IND vs NZ: ಬರೋಬ್ಬರಿ 71 ವಿಕೆಟ್‌; 55 ವರ್ಷಗಳ ಹಳೆಯ ದಾಖಲೆ ಉಡೀಸ್

India vs New Zealand Test Series: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಸ್ಪಿನ್ನರ್‌ಗಳು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮೂರು ಪಂದ್ಯಗಳ ಸರಣಿಯಲ್ಲಿ ಈಗಾಗಲೇ 71 ವಿಕೆಟ್‌ಗಳನ್ನು ಪಡೆದಿದ್ದು, ಇದು 55 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದೆ. ವಾಷಿಂಗ್ಟನ್ ಸುಂದರ್ 16 ವಿಕೆಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ, ಜಡೇಜಾ 15 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಮುಂಬೈ ಪಂದ್ಯದಲ್ಲಿಯೂ ಸ್ಪಿನ್ನರ್‌ಗಳು ಪ್ರಾಬಲ್ಯ ಸಾಧಿಸಿದ್ದಾರೆ.

ಪೃಥ್ವಿಶಂಕರ
|

Updated on: Nov 02, 2024 | 9:07 PM

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯ ಮುಂಬೈನಲ್ಲಿ ನಡೆಯುತ್ತಿದೆ. ಪ್ರವಾಸಿ ನ್ಯೂಜಿಲೆಂಡ್ ತಂಡ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 143 ರನ್‌ಗಳ ಮುನ್ನಡೆ ಸಾಧಿಸಿದೆ. ಆದರೆ ತಂಡದ ಕೈಯಲ್ಲಿ ಉಳಿದಿರುವುದು ಕೇವಲ 1 ವಿಕೆಟ್. ಹೀಗಾಗಿ ಮೂರನೇ ದಿನದಾಟದಲ್ಲಿ ಉಳಿದಿರುವ 1 ವಿಕೆಟ್ ಅನ್ನು ಕಬಳಿಸುವ ಮೂಲಕ ಗುರಿ ಬೆನ್ನಟ್ಟುವ ಕೆಲಸಕ್ಕೆ ಟೀಂ ಇಂಡಿಯಾ ಸಜ್ಜಾಗಿದೆ.

1 / 7
ಆದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 150 ರನ್‌ಗಳ ಗುರಿಯನ್ನು ಬೆನ್ನಟ್ಟುವುದು ತುಂಬಾ ಕಷ್ಟಕರವೆಂದು ಪರಿಗಣಿಸಲಾಗಿದೆ. ಹೀಗಿರುವಾಗ ಟೀಂ ಇಂಡಿಯಾದ ಟೆನ್ಷನ್ ಇನ್ನೂ ಕಡಿಮೆಯಾಗಿಲ್ಲ. ಇಲ್ಲಿಯವರೆಗೆ ಈ ಸರಣಿಯಲ್ಲಿ ಸ್ಪಿನ್ ಬೌಲರ್‌ಗಳ ಪ್ರಾಬಲ್ಯ ಕಂಡುಬಂದಿದೆ. ಮುಂಬೈನಲ್ಲಿಯೂ ಇದೇ ರೀತಿಯ ಘಟನೆ ಸಂಭವಿಸಿದ್ದು, ಎರಡೂ ತಂಡಗಳ ಸ್ಪಿನ್ನರ್‌ಗಳು ವಿಕೆಟ್​ಗಳ ಬೇಟೆಯನ್ನು ಮುಂದುವರೆಸಿದ್ದಾರೆ. ಇದರೊಂದಿಗೆ ಇಡೀ ಸರಣಿಯಲ್ಲಿ ಅಪರೂಪದ ದಾಖಲೆಯನ್ನು ನಿರ್ಮಿಸಿದ್ದಾರೆ.

