ಕಳಪೆ ಬ್ಯಾಟಿಂಗ್: ಪುಣೆ ಟೆಸ್ಟ್ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಭಾರತ ತಂಡದ ಬ್ಯಾಟಿಂಗ್ ಕಳಪೆಯಾಗಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಕೇವಲ 156 ರನ್‌ಗಳಿಗೆ ಆಲೌಟ್ ಆಗಿದ್ದರಿಂದ, ಎರಡನೇ ಇನ್ನಿಂಗ್ಸ್‌ನಲ್ಲಿ ಕಿವೀಸ್ಗೆ ಬೃಹತ್ ಮುನ್ನಡೆ ಸಿಕ್ಕಿತು. ಇಂತಹ ಸನ್ನಿವೇಶದಲ್ಲಿ ತಂಡದ ಅನುಭವಿ ಆಟಗಾರರು ನೆಲಕಚ್ಚಿ ಆಡಬೇಕಾಗುತ್ತದೆ. ಆದರೆ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಎರಡೂ ಇನ್ನಿಂಗ್ಸ್ಗಳಲ್ಲೂ ನಿರಾಸೆ ಮೂಡಿಸಿದರು. ರೋಹಿತ್ ಮೊದಲ ಇನ್ನಿಂಗ್ಸ್‌ನಲ್ಲಿ ಡಕ್ ಔಟಾದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 8 ರನ್ ಗಳಿಸಿದರು. ಇತ್ತ ವಿರಾಟ್ ಮೊದಲ ಇನಿಂಗ್ಸ್‌ನಲ್ಲಿ 1 ರನ್ ಬಾರಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 17 ರನ್ ಗಳಿಸಿ ಔಟಾದರು.