IND vs NZ: ಪುಣೆ ಟೆಸ್ಟ್​ನಲ್ಲಿ ಟೀಂ ಇಂಡಿಯಾ ಮಾಡಿದ ತಪ್ಪುಗಳು ಒಂದೆರಡಲ್ಲ

|

Updated on: Oct 26, 2024 | 5:18 PM

IND vs NZ: ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಕಳೆದುಕೊಂಡಿದೆ. ಪುಣೆಯಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭಾರತದ ಕಳಪೆ ಬ್ಯಾಟಿಂಗ್, ಪಿಚ್ ಅರ್ಥಮಾಡಿಕೊಳ್ಳದಿರುವುದು, ಕಳಪೆ ನಾಯಕತ್ವ ಮತ್ತು ವೇಗದ ಬೌಲರ್‌ಗಳ ನಿರಾಶಾದಾಯಕ ಪ್ರದರ್ಶನ ಸೋಲಿಗೆ ಕಾರಣವಾದವು. ರಿಷಬ್ ಪಂತ್ ಅವರ ರನ್ ಔಟ್ ಕೂಡ ಭಾರತಕ್ಕೆ ಮಾರಕವಾಯಿತು. ಟೀಂ ಇಂಡಿಯಾದ ಅನುಭವಿ ಆಟಗಾರರು ನಿರಾಸೆ ಮೂಡಿಸಿದರು.

1 / 6
ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಕಿವೀಸ್ ತಂಡ ಭಾರತ ತಂಡದ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿದೆ. 12 ವರ್ಷಗಳ ಹಿಂದೆ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿ ಸೋತಿದ್ದ ಟೀಂ ಇಂಡಿಯಾ ಇದೀಗ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಮೊದಲ ಟೆಸ್ಟ್ ಸರಣಿಯನ್ನು ಕಳೆದುಕೊಂಡಿದೆ. ಅಷ್ಟಕ್ಕೂ ಪುಣೆ ಟೆಸ್ಟ್‌ನಲ್ಲಿ ಭಾರತ ಸೋತಿದ್ಯಾಕೆ ಎಂಬುದಕ್ಕೆ ಕಾರಣ ಹುಡುಕುತ್ತಾ ಹೋದರೆ...

2 / 6
ಕಳಪೆ ಬ್ಯಾಟಿಂಗ್: ಪುಣೆ ಟೆಸ್ಟ್​ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಭಾರತ ತಂಡದ ಬ್ಯಾಟಿಂಗ್ ಕಳಪೆಯಾಗಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಕೇವಲ 156 ರನ್‌ಗಳಿಗೆ ಆಲೌಟ್ ಆಗಿದ್ದರಿಂದ, ಎರಡನೇ ಇನ್ನಿಂಗ್ಸ್‌ನಲ್ಲಿ ಕಿವೀಸ್​ಗೆ ಬೃಹತ್ ಮುನ್ನಡೆ ಸಿಕ್ಕಿತು. ಇಂತಹ ಸನ್ನಿವೇಶದಲ್ಲಿ ತಂಡದ ಅನುಭವಿ ಆಟಗಾರರು ನೆಲಕಚ್ಚಿ ಆಡಬೇಕಾಗುತ್ತದೆ. ಆದರೆ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಎರಡೂ ಇನ್ನಿಂಗ್ಸ್​ಗಳಲ್ಲೂ ನಿರಾಸೆ ಮೂಡಿಸಿದರು. ರೋಹಿತ್ ಮೊದಲ ಇನ್ನಿಂಗ್ಸ್‌ನಲ್ಲಿ ಡಕ್ ಔಟಾದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 8 ರನ್ ಗಳಿಸಿದರು. ಇತ್ತ ವಿರಾಟ್ ಮೊದಲ ಇನಿಂಗ್ಸ್‌ನಲ್ಲಿ 1 ರನ್ ಬಾರಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 17 ರನ್ ಗಳಿಸಿ ಔಟಾದರು.

