ಈ ಸರಣಿಯಲ್ಲಿ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಸರಣಿ ಶ್ರೇಷ್ಠ ಆಟಗಾರರಾಗಿ ಆಯ್ಕೆಯಾದರು. ಈ ಮೂಲಕ ಒಂದು ವರ್ಷದಲ್ಲಿ ಅತಿ ಹೆಚ್ಚು ಬಾರಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಪಾತ್ರರಾಗಿದ್ದಾರೆ. ಸೂರ್ಯ ಈ ವರ್ಷ ಮೂರು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಸೂರ್ಯ ನಂತರ ಈ ಪಟ್ಟಿಯಲ್ಲಿ ಕೊಹ್ಲಿ ಹೆಸರು ಎರಡನೇ ಸ್ಥಾನದಲ್ಲಿದ್ದು, ವಿರಾಟ್ 2016 ರಲ್ಲಿ ಎರಡು ಬಾರಿ ಈ ಪ್ರಶಸ್ತಿಯನ್ನು ಪಡೆದಿದ್ದರು. ಹಾಗೆಯೇ ಭುವನೇಶ್ವರ್ ಕೂಡ ಈ ವರ್ಷ ಎರಡು ಬಾರಿ ಸರಣಿಯ ಆಟಗಾರರಾಗಿ ಆಯ್ಕೆಯಾಗಿದ್ದಾರೆ.