Updated on:Nov 20, 2022 | 3:07 PM
ಬೇ ಓವಲ್‌ನ ನಡೆಯುತ್ತಿರುವ ನ್ಯೂಜಿಲೆಂಡ್ ಹಾಗೂ ಭಾರತ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಈ ಆಟಗಾರ 7 ಸಿಕ್ಸರ್ ಹಾಗೂ 11 ಬೌಂಡರಿಗಳ ನೆರವಿನಿಂದ 51 ಎಸೆತಗಳಲ್ಲಿ 111 ರನ್ ಬಾರಿಸಿದರು.
ಈ ಶತಕದ ಮೂಲಕ ಸೂರ್ಯಕುಮಾರ್ ಯಾದವ್ ತಮ್ಮ ವೃತ್ತಿಜೀವನದ ಎರಡನೇ ಟಿ20 ಶತಕ ದಾಖಲಿಸಿದರು. ಸೂರ್ಯಕುಮಾರ್ ಅವರು ಇಂಗ್ಲೆಂಡ್ ವಿರುದ್ಧ ನಾಟಿಂಗ್‌ಹ್ಯಾಮ್‌ನಲ್ಲಿ ತಮ್ಮ ಮೊದಲ ಟಿ20 ಶತಕ ಭಾರಿಸಿದ್ದರು.
ಸೂರ್ಯಕುಮಾರ್ ಯಾದವ್ ಒಂದು ವರ್ಷದಲ್ಲಿ ಎರಡು ಟಿ20 ಶತಕಗಳನ್ನು ಗಳಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್. ಇದಕ್ಕೂ ಮುನ್ನ 2018ರಲ್ಲಿ ರೋಹಿತ್ ಶರ್ಮಾ ಈ ಸಾಧನೆ ಮಾಡಿದ್ದರು. ಅಲ್ಲದೆ ಟಿ20ಯಲ್ಲಿ 100 ಬೌಂಡರಿಗಳನ್ನು ಪೂರೈಸಿದ ದಾಖಲೆಯನ್ನು ಸಹ ಸೂರ್ಯಕುಮಾರ್ ಯಾದವ್ ಬರೆದರು.
ಸೂರ್ಯಕುಮಾರ್ ಯಾದವ್ ಅವರ ಬಿರುಸಿನ ಫಾರ್ಮ್ ಮುಂದುವರೆದಿದೆ. ಈ ಸ್ಫೋಟಕ ಬಲಗೈ ಬ್ಯಾಟ್ಸ್‌ಮನ್ ಎರಡನೇ ಟಿ20ಯಲ್ಲಿ ಕೇವಲ 49 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು.
ಸೂರ್ಯಕುಮಾರ್ ಯಾದವ್ ಈ ವರ್ಷ 11ನೇ ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದು ಯಾವುದೇ ಭಾರತೀಯ ಆಟಗಾರನ ಅತ್ಯುತ್ತಮ ಪ್ರದರ್ಶನವಾಗಿದೆ. ಅದೇ ಸಮಯದಲ್ಲಿ, ಒಂದು ವರ್ಷದಲ್ಲಿ 10 ಕ್ಕೂ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಬಾಬರ್ ಅಜಮ್ ದಾಖಲೆಯನ್ನು ಮುರಿದಿದ್ದಾರೆ.
Published On - 2:23 pm, Sun, 20 November 22