- Kannada News Photo gallery Cricket photos India vs Pakistan ICC World Cup 2023 Rohit Sharma becomes third batter to hit 300 sixes in ODIs
ಸಿಕ್ಸರ್ಗಳ ತ್ರಿಶತಕ ಸಿಡಿಸಿದ ರೋಹಿತ್; ಹಿಟ್ಮ್ಯಾನ್ ಅಬ್ಬರಕ್ಕೆ ಹಳೆಯ ದಾಖಲೆಗಳೆಲ್ಲ ಉಡೀಸ್..!
Rohit Sharma Records: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಹಮದಾಬಾದ್ನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಬರೋಬ್ಬರಿ 6 ಸಿಕ್ಸರ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ 6 ಸಿಕ್ಸರ್ಗಳ ಮೂಲಕ ರೋಹಿತ್ ಶರ್ಮಾ ಏಕದಿನದಲ್ಲಿ 300 ಸಿಕ್ಸರ್ಗಳನ್ನು ಬಾರಿಸಿದ ವಿಶ್ವದ ಮೂರನೇ ಬ್ಯಾಟ್ಸ್ಮನ್ ಮತ್ತು ಭಾರತದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
Updated on: Oct 15, 2023 | 6:11 AM

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಹಮದಾಬಾದ್ನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಬರೋಬ್ಬರಿ 6 ಸಿಕ್ಸರ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಈ 6 ಸಿಕ್ಸರ್ಗಳ ಮೂಲಕ ರೋಹಿತ್ ಶರ್ಮಾ ಏಕದಿನದಲ್ಲಿ 300 ಸಿಕ್ಸರ್ಗಳನ್ನು ಬಾರಿಸಿದ ವಿಶ್ವದ ಮೂರನೇ ಬ್ಯಾಟ್ಸ್ಮನ್ ಮತ್ತು ಭಾರತದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಾಕಿಸ್ತಾನದ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ 351 ಸಿಕ್ಸರ್ಗಳೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.

50 ಓವರ್ಗಳ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಅಫ್ರಿದಿ ನಂತರ 301 ಸಿಕ್ಸರ್ ಸಿಡಿಸಿರುವ ವೆಸ್ಟ್ ಇಂಡೀಸ್ ದಿಗ್ಗಜ ಕ್ರಿಸ್ ಗೇಲ್ ಇದ್ದಾರೆ.

ಪ್ರಸ್ತುತ ಮೂರನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಆಡಿರುವ 254 ಏಕದಿನ ಇನ್ನಿಂಗ್ಸ್ಗಳಿಂದ 301 ಸಿಕ್ಸರ್ ಸಿಡಿಸಿದ್ದಾರೆ.

ಏಕದಿನದಲ್ಲಿ ಮೂರನೇ ಸ್ಥಾನದಲ್ಲಿರುವ ರೋಹಿತ್, ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಇದಲ್ಲದೆ ಎಲ್ಲಾ ಸ್ವರೂಪಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದವರ ವಿಷಯದಲ್ಲಿ ಗೇಲ್ ಅವರನ್ನು ಸಹ ಹಿಂದಿಕ್ಕಿದ್ದಾರೆ. ರೋಹಿತ್ ಶರ್ಮಾ ತಮ್ಮ ಇನ್ನಿಂಗ್ಸ್ನ ಮೂರನೇ ಸಿಕ್ಸರ್ ಬಾರಿಸಿದ ತಕ್ಷಣ ಈ ಮೈಲಿಗಲ್ಲು ಸಾಧಿಸಿದರು.




