ಐಸಿಸಿ ಟಿ20 ವಿಶ್ವಕಪ್ (T20 World Cup) ಮಹಾ ಟೂರ್ನಿಯಲ್ಲಿ ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯ ಇದೇ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯಲಿದೆ.
ಭಾರತ ಹಾಗೂ ಪಾಕಿಸ್ತಾನ ತಂಡದ ಆಟಗಾರರು ಈಗಾಗಲೇ ಎಮ್ಸಿಜಿಗೆ ಬಂದಿಳಿದಿದ್ದು ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.
ಶುಕ್ರವಾರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ಮೈದಾನದಲ್ಲಿ ಕೆಲ ಸಮಯ ಬೆವರು ಹರಿಸಿದರು.
ವಿರಾಟ್ ಕೊಹ್ಲಿ ಶುಕ್ರವಾರ ಪ್ರ್ಯಾಕ್ಟೀಸ್ನಲ್ಲಿ ಪಾಲ್ಗೊಳ್ಳಲಿಲ್ಲ. ಇಂದು ಎಲ್ಲ ಆಟಗಾರರು ಕಡ್ಡಾಯವಾಗಿ ಅಭ್ಯಾಸ ನಡೆಸಬೇಕಿದೆ.
ಪಾಕ್ ವಿರುದ್ಧದ ಪಂದ್ಯದಿಂದ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್ ಅವರನ್ನು ಹೊರಗಿಡುವ ನಿರ್ಧಾರವನ್ನು ಭಾರತ ತೆಗೆದುಕೊಂಡಿದೆ ಎನ್ನಲಾಗಿದೆ. ಪಂತ್ ಬದಲು ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಂತೆ.
ಮೊಹಮ್ಮದ್ ಶಮಿ ಫಿಟ್ ಆಗಿದ್ದು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.
ಈ ರಣರೋಚಕ ಕದನ ಆರಂಭಕ್ಕೂ ಮುನ್ನ ಶುಭ ಸುದ್ದಿಯೊಂದು ಸಿಕ್ಕಿದೆ. ಮೆಲ್ಬೋರ್ನ್ನಲ್ಲಿ (Melbourne) ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಈಗ ಕಡಿಮೆ ಆಗಿದ್ದು, ಪಂದ್ಯ ನಡೆಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಶನಿವಾರದ ಆಸ್ಟ್ರೇಲಿಯಾ ಕಾಲಮಾನ ಮಧ್ಯಾಹ್ನ 3 ಗಂಟೆಯ ವರೆಗೆ ಮೆಲ್ಬೋರ್ನ್ನಲ್ಲಿ ಮಳೆ ಸುರಿದಿಲ್ಲ. ಭಾನುವಾರ ಕೂಡ ಮಳೆ ಬರುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗಿದೆ.
ಮೆಲ್ಬೋರ್ನ್ ಗ್ರೌಂಡ್ನಲ್ಲಿ ಪಾಕಿಸ್ತಾನ ತಂಡದ ಆಟಗಾರರು ಕೂಡ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.
Published On - 10:31 am, Sat, 22 October 22