- Kannada News Photo gallery Cricket photos India vs Pakistan Asia Cup 2023 match tomorrow Team India Practice started in Sri Lanka
ನಾಳೆ ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ: ಟೀಮ್ ಇಂಡಿಯಾ ತಯಾರಿ ಹೇಗಿದೆ?
India vs Pakistan, Asia Cup 2023: ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡದ ಸೆಪ್ಟೆಂಬರ್ 2 ರಂದು ಕ್ಯಾಂಡಿಯ ಪಲ್ಲೆಕೆಲ್ಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬಾಬರ್ ಅಜಮ್ ನೇತೃತ್ವದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಟೀಮ್ ಇಂಡಿಯಾ ಆಟಗಾರರು ಸೆಪ್ಟೆಂಬರ್ 30ರ ಸಂಜೆ ದ್ವೀಪ ರಾಷ್ಟ್ರಕ್ಕೆ ತಲುಪಿದ್ದು, ಒಂದು ದಿನದ ವಿಶ್ರಾಂತಿ ಬಳಿಕ ಅಭ್ಯಾಸ ಶುರು ಮಾಡಿಕೊಂಡಿದ್ದಾರೆ.
Updated on:Sep 01, 2023 | 7:39 AM

ಏಷ್ಯಾಕಪ್ 2023 ಟೂರ್ನಿಗೆ ಅದ್ಧೂರಿ ಚಾಲನೆ ಸಿಕ್ಕಾಗಿದೆ. ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ನೇಪಾಳ ವಿರುದ್ಧ ಪಾಕಿಸ್ತಾನ ತಂಡ ದಾಖಲೆಯ 238 ರನ್ಗಳ ಅಮೋಘ ಗೆಲುವು ಕಂಡಿತು. ಗುರುವಾರ ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ ಜಯ ಸಾಧಿಸಿತು.

ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡದ ಸೆಪ್ಟೆಂಬರ್ 2 ರಂದು ಕ್ಯಾಂಡಿಯ ಪಲ್ಲೆಕೆಲ್ಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬಾಬರ್ ಅಜಮ್ ನೇತೃತ್ವದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.

ಟೀಮ್ ಇಂಡಿಯಾ ಆಟಗಾರರು ಸೆಪ್ಟೆಂಬರ್ 30ರ ಸಂಜೆ ದ್ವೀಪ ರಾಷ್ಟ್ರಕ್ಕೆ ತಲುಪಿದ್ದು, ಒಂದು ದಿನದ ವಿಶ್ರಾಂತಿ ಬಳಿಕ ಅಭ್ಯಾಸ ಶುರು ಮಾಡಿಕೊಂಡಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಠಿಣ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು. ಜೊತೆಗೆ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಕೂಡ ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯ ಸೆಪ್ಟೆಂಬರ್ 2 ರಂದು ಮಧ್ಯಾಹ್ನ 3 ಗಂಟೆಯಿಂದ ಆರಂಭವಾಗಲಿದೆ. ಈ ಪಂದ್ಯಗಳ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್ಸ್ಟಾರ್ ಆ್ಯಪ್ ಹಾಗೂ ವೆಬ್ಸೈಟ್ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಏಷ್ಯಾಕಪ್ನಲ್ಲಿ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ ಫೋರ್ ಹಂತಕ್ಕೆ ತೇರ್ಗಡೆಯಾಗುತ್ತದೆ. ಅಂತಿಮವಾಗಿ, ಸೂಪರ್ ಫೋರ್‌ನ ಅಗ್ರ ಎರಡು ತಂಡಗಳು ಫೈನಲ್ನಲ್ಲಿ ಮುಖಾಮುಖಿ ಆಗಲಿದೆ.

ಈ ಬಾರಿಯ ಏಷ್ಯಾಕಪ್ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿರುವುದು ವಿಶೇಷ. ಅಂದರೆ ಏಷ್ಯಾಕಪ್ 2023 ರ ಆಯೋಜನೆಯ ಹಕ್ಕನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಂದಿದೆ. ಆದರೆ ಪಾಕ್ನಲ್ಲಿ ಟೂರ್ನಿ ಆಯೋಜಿಸಿದರೆ ಭಾರತ ಪಾಲ್ಗೊಳ್ಳದ ಕಾರಣ ಟೀಮ್ ಇಂಡಿಯಾದ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸುತ್ತಿದೆ.

ಈಗಾಗಲೇ ಪಾಕಿಸ್ತಾನ ನೇಪಾಳ ವಿರುದ್ಧ ಮೊದಲ ಪಂದ್ಯವನ್ನು ಗೆದ್ದು ಉತ್ಸಾಹದಲ್ಲಿದೆ. ಭಾರತ ವಿರುದ್ಧ ಅದೇ ಪ್ರದರ್ಶನವನ್ನು ಮುಂದುವರೆಸುವ ತವಕದಲ್ಲಿದೆ. ನಾಯಕ ಬಾಬರ್ ಅಜಮ್ ಭರ್ಜರಿ ಫಾರ್ಮ್ನಲ್ಲಿದ್ದು, ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದರು. ಆದರೆ, ಸ್ಟಾರ್ ವೇಗಿ ಶಾಹಿನ್ ಅಫ್ರಿದಿ ಇಂಜುರಿ ತಂಡಕ್ಕೆ ತಲೆನೋವಾಗಿದೆ.

ಆದರೆ, ವೆದರ್ ಡಾಟ್ ಕಾಮ್ ವರದಿ ಪ್ರಕಾರ, ಸೆಪ್ಟೆಂಬರ್ 2 ರಂದು ಕ್ಯಾಂಡಿಯಲ್ಲಿ ಭಾರತ-ಪಾಕ್ ಪಂದ್ಯಕ್ಕೆ ಮಳೆಯ ಭೀತಿಯಿದೆ. ಈ ಪಂದ್ಯದ ವೇಳೆ ಶೇ.90 ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ವೆಬ್‌ಸೈಟ್ ಹಾಗೂ ಹಲವು ಹವಾಮಾನ ವರದಿಗಳು ಹೇಳಿವೆ. ಇದರ ಹೊರತಾಗಿ, ಆರ್ದ್ರತೆಯು ಸುಮಾರು 85 ಪ್ರತಿಶತದಷ್ಟು ಇರಬಹುದೆಂದು ನಿರೀಕ್ಷಿಸಲಾಗಿದ್ದು, ತಾಪಮಾನವು ಸುಮಾರು 27 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ವರದಿಯಾಗಿದೆ.
Published On - 7:38 am, Fri, 1 September 23
