
ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 244 ರನ್ಗಳ ಹೀನಾಯ ಸೋಲು ಕಂಡಿದೆ. ತಂಡದ ಈ ಸೋಲಿಗೆ ಅಗ್ರ ಕ್ರಮಾಂಕದ ಬ್ಯಾಟಿಂಗ್ ವಿಭಾಗದ ವೈಫಲ್ಯವೇ ಪ್ರಮುಖ ಕಾರಣ. ಅದರಲ್ಲೂ ಅನುಭವಿ ಬ್ಯಾಟರ್‌ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಶೂನ್ಯಕ್ಕೆ ಔಟಾಗಿದ್ದು ತಂಡವನ್ನು ಸಂಕಷ್ಟಕ್ಕೆ ದೂಡಿತು(PC-PTI).
ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಮೊದಲ ಓವರ್‌ನಲ್ಲೇ ಭಾರತದ ಮೂವರು ಪ್ರಮುಖ ಬ್ಯಾಟರ್‌ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಇದರ ನಡುವೆ ಶೂನ್ಯಕ್ಕೆ ಔಟಾದ ವಿರಾಟ್ ಕೊಹ್ಲಿ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ಅನಗತ್ಯ ದಾಖಲೆಯನ್ನು ಸರಿಗಟ್ಟಿದ್ದಾರೆ(PC-PTI).
ವಿರಾಟ್ ಕೊಹ್ಲಿ ಇದೀಗ ಏಕದಿನ ಕ್ರಿಕೆಟ್‌ನಲ್ಲಿ 20 ಬಾರಿ ಶೂನ್ಯಕ್ಕೆ ಔಟಾದ ಅನಗತ್ಯ ದಾಖಯೆನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರೂ ಏಕದಿನ ಕ್ರಿಕೆಟ್‌ನಲ್ಲಿ 20 ಬಾರಿ ಡಕ್‌ಗೆ ಔಟಾಗಿದ್ದ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದಾರೆ(PC-PTI).
ನಾಲ್ಕನೇ ಏಕದಿನ ಪಂದ್ಯದಲ್ಲಿ ಮ್ಯಾಟ್ ಹೆನ್ರಿ ಅವರ ಅದ್ಭುತ ಇನ್‌ಸ್ವಿಂಗ್ ಎಸೆತಕ್ಕೆ ವಿರಾಟ್ ಕೊಹ್ಲಿ ಬಲಿಯಾದರು. ಎಸೆತವನ್ನು ಎದುರಿಸಲು ಕೊಹ್ಲಿ ವಿಫಲರಾದರು. ಪರಿಣಾಮ, ಚೆಂಡು ನೇರವಾಗಿ ಸ್ಟಂಪ್‌ಗೆ ಬಡಿದು ವಿಕೆಟ್ ಹಾರಿಸಿತು(PC-PTI).
ವಿರಾಟ್ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿದ್ದರೂ, ಕಳೆದ ನಾಲ್ಕು ಏಕದಿನ ಪಂದ್ಯಗಳಲ್ಲಿ ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಇದರಿಂದ ಅಭಿಮಾನಿಗಳಿಗೆ ಕೊಂಚ ನಿರಾಸೆಯಾಗಿದೆ. ಅಕ್ಟೋಬರ್ 3ರಂದು ನ್ಯೂ ಚಂಡೀಗಢ ಮೈದಾನದಲ್ಲಿ ನಡೆದ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ವೆಸ್ಟ್ ಇಂಡೀಸ್ ವೇಗಿ ಜೇಡನ್ ಸೀಲ್ಸ್ ಎಸೆದ ಮೊದಲ ಎಸೆತದಲ್ಲೇ ಬೌಲ್ಡ್ ಆಗಿ ಪೆವಿಲಿಯನ್ ಸೇರಿದ್ದರು(PC-PTI).