India Playing 11: ಟೀಮ್ ಇಂಡಿಯಾ ಆಡುವ ಬಳಗದಲ್ಲಿ 1 ಬದಲಾವಣೆ
TV9 Web | Updated By: ಝಾಹಿರ್ ಯೂಸುಫ್
Updated on:
Feb 01, 2023 | 6:38 PM
India vs New Zealand 3rd T20 Playing 11: ಮೂರು ಪಂದ್ಯಗಳ ಸರಣಿ ಕೊನೆಯ ಪಂದ್ಯ ಇದಾಗಿದ್ದು, ಹೀಗಾಗಿ ಈ ಮ್ಯಾಚ್ ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಅಂದರೆ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 21 ರನ್ಗಳಿಂದ ಜಯ ಸಾಧಿಸಿತ್ತು.
1 / 5
India vs New Zealand 3rd T20: ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ.
2 / 5
ಮೂರು ಪಂದ್ಯಗಳ ಸರಣಿ ಕೊನೆಯ ಪಂದ್ಯ ಇದಾಗಿದ್ದು, ಹೀಗಾಗಿ ಈ ಮ್ಯಾಚ್ ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಅಂದರೆ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 21 ರನ್ಗಳಿಂದ ಜಯ ಸಾಧಿಸಿತ್ತು. ಹಾಗೆಯೇ 2ನೇ ಪಂದ್ಯವನ್ನು ಟೀಮ್ ಇಂಡಿಯಾ 6 ವಿಕೆಟ್ಗಳಿಂದ ಗೆದ್ದುಕೊಂಡಿತ್ತು.
3 / 5
ಇದೀಗ ಸರಣಿ ನಿರ್ಣಾಯಕ ಪಂದ್ಯವು ಅಹಮದಾಬಾದ್ನಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಳ್ಳಲು ಉಭಯ ತಂಡಗಳು ಭರ್ಜರಿ ಪೈಪೋಟಿ ನಡೆಸಲಿದೆ. ಇನ್ನು ಇಂದಿನ ಪಂದ್ಯದಲ್ಲಿ ಚಹಾಲ್ ಬದಲಿಗೆ ಉಮ್ರಾನ್ ಮಲಿಕ್ ಕಣಕ್ಕಿಳಿಯುತ್ತಿದ್ದಾರೆ.
4 / 5
ಟೀಮ್ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಕುಮಾರ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಕುಲ್ದೀಪ್ ಯಾದವ್.
5 / 5
ನ್ಯೂಜಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಬ್ಲೇರ್ ಟಿಕ್ನರ್
Published On - 6:35 pm, Wed, 1 February 23