Updated on:Aug 30, 2022 | 8:27 AM
ಹದಿನೈದನೆ ಆವೃತ್ತಿಯ ಏಷ್ಯಾಕಪ್ ಟೂರ್ನಿಯಲ್ಲಿ (Asia Cup 2022) ಭಾರತ ಕ್ರಿಕೆಟ್ ತಂಡ ಗೆಲುವಿನ ಮೂಲಕ ತನ್ನ ಅಭಿಯಾನ ಆರಂಭಿಸಿದೆ. ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಬದ್ದವೈರಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮನಮಮೋಹಕ ಪ್ರದರ್ಶನ ನೀಡಿದ ಭಾರತ (India vs Pakistan) 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
ಬೌಲಿಂಗ್ನಲ್ಲಿ ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ (Hardik Pandya) ಮಿಂಚಿದರೆ, ಬ್ಯಾಟಿಂಗ್ನಲ್ಲಿ ಕೂಡ ಹಾರ್ದಿಕ್ ಸ್ಫೋಟಕ ಆಟವಾಡಿದರು.
ರವೀಂದ್ರ ಜಡೇಜಾ ಹಾಗೂ 100ನೇ ಟಿ20 ಪಂದ್ಯವನ್ನಾಡಿದ ವಿರಾಟ್ ಕೊಹ್ಲಿ ಕೂಡ ಉಪಯುಕ್ತ ಕಾಣಿಕೆ ನೀಡಿದರು.
100ನೇ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ ವಿರಾಟ್ ಕೊಹ್ಲಿ ದೊಡ್ಡ ಮೊತ್ತದ ಸೂಚನೆ ನೀಡಿದರು. ಆದರೆ 35 ರನ್ ಬಾರಿಸಿದ್ದಾಗ ಔಟಾದರು.
ಭಾರತ ಪರ ಭುವನೇಶ್ವರ್ 4 ವಿಕೆಟ್ ಪಡೆದರೆ, ಹಾರ್ದಿಕ್ 3 ವಿಕೆಟ್ ಕಿತ್ತು ಮಿಂಚಿದರು.
29 ಎಸೆತಗಳಲ್ಲಿ ತಲಾ 2 ಫೋರ್, ಸಿಕ್ಸರ್ ಸಿಡಿಸಿದ್ದ ಜಡ್ಡು 35 ರನ್ಗೆ ಔಟಾದರು.
ಪಾಂಡ್ಯ ಕೇವಲ 17 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಿಡಿಸಿ ಅಜೇಯ 33 ರನ್ ಬಾರಿಸಿದರು.
Published On - 8:27 am, Tue, 30 August 22