ಭಾರತ vs ನ್ಯೂಝಿಲೆಂಡ್ ಸರಣಿಗೆ 4 ತಂಡಗಳು ಹೀಗಿವೆ
India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಬಳಿಕ ಟಿ20 ಸಿರೀಸ್ ಶುರುವಾಗಲಿದೆ. ಟಿ20 ಸರಣಿಯು ಜನವರಿ 21 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಮತ್ತು ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ.
Updated on: Jan 07, 2026 | 8:24 AM

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆದರೆ, ಆ ಬಳಿಕ ಐದು ಮ್ಯಾಚ್ಗಳ ಟಿ20 ಸರಣಿ ಜರುಗಲಿದೆ. ಈ ಸರಣಿಗಾಗಿ ಉಭಯ ತಂಡಗಳನ್ನು ಘೋಷಿಸಲಾಗಿದೆ.

ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ನ್ಯೂಝಿಲೆಂಡ್ ತಂಡ ಟಿ20 ಕ್ಯಾಪ್ಟನ್ ಆಗಿ ಮಿಚೆಲ್ ಸ್ಯಾಂಟ್ನರ್ ಕಣಕ್ಕಿಳಿಯಲಿದ್ದಾರೆ. ಇನ್ನು ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಶುಭ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಅತ್ತ ಕಿವೀಸ್ ಪಡೆಯ ಕಪ್ತಾನನಾಗಿ ಮೈಕೆಲ್ ಬ್ರೇಸ್‌ವೆಲ್ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಈ ಸರಣಿಗಾಗಿ ಆಯ್ಕೆಯಾಗಿರುವ ನಾಲ್ಕು ತಂಡಗಳು ಈ ಕೆಳಗಿನಂತಿವೆ...

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ (ವಿಕೆಟ್ ಕೀಪರ್), ಜೇಕಬ್ ಡಫಿ, ಝ್ಯಾಕ್ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಬೆವೊನ್ ಜೇಕಬ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ರಾಬಿನ್ಸನ್, ಇಶ್ ಸೋಧಿ.

ಭಾರತ ಏಕದಿನ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್.

ನ್ಯೂಝಿಲೆಂಡ್ ಏಕದಿನ ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಆದಿ ಅಶೋಕ್, ಕ್ರಿಸ್ಟಿಯನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೆ, ಝ್ಯಾಕ್ ಫೌಲ್ಕ್ಸ್, ಮಿಚ್ ಹೇ (ವಿಕೆಟ್ ಕೀಪರ್), ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಜೇಡನ್ ಲೆನಾಕ್ಸ್, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರೇ, ವಿಲ್ ಯಂಗ್.