2 / 7
 ಸದ್ಯ ಮುಂಬೈ ಟೆಸ್ಟ್​ನಲ್ಲಿ ಮೂರನೇ ಇನ್ನಿಂಗ್ಸ್ ನಡೆಯುತ್ತಿದ್ದು ಉಭಯ ತಂಡಗಳ ಸ್ಪಿನ್ನರ್​ಗಳು ಒಟ್ಟು 24 ವಿಕೆಟ್ ಕಬಳಿಸಿದ್ದಾರೆ. ಬೆಂಗಳೂರು ಮತ್ತು ಪುಣೆ ಟೆಸ್ಟ್‌ನಲ್ಲೂ ಸ್ಪಿನ್ನರ್‌ಗಳ ಪ್ರಾಬಲ್ಯ ಮೆರೆದಿದ್ದರು. ಇದುವರೆಗೆ ಈ ಸರಣಿಯಲ್ಲಿ ಸ್ಪಿನ್ ಬೌಲರ್‌ಗಳು ಒಟ್ಟು 71 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಪಿನ್ನರ್‌ಗಳು ಇಷ್ಟು ವಿಕೆಟ್‌ಗಳನ್ನು ಕಬಳಿಸುವುದು ಭಾರತದಲ್ಲಿ ಇದೇ ಮೊದಲು.

3 / 7
ಇದಕ್ಕೂ ಮುನ್ನ 1969ರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 69 ವಿಕೆಟ್‌ಗಳನ್ನು ಉರುಳಿಸುವಲ್ಲಿ ಸ್ಪಿನ್ನರ್‌ಗಳು ಯಶಸ್ವಿಯಾಗಿದ್ದರು. ಇದೀಗ 55 ವರ್ಷಗಳ ನಂತರ ಈ ಎರಡೂ ತಂಡಗಳು ಒಟ್ಟಾಗಿ ಈ ದಾಖಲೆಯನ್ನು ಮುರಿದಿವೆ.

4 / 7
ಇದನ್ನು ಹೊರತುಪಡಿಸಿ 1956ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಪಿನ್ನರ್‌ಗಳು 66 ವಿಕೆಟ್‌ಗಳನ್ನು ಪಡೆದಿದ್ದರು. 1976ರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಸರಣಿಯಲ್ಲಿ ಪ್ರಾಬಲ್ಯ ಮೆರೆದಿದ್ದ ಸ್ಪಿನ್ ಬೌಲರ್​ಗಳು 65 ವಿಕೆಟ್ ಪಡೆದರು. ಆದರೆ ಈಗ ಭಾರತದಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಪಿನ್ನರ್‌ಗಳು 70 ವಿಕೆಟ್‌ಗಳ ಗಡಿ ದಾಟಿದ್ದಾರೆ.

5 / 7
ಈ ದಾಖಲೆಯನ್ನು ಮುರಿಯುವಲ್ಲಿ ವಾಷಿಂಗ್ಟನ್ ಸುಂದರ್ ಅವರ ದೊಡ್ಡ ಪಾತ್ರವಿದೆ. ಇಲ್ಲಿಯವರೆಗೆ ಅವರು ಎರಡು ಪಂದ್ಯಗಳ 4 ಇನ್ನಿಂಗ್ಸ್‌ಗಳಲ್ಲಿ 16 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಕಬಳಿಸಿದವರಲ್ಲಿ ಅವರು ಪ್ರಸ್ತುತ ನಂಬರ್ ಒನ್ ಸ್ಥಾನದಲ್ಲಿದ್ದಾರೆ.

6 / 7
ಎರಡನೇ ಸ್ಥಾನದಲ್ಲಿ ರವೀಂದ್ರ ಜಡೇಜಾ ಹೆಸರಿದ್ದು, ಇದುವರೆಗೆ 15 ವಿಕೆಟ್ ಪಡೆದಿದ್ದಾರೆ. ಇದಲ್ಲದೇ ಮಿಚೆಲ್ ಸ್ಯಾಂಟ್ನರ್ 13 ವಿಕೆಟ್ ಪಡೆದಿದ್ದರೆ, ಆರ್.ಅಶ್ವಿನ್ ಈ ಸರಣಿಯಲ್ಲಿ ಇದುವರೆಗೆ ಕೇವಲ 9 ವಿಕೆಟ್ ಪಡೆದಿರುವುದು ಅಚ್ಚರಿ ಮೂಡಿಸಿದೆ.

7 / 7
Follow us
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್