- Kannada News Photo gallery Cricket photos India vs Pakistan in Champions Trophy 2025 Match Toss and Playing XI Update
IND vs PAK: ಟಾಸ್ ಗೆದ್ದ ಪಾಕಿಸ್ತಾನ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
India vs Pakistan in Champions Trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈವರೆಗೆ ಒಟ್ಟು 5 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಪಾಕಿಸ್ತಾನ್ ತಂಡ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ 2 ಪಂದ್ಯಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಇದಾಗ್ಯೂ ಕೊನೆಯ ಐದು ಏಕದಿನ ಪಂದ್ಯಗಳಲ್ಲಿ ಭಾರತದ ವಿರುದ್ಧ ಪಾಕ್ ತಂಡಕ್ಕೆ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.
Updated on: Feb 23, 2025 | 2:07 PM

ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಕದನ ಶುರುವಾಗಿದೆ. ದುಬೈನ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಾಕಿಸ್ತಾನ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.

ಇನ್ನು ಈ ಪಂದ್ಯಕ್ಕಾಗಿ ಭಾರತ ತಂಡವು ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಅದರಂತೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಬಳಗವೇ ಈ ಮ್ಯಾಚ್ನಲ್ಲೂ ಕಣಕ್ಕಿಳಿದಿದೆ. ಹೀಗಾಗಿ ಈ ಪಂದ್ಯದಲ್ಲೂ ಅರ್ಷದೀಪ್ ಸಿಂಗ್ ಕಾಣಿಸಿಕೊಳ್ಳುವುದಿಲ್ಲ.

ಭಾರತ ಮತ್ತು ಪಾಕಿಸ್ತಾನ್ ತಂಡಗಳು ಏಕದಿನ ಕ್ರಿಕೆಟ್ನಲ್ಲಿ ಇದುವರೆಗೆ 135 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 57 ಪಂದ್ಯಗಳಲ್ಲಿ ಮಾತ್ರ. ಅತ್ತ ಪಾಕಿಸ್ತಾನ್ ತಂಡ 73 ಪಂದ್ಯಗಳಲ್ಲಿ ಭಾರತದ ವಿರುದ್ಧ ಗೆಲುವು ದಾಖಲಿಸಿದೆ. ಇನ್ನು 5 ಮ್ಯಾಚ್ಗಳು ಕಾರಣಾಂತರಗಳಿಂದ ರದ್ದಾಗಿವೆ.

ಈ ಅಂಕಿ ಅಂಶಗಳ ಪ್ರಕಾರ ಪಾಕಿಸ್ತಾನ್ ತಂಡ ಮೇಲುಗೈ ಹೊಂದಿದ್ದರೂ, 2018 ರಿಂದ ಪಾಕ್ ಪಡೆ ಭಾರತದ ವಿರುದ್ಧ ಒಂದೇ ಒಂದು ಏಕದಿನ ಪಂದ್ಯ ಗೆದ್ದಿಲ್ಲ ಎಂಬುದು ವಿಶೇಷ. ಹೀಗಾಗಿ ಇಂದಿನ ಪಂದ್ಯದಲ್ಲೂ ಟೀಮ್ ಇಂಡಿಯಾವೇ ಗೆಲ್ಲುವ ಫೇವರೇಟ್ ತಂಡ ಎನಿಸಿಕೊಂಡಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ.

ಪಾಕಿಸ್ತಾನ್ ಪ್ಲೇಯಿಂಗ್ 11: ಬಾಬರ್ ಆಝಂ, ಇಮಾಮ್ ಉಲ್ ಹಕ್, ಸೌದ್ ಶಕೀಲ್, ಮೊಹಮ್ಮದ್ ರಿಝ್ವಾನ್ (ನಾಯಕ), ಸಲ್ಮಾನ್ ಅಘಾ, ತಯ್ಯಬ್ ತಾಹಿರ್, ಖುಶ್ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.



















