-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಮತ್ತೊಂದೆಡೆ ಸರಣಿಯನ್ನು ಸಮಬಲಗೊಳಿಸುವ ಇರಾದೆಯೊಂದಿಗೆ ಕಿವೀಸ್ ಬಳಗ ಕಣಕ್ಕಿಳಿದಿದೆ. ಹೀಗಾಗಿ ಉಭಯ ತಂಡಗಳಿಂದ ರೋಚಕ ಪೈಪೋಟಿ ನಿರೀಕ್ಷಿಸಬಹುದು.

4 / 5
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.

5 / 5
ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಹೆನ್ರಿ ಶಿಪ್ಲಿ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.

Published On - 1:05 pm, Sat, 21 January 23

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us