AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಭಾರತ-ಪಾಕಿಸ್ತಾನ ಮೀಸಲು ದಿನದಾಟ ಇಂದು ಎಷ್ಟು ಗಂಟೆಗೆ ಆರಂಭ?

India vs Pakistan Reserve Day Match Timings: ಏಷ್ಯಾಕಪ್ 2023 ರಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಮೀಸಲು ದಿನದಾಟದ ಪಂದ್ಯ ನಿನ್ನೆ ಎಷ್ಟು ಓವರ್​ಗೆ ನಿಲ್ಲಿಸಲಾಗಿತ್ತೊ ಅಲ್ಲಿಂದಲೇ ಮುಂದುವರೆಯಲಿದೆ. ಅಂದರೆ ಭಾರತ 24.1 ಓವರ್​ಗಳಿಂದ ಬ್ಯಾಟಿಂಗ್ ಮುಂದುವರೆಸಲಿದೆ. ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಎಷ್ಟು ಗಂಟೆಗೆ ಶುರುವಾಗಲಿದೆ?.

Vinay Bhat
|

Updated on: Sep 11, 2023 | 7:23 AM

Share
ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ ಏಷ್ಯಾಕಪ್ 2023 ರಲ್ಲಿ ಆಯೋಜಿಸಿದ್ದ ಸೂಪರ್-4 ಹಂತದ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಮಳೆಯಿಂದಾಗಿ ಪೂರ್ಣಗೊಳ್ಳಲಿಲ್ಲ. ಹೀಗಾಗಿ ಇಂದು (ಸೆ. 11) ಮೀಸಲು ದಿನದಾಟ ನಡೆಯಲಿದೆ. ಹಾಗಾದರೆ, ಇಂದು ಇಂಡೋ-ಪಾಕ್ ಮೀಸಲು ದಿನದಾಟ ಎಷ್ಟು ಗಂಟೆಗೆ ಆರಂಭವಾಗಲಿದೆ ನೋಡೋಣ.

1 / 8
ಭಾರತ ಹಾಗೂ ಪಾಕಿಸ್ತಾನ ನಡುವಣ ಮೀಸಲು ದಿನದಾಟದ ಪಂದ್ಯ ನಿನ್ನೆ ಎಷ್ಟು ಓವರ್​ಗೆ ನಿಲ್ಲಿಸಲಾಗಿತ್ತೊ ಅಲ್ಲಿಂದಲೇ ಮುಂದುವರೆಯಲಿದೆ. ಅಂದರೆ ಭಾರತ 24.1 ಓವರ್​ಗಳಿಂದ ಬ್ಯಾಟಿಂಗ್ ಮುಂದುವರೆಸಲಿದೆ. ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ.

2 / 8
ಇದು ಮೀಸಲು ದಿನದ ಪಂದ್ಯ ಆಗಿರುವುದರಿಂದ ಭಾನುವಾರದ ಪಂದ್ಯದ ರೀತಿಯಲ್ಲೇ ಸಾಗಲಿದೆ. ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್​ನಲ್ಲಿ, ಬೌಲಿಂಗ್​ನಲ್ಲಿ, ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡುವಂತಿಲ್ಲ. ಭಾರತ ಪರ ಕೊಹ್ಲಿ ಹಾಗೂ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಈ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲು ಎರಡೂ ಇನ್ನಿಂಗ್ಸ್‌ಗಳಲ್ಲಿ ಕನಿಷ್ಠ 20 ಓವರ್‌ಗಳನ್ನು ಬೌಲ್ ಮಾಡಬೇಕಾಗುತ್ತದೆ.

3 / 8
ಭಾನುವಾರ ಟಾಸ್ ಸೋತು ಮೊದಲು ಬ್ಯಾಟಿಂಗ್ ಶುರುಮಾಡಿದ ಭಾರತಕ್ಕೆ ಓಪನರ್​ಗಳಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಸ್ಫೋಟಕ ಆರಂಭ ಒದಗಿಸಿದರು. ರೋಹಿತ್-ಗಿಲ್ ಪಾಕ್ ಬೌಲರ್​ಗಳ ಬೆವರಿಳಿಸಿ ಭರ್ಜರಿಯಾಗಿ ಬ್ಯಾಟ್ ಬೀಸಿದರು.

4 / 8
ಗಿಲ್ ಬ್ಯಾಟ್​ನಿಂದ 37 ಎಸೆತಗಳಲ್ಲಿ ಅರ್ಧಶತಕ ಮೂಡಿಬಂದರೆ, ರೋಹಿತ್ ಶರ್ಮಾ 42 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದರು. ಅಲ್ಲದೆ 16.3 ಓವರ್​ಗಳಲ್ಲಿ 121 ರನ್​ಗಳ​ ಜೊತೆಯಾಟವಾಡಿದರು. ರೋಹಿತ್ ಶರ್ಮಾ 49 ಎಸೆತಗಳಲ್ಲಿ (4 ಸಿಕ್ಸ್, 6 ಫೋರ್) 56 ರನ್ ಮತ್ತು ಗಿಲ್ 52 ಎಸೆತಗಳಲ್ಲಿ (10 ಫೋರ್) 58 ರನ್ ಬಾರಿಸಿ ಔಟಾದರು.

5 / 8
ಮೂರನೇ ವಿಕೆಟ್​ಗೆ ಜೊತೆಯಾದ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ತಂಡದ ಮೊತ್ತಕ್ಕೆ 24 ರನ್ ಸೇರಿಸಿದರು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಆಗ ಟೀಮ್ ಇಂಡಿಯಾ 24.1 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 147 ರನ್​ ಕಲೆಹಾಕಿತ್ತು. ಎಷ್ಟುಹೊತ್ತು ಕಾದರೂ ಮಳೆ ನಿಲ್ಲದ ಕಾರಣ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಯಿತು.

6 / 8
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.

7 / 8
ಪಾಕಿಸ್ತಾನ ಪ್ಲೇಯಿಂಗ್ XI: ಫಖರ್ ಝಮಾನ್, ಇಮಾಮ್ ಉಲ್ ಹಕ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಸಲ್ಮಾನ್ ಆಘಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.

8 / 8
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?