ಸಿಕ್ಸರ್​ಗಳ ತ್ರಿಶತಕ ಸಿಡಿಸಿದ ರೋಹಿತ್; ಹಿಟ್​ಮ್ಯಾನ್ ಅಬ್ಬರಕ್ಕೆ ಹಳೆಯ ದಾಖಲೆಗಳೆಲ್ಲ ಉಡೀಸ್..!

Updated on: Oct 15, 2023 | 6:11 AM

Rohit Sharma Records: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಹಮದಾಬಾದ್‌ನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಬರೋಬ್ಬರಿ 6 ಸಿಕ್ಸರ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ 6 ಸಿಕ್ಸರ್​ಗಳ ಮೂಲಕ ರೋಹಿತ್ ಶರ್ಮಾ ಏಕದಿನದಲ್ಲಿ 300 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಮೂರನೇ ಬ್ಯಾಟ್ಸ್‌ಮನ್ ಮತ್ತು ಭಾರತದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

1 / 7
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಹಮದಾಬಾದ್‌ನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಬರೋಬ್ಬರಿ 6 ಸಿಕ್ಸರ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಹಮದಾಬಾದ್‌ನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಬರೋಬ್ಬರಿ 6 ಸಿಕ್ಸರ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

2 / 7

ಈ 6 ಸಿಕ್ಸರ್​ಗಳ ಮೂಲಕ ರೋಹಿತ್ ಶರ್ಮಾ ಏಕದಿನದಲ್ಲಿ 300 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಮೂರನೇ ಬ್ಯಾಟ್ಸ್‌ಮನ್ ಮತ್ತು ಭಾರತದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

3 / 7

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಾಕಿಸ್ತಾನದ ಬ್ಯಾಟ್ಸ್‌ಮನ್ ಶಾಹಿದ್ ಅಫ್ರಿದಿ 351 ಸಿಕ್ಸರ್‌ಗಳೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

4 / 7

50 ಓವರ್‌ಗಳ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಫ್ರಿದಿ ನಂತರ 301 ಸಿಕ್ಸರ್ ಸಿಡಿಸಿರುವ ವೆಸ್ಟ್ ಇಂಡೀಸ್ ದಿಗ್ಗಜ ಕ್ರಿಸ್ ಗೇಲ್ ಇದ್ದಾರೆ.

5 / 7

ಪ್ರಸ್ತುತ ಮೂರನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಆಡಿರುವ 254 ಏಕದಿನ ಇನ್ನಿಂಗ್ಸ್​ಗಳಿಂದ 301 ಸಿಕ್ಸರ್ ಸಿಡಿಸಿದ್ದಾರೆ.

6 / 7

ಏಕದಿನದಲ್ಲಿ ಮೂರನೇ ಸ್ಥಾನದಲ್ಲಿರುವ ರೋಹಿತ್, ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

7 / 7

ಇದಲ್ಲದೆ ಎಲ್ಲಾ ಸ್ವರೂಪಗಳಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದವರ ವಿಷಯದಲ್ಲಿ ಗೇಲ್ ಅವರನ್ನು ಸಹ ಹಿಂದಿಕ್ಕಿದ್ದಾರೆ. ರೋಹಿತ್ ಶರ್ಮಾ ತಮ್ಮ ಇನ್ನಿಂಗ್ಸ್‌ನ ಮೂರನೇ ಸಿಕ್ಸರ್ ಬಾರಿಸಿದ ತಕ್ಷಣ ಈ ಮೈಲಿಗಲ್ಲು ಸಾಧಿಸಿದರು.

Loading...
Unable to load recommendations.
Follow Us