3 / 6
ಪಿಚ್ ಅರ್ಥಮಾಡಿಕೊಳ್ಳಲಿಲ್ಲ: ಪುಣೆ ಪಿಚ್ ಸ್ಪಿನ್ ಸ್ನೇಹಿಯಾಗಿತ್ತು. ಹೀಗಿರುವಾಗ ಈ ಪಂದ್ಯವನ್ನು ಟೀಂ ಇಂಡಿಯಾ ಸುಲಭವಾಗಿ ಗೆಲ್ಲಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ನ್ಯೂಜಿಲೆಂಡ್‌ನ ಬೌಲರ್‌ಗಳು ಇದರ ಗರಿಷ್ಠ ಲಾಭ ಪಡೆದರು. ಸ್ಯಾಂಟ್ನರ್ ಅವರನ್ನು ಎದುರಿಸುವುದರಲ್ಲಿ ಟೀಂ ಇಂಡಿಯಾ ಆಟಗಾರರು ವಿಫಲರಾದರು. ಸ್ಯಾಂಟ್ನರ್ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್​ನಲ್ಲೂ 6 ಹೆಚ್ಚು ವಿಕೆಟ್ ಪಡೆದರು.

4 / 6
ಕಳಪೆ ನಾಯಕತ್ವ: ರೋಹಿತ್ ಶರ್ಮಾ ಯಾವಾಗಲೂ ಆಕ್ರಮಣಕಾರಿ ಆಟಕ್ಕೆ ಹೆಚ್ಚು ಒತ್ತು ನೀಡುತ್ತಾರೆ. ಆದರೆ ಪುಣೆ ಟೆಸ್ಟ್ ಪಂದ್ಯದಲ್ಲಿ ಅವರು ಹೆಚ್ಚು ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದರು. ನ್ಯೂಜಿಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗಲೂ ರೋಹಿತ್ ಶರ್ಮಾ ಆಕ್ರಮಣಕಾರಿ ಫೀಲ್ಡಿಂಗ್  ಸೆಟ್ ಮಾಡಲಿಲ್ಲ. ಇದರ ಲಾಭ ಪಡೆದ ನ್ಯೂಜಿಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಉತ್ತಮ ಜೊತೆಯಾಟ ರೂಪಿಸಿದರು. ಮಾಜಿ ನಾಯಕ ಸುನಿಲ್ ಗವಾಸ್ಕರ್ ಕೂಡ ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು.

5 / 6
ಕೈಕೊಟ್ಟ ವೇಗದ ಬೌಲರ್ಸ್​: ಈ ಪಂದ್ಯದಲ್ಲಿ ಭಾರತ ತಂಡದ ವೇಗದ ಬೌಲರ್​ಗಳು ಯಾವುದೇ ಪ್ರಭಾವ ಬೀರಲಿಲ್ಲ. ವೇಗದ ಬೌಲರ್‌ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಆಕಾಶ್ ದೀಪ್ ಎರಡೂ ಇನ್ನಿಂಗ್ಸ್‌ನಲ್ಲಿ ಒಂದೇ ಒಂದು ವಿಕೆಟ್ ಪಡೆಯಲಿಲ್ಲ. ಸ್ಪಿನ್ನರ್‌ಗಳಿಗೆ ವೇಗದ ಬೌಲರ್‌ಗಳಿಂದ ಯಾವುದೇ ಬೆಂಬಲ ಸಿಗದಿರುವುದು ಕೂಡ ಸೋಲಿಗೆ ಪ್ರಮುಖ ಕಾರಣವಾಯಿತು.

6 / 6
ರಿಷಬ್ ಪಂತ್ ರನೌಟ್: ಗೆಲ್ಲಲು 359 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತ್ತು. ಆದರೆ ಮಧ್ಯಮ ಕ್ರಮಾಂಕ ಕೈಕೊಟ್ಟಿತು. ಅದರಲ್ಲೂ ಭಾರತದ ಅತಿದೊಡ್ಡ ಮ್ಯಾಚ್ ವಿನ್ನರ್ ಎನಿಸಿಕೊಂಡಿರುವ ರಿಷಬ್ ಪಂತ್ ಬೇಡದ ರನ್ ಕದಿಯಲು ಹೋಗಿ ರನೌಟ್ ಆದರು. ಈ ರನ್ ಔಟ್ ಭಾರತದ ಸೋಲುನ್ನು ಖಚಿತಪಡಿಸಿತು